Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    10 ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ-ಸಿಎಂ ಸಿದ್ದರಾಮಯ್ಯ

    4 days ago

    ಕಲಬುರಗಿ, ಜನವರಿ, 12,2026 (www.justkannada.in): ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ  ವಿಶ್ವಾಸ ವ್ಯಕ್ತಪಡಿಸಿದರು. ಇಂದು ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಕಲಬುರಗಿ ಇವರ ಸಂಯುಕ್ತಾಶ್ರಯದಲ್ಲಿ ಕೆಪಿಎಸ್ ಶಾಲಾ ಆವರಣ ಯಡ್ರಾಮಿಯಲ್ಲಿ ಆಯೋಜಿಸಲಾಗಿದ್ದ ಪ್ರಜಾಸೌಧ. ಕೆಪಿಎಸ್ ಶಾಲೆ ಹಾಗೂ ವಿವಿಧ ಇಲಾಖೆಗಳ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಹಾಗೂ ಫಲಾನುಭವಿಗಳಿಗೆ ಸೌಲಭ್ಯಗಳ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ  ವಿವಿಧ ಇಲಾಖೆಗಳ ಕಾರ್ಯಕ್ರಮ ಗಳಿಗೆ […]

    The post 10 ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ-ಸಿಎಂ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.



    ಕಲಬುರಗಿ, ಜನವರಿ, 12,2026 (www.justkannada.in): ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ  ವಿಶ್ವಾಸ ವ್ಯಕ್ತಪಡಿಸಿದರು.

    ಇಂದು ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಕಲಬುರಗಿ ಇವರ ಸಂಯುಕ್ತಾಶ್ರಯದಲ್ಲಿ ಕೆಪಿಎಸ್ ಶಾಲಾ ಆವರಣ ಯಡ್ರಾಮಿಯಲ್ಲಿ ಆಯೋಜಿಸಲಾಗಿದ್ದ ಪ್ರಜಾಸೌಧ. ಕೆಪಿಎಸ್ ಶಾಲೆ ಹಾಗೂ ವಿವಿಧ ಇಲಾಖೆಗಳ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಹಾಗೂ ಫಲಾನುಭವಿಗಳಿಗೆ ಸೌಲಭ್ಯಗಳ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ  ವಿವಿಧ ಇಲಾಖೆಗಳ ಕಾರ್ಯಕ್ರಮ ಗಳಿಗೆ ಶಂಕುಸ್ಥಾಪನೆ ನೆರೆವೇರಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

    ನೂತನವಾಗಿ ಘೋಷಣೆಯಾಗಿರುವ ಯಡ್ರಾಮಿ ತಾಲ್ಲೂಕಿನಲ್ಲಿ, ಜೇವರ್ಗಿ ಮತಕ್ಷೇತ್ರದಲ್ಲಿ 87 ಕಾಮಗಾರಿಗಳ ಕಾಮಗಾರಿಗಳನ್ನು 867.49 ಕೋಟಿ ವೆಚ್ಚದ , 38.29 ಕೋಟಿ ವೆಚ್ಚ ಕಾಮಗಾರಿಗಳಿಗೆ ಉದ್ಘಾಟನೆ ಮಾಡಲಾಗಿದೆ. ಒಟ್ಟಾರೆ 906 ಕೋಟಿ ರೂ.ಗಳ ವೆಚ್ಚದಲ್ಲಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

    ರಾಜಕಾರಣಕ್ಕಾಗಿ ಸುಳ್ಳನ್ನು ಹೇಳುವ ವಿರೋಧ ಪಕ್ಷಗಳು

    ವಿರೋಧಪಕ್ಷದವರು ರಾಜಕಾರಣಕ್ಕಾಗಿ ಸುಳ್ಳನ್ನೇ ಹೇಳುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ಮೂಲಸೌಕರ್ಯ ಕಾಮಗಾರಿಗಳಿಗೆ ಸರ್ಕಾರದಲ್ಲಿ ಅನುದಾನವಿಲ್ಲ ಎಂದು ಎಲ್ಲೆಡೆ ಅಪಪ್ರಚಾರ ಮಾಡುತ್ತಿದ್ದಾರೆ. ಸರ್ಕಾರ ದಿವಾಳಿಯಾಗಿದ್ದರೆ ಜೇವರ್ಗಿ ಮತಕ್ಷೇತ್ರ ಒಂದರಲ್ಲಿ 906 ಕೋಟಿ ಗಳನ್ನು ವೆಚ್ಚ ಮಾಡಲಾಗುತ್ತಿರಲಿಲ್ಲ ಎಂದರು.

    1 ಲಕ್ಷದ 12 ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಅನುದಾನ ವೆಚ್ಚ ಮಾಡಲಾಗಿದೆ. ಚುನಾವಣೆ ಪೂರ್ವದಲ್ಲಿ ನೀಡಿದ್ದ ಆಶ್ವಾಸನೆಯಂತೆ ಅಧಿಕಾರಕ್ಕೆ ಬಂದ ಒಂದೇ ವರ್ಷದಲ್ಲಿ ಎಲ್ಲಾ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ. ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿದೆ ಎನ್ನುವುದನ್ನು ಜನ ಅರ್ಥ ಮಾಡಿಕೊಳ್ಳಬೇಕು. ನಮ್ಮ ಸರ್ಕಾರ ನುಡಿದಂತೆ ನಡೆದಿದೆ ಎಂದರು.

    ಕಳೆದ ಚುನಾವಣೆಯಲ್ಲಿ ನಮ್ಮ ಪಕ್ಷದ ವತಿಯಿಂದ 592 ಭರವಸೆಗಳನ್ನು ನೀಡಲಾಗಿತ್ತು. 243 ಭರವಸೆಗಳನ್ನು ಈಡೇರಿಸಲಾಗಿದೆ. ಉಳಿದ ಅವಧಿಯಲ್ಲಿ ಮಿಕ್ಕ ಭರವಸೆಗಳನ್ನು ಈಡೇರಿಸಲಾಗುವುದು ಎಂದರು.

    ಕಳೆದ ಬಾರಿ ನಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೇವೆ. ಪ್ರಣಾಳಿಕೆಯಲ್ಲಿ ಸೇರಿರದ  30 ಕಾರ್ಯಕ್ರಮಗಳನ್ನು  ಜಾರಿ ಮಾಡಲಾಗಿತ್ತು. ಎರಡೂವರೆ ವರ್ಷದಲ್ಲಿ ಕೊಟ್ಟ ಎಲ್ಲಾ ಭರವಸೆಗಳ ಜೊತೆಗೆ ಗ್ಯಾರಂಟಿ ಯೋಜನೆಗಳನ್ನು ಈಡೇರಿಸಲಾಗಿದೆ ಎಂದರು.

    ಬಿಜೆಪಿ 2018 ರಿಂದ ಅಧಿಕಾರದಲ್ಲಿದ್ದು, ಅವರು ನೀಡಿದ್ದ 600 ಭರವಸೆಗಳಲ್ಲಿ 10% ಭರವಸೆಗಳನ್ನು  ಈಡೇರಿಸಲಾಗಲಿಲ್ಲ ಎಂದು ತಿಳಿಸಿದರು.

    49 ತಾಲ್ಲೂಕುಗಳಲ್ಲಿ ಕೂಡ ಪ್ರಜಾಸೌಧ ಮಂಜೂರು

    ರಾಜ್ಯದಲ್ಲಿ 63 ಹೊಸ ತಾಲೂಕುಗಳನ್ನು ಘೋಷಣೆ ಮಾಡಲಾಗಿತ್ತು. 2018 ರಿಂದ 2023 ರವರೆಗೆ ನೂತನ ತಾಲ್ಲೂಕುಗಳಿಗೆ ಬಿಜೆಪಿ ಸೌಲಭ್ಯ  ಒದಗಿಸಿದ್ದು  ಕೇವಲ 14 ತಾಲ್ಲೂಕುಗಳಲ್ಲಿ ಮಾತ್ರ ಮಾಡಿದರು. 2023ರಲ್ಲಿ ಅಧಿಕಾರಕ್ಕೆ ಬಂದ ನಂತರ 49 ತಾಲ್ಲೂಕುಗಳಲ್ಲಿ ಕೂಡ ಪ್ರಜಾಸೌಧಗಳನ್ನು ಮಂಜೂರು ನಮ್ಮ ಸರ್ಕಾರ ಮಾಡಿದ್ದು, ನಿರ್ಮಾಣ ಮಾಡಲಾಗುವುದು ಎಂದರು.

    ಬಿಜೆಪಿ ವತಿಯಿಂದ ಕಲ್ಯಾಣ ಕರ್ನಾಟಕದಲ್ಲಿ 19 ತಾಲ್ಲೂಕುಗಳು ಮಂಜೂರಾಗಿದ್ದರೆ,  ಕೇವಲ ಎರಡು ಕಟ್ಟಡ ಮಾತ್ರ ನಿರ್ಮಾಣವಾಗಿದೆ. ನಮ್ಮ ಸರ್ಕಾರ 17 ತಾಲ್ಲೂಕುಗಳು ಮಂಜೂರಾಗಿದ್ದು, 97 ನಾಡ ಕಚೇರಿಗಳು ಮಂಜೂರಾಗಿವೆ. ಕಲ್ಯಾಣ ಕರ್ನಾಟಕದಲ್ಲಿ 39 ಕಚೇರಿಗಳನ್ನು ಮಂಜೂರು ಮಾಡಲಾಗಿದೆ. ಎರಡನೇ ಹಂತದಲ್ಲಿ 53 ನಿರ್ಮಾಣವಾಗಿವೆ. ಕಲ್ಯಾಣ ಕರ್ನಾಟಕದ 25 ತಾಲ್ಲೂಕುಗಳಲ್ಲಿ ನಾಡ ಕಚೇರಿಗಳನ್ನು ನಮ್ಮ ಸರ್ಕಾರ ಮಂಜೂರು  ಮಾಡಿದೆ ಎಂದರು.  ಬಿಜೆಪಿ ಕೇವಲ ಕೋಮುವಾದ ಮಾಡುವ ಕೆಲಸ ಮಾಡಿದೆ. ಕೋಮುವಾದ, ಹಿಂದುತ್ವ ಎಂದು ಜನರನ್ನು ತಪ್ಪು ದಾರಿಗೆಳೆಯುತ್ತಿದ್ದಾರೆ ಎಂದರು.

    ರೈತರ ಪರವಾದ ಸರ್ಕಾರ

    ಈ ಬಾರಿ ಮಳೆ ಹೆಚ್ಚಾಗಿ ಬೆಳೆ ಹಾನಿಯಾಗಿರುವುದರಿಂದ ವೈಮಾನಿಕ ಸಮೀಕ್ಷೆ ಕೈಗೊಂಡು ಪರಿಶೀಲಿಸಿ ಪರಿಹಾರ ಕೊಡಲು ನಿರ್ಧರಿಸಿ ಎಸ್ ಡಿ.ಆರ್.ಎಫ್ ನಿಂದ 1218 ಕೋಟಿ  ಜೊತೆಗೆ   ಸರ್ಕಾರದ ವತಿಯಿಂದ ಒಟ್ಟು 1031ಕೋಟಿ ಹೆಚ್ಚುವರಿಯಾಗಿ ಒದಗಿಸಲಾಗಿದೆ. ರಾಜ್ಯದಲ್ಲಿ ಒಟ್ಟು  14.21 ಲಕ್ಷ ರೈತರ ಬೆಳೆ ಹಾನಿಯಾಗಿದ್ದು, ಕಲ್ಯಾಣ ಕರ್ನಾಟಕ ಭಾಗದಲ್ಲಿ 7,21,786 ರೈತರ ಬೆಳೆ ಹಾನಿಗೊಳಗಾಗಿದೆ. 1072 ಕೋಟಿ ಬೆಳೆ ಹಾನಿಗೆ ಪರಿಹಾರ ನೀಡಿದೆ. ಕಲಬುರ್ಗಿ ಜಿಲ್ಲೆಯಲ್ಲಿ  3,23,318 ರೈತರ ಬೆಳೆ ಹಾನಿಯಾಗಿದ್ದು 498 ಕೋಟಿ ಪರಿಹಾರ ನೀಡಲಾಗಿದೆ ಎಂದರು.

    ರೈತರ ಖಾತೆಗಳಿಗೆ ಅನುದಾನವನ್ನು ತಲುಪಿಸುವ ಕೆಲಸ ಮಾಡಿದ್ದೇವೆ. ರೈತರ ಸಹಾಯಕ್ಕೆ ಸರ್ಕಾರ ಸದಾ ಮುಂದಾಗಿದೆ.  ನೆಟ್ಟೆ ರೋಗಕ್ಕೆ ತುತ್ತಾದ ತೊಗರಿ ಬೆಳೆಗೆ 233 ಕೋಟಿ ರೂ. ಗಳನ್ನು ಒದಗಿಸಲಾಗಿದೆ. ಕಬ್ಬಿನ ಬೆಲೆ ಕಡಿಮೆ ಎಂದು ರೈತರು ಪ್ರತಿಭಟಿಸಿದಾಗ ಅವರ ನೆರವಿಗೆ ಸರ್ಕಾರ ಧಾವಿಸಿ ಸರ್ಕಾರದಿಂದ 50 ಹಾಗೂ ಕಾರ್ಖಾನೆಯಿಂದ 50 ರೂ. ನಿಗದಿ ಮಾಡಿ 300 ಕೋಟಿ ಗಳನ್ನು ಸರ್ಕಾರದಿಂದ ಕಬ್ಬಿನ ಬೆಳೆಗಾರರಿಗೆ ನೀಡಲಾಗಿದೆ  ಎಂದರು.

    371ಜೆ ಜಾರಿಯಾಗಿದ್ದು ಕಾಂಗ್ರೆಸ್ ಸರ್ಕಾರದಿಂದ

    ಬಿಜೆಪಿಯ ಗೃಹ ಸಚಿವ ಹಾಗೂ ಉಪಪ್ರಧಾನಿಯಾಗಿದ್ದ ಅಡ್ವಾಣಿ ಯವರು 371ಜೆ ಜಾರಿ ಮಾಡಲು ಸಾಧ್ಯವಿಲ್ಲ ಎಂದಿದ್ದರು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಇದನ್ನು ಜಾರಿ ಮಾಡಿದರು.  ಮಲ್ಲಿಕಾರ್ಜುನ ಖರ್ಗೆ ಹಾಗೂ ಧರಂ ಸಿಂಗ್ ಹೋರಾಟದಿಂದ ಇದು ಸಾಧ್ಯವಾಯಿತು ಎಂದರು. ಇದರಿಂದಾಗಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ರಚನೆಯಾಯಿತು. 13,000 ಕೋಟಿ ರೂ. ಗಳನ್ನು ಮೂರು ವರ್ಷಗಳಲ್ಲಿ ಒದಗಿಸಲಾಗಿದ್ದು, ಈ ವರ್ಷದಲ್ಲಿ 3000 ಕೋಟಿ ರೂ. ಒದಗಿಸಲಾಗಿದೆ ಎಂದರು.

    300 ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಅಡಿಗಲ್ಲು ಹಾಕಲಾಗಿದೆ

    ಶಾಸಕ ಅಜಯ್ ಸಿಂಗ್ ಅವರು ಅನುದಾನವನ್ನು ಪೂರ್ಣವಾಗಿ ವೆಚ್ಚ ಮಾಡಬೇಕು.  ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಬೇಕೆಂದು ಅಜಯ್ ಸಿಂಗ್ ಅವರಿಗೆ ತಿಳಿಸಲಾಗಿತ್ತು. ಅದರಂತೆ 300 ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಅಡಿಗಲ್ಲು ಹಾಕಲಾಗಿದೆ. ರಾಜ್ಯದಲ್ಲಿ  ಒಟ್ಟು 900 ರಾಜ್ಯಕ್ಕೆ ಕೆಪಿಎಸ್ ಮಂಜೂರಾಗಿದೆ.

    371ಜೆ ಜಾರಿಯಲ್ಲಿ ಬಿಜೆಪಿಯ ಪಾತ್ರವಿಲ್ಲ

    ಬಿಜೆಪಿ ಕೇವಲ  ಸುಳ್ಳು ಆರೋಪಗಳನ್ನು ಮಾತ್ರ ಮಾಡುತ್ತದೆ. 371ಜೆ ಜಾರಿಯಾಗಿದ್ದರೆ  ಅದಕ್ಕೆ ಕಾರಣ ಮಲ್ಲಿಕಾರ್ಜುನ ಖರ್ಗೆ, ಧರಂ ಸಿಂಗ್ ಅವರು ಕಾರಣ. ಇದರಲ್ಲಿ ಬಿಜೆಪಿಯ ಪಾತ್ರವಿಲ್ಲ. ಬಿಜೆಪಿ ಬೊಗಳೆದಾಸರು, ಸುಳ್ಳು ಹೇಳುವುದು, ಅಪಪ್ರಚಾರ ಬಿಟ್ಟರೆ ಬೇರೇನೂ ಮಾಡುವುದಿಲ್ಲ ಎಂದರು.

    ಅಸಮಾನತೆ ಹೋಗಲಾಡಿಸಲು ನಂಜುಂಡಪ್ಪ ಅವರ ವರದಿಯನ್ನು ಆಧರಿಸಿ ಶಿಫಾರಸ್ಸುಗಳನ್ನು ಜಾರಿಗೆ ತರಲಾಗಿದೆ. ಇದರ ಪರಿಣಾಮಗಳ ಬಗ್ಗೆ ವರದಿ ಸಲ್ಲಿಸಲು ಗೋವಿಂದ ರಾವ್ ಸಮಿತಿ ರಚಿಸಲಾಗಿದೆ. ಶೀಘ್ರದಲ್ಲಿ ವರದಿಯ ಶಿಫಾರಸುಗಳನ್ನು ಜಾರಿ ಮಾಡಲಾಗುವುದು ಎಂದರು.

    ಎಐಸಿಸಿ ಅಧ್ಯಕ್ಷರು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಡಿ.ಕೆ. ಶಿವಕುಮಾರ್, ಸಚಿವರಾದ ಪ್ರಿಯಾಂಕ್ ಖರ್ಗೆ, ಕೃಷ್ಣಭೈರೇಗೌಡ, ಚನ್ನಬಸಪ್ಪ ದರ್ಶನಾಪುರ, ಶರಣ ಪ್ರಕಾಶ್ ಪಾಟೀಲ್, ಮಧು ಬಂಗಾರಪ್ಪ, ರಹೀಂ ಖಾನ್, ಶಾಸಕರು ಉಪಸ್ಥಿತರಿದ್ದರು.

    Key words:  equality, Kalyan Karnataka, 10 years, CM Siddaramaiah

     

    The post 10 ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ-ಸಿಎಂ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

    Click here to Read More
    Previous Article
    ಸಾರ್ವಜನಿಕರಿಗೆ ಯೋಜನೆಗಳ ಪ್ರಸ್ತಾವನೆ ಸಲ್ಲಿಸಲು ಸಿದ್ಧತೆ ಮಾಡಿಕೊಳ್ಳಿ- ಸಚಿವ ಹೆಚ್.ಸಿ ಮಹದೇವಪ್ಪ
    Next Article
    ದಲಿತ ಮಹಿಳೆ ಮೇಲೆ ದೌರ್ಜನ್ಯ ಪ್ರಕರಣ : ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಎಸ್ಪಿ ಕಚೇರಿಗೆ ಮುತ್ತಿಗೆ

    Related ಮುಖಪುಟ Updates:

    Are you sure? You want to delete this comment..! Remove Cancel

    Comments (0)

      Leave a comment