ಸೆಪ್ಟೆಂಬರ್ 30 ರವರೆಗೆ ಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ

5 months ago

41

0

ದಾವಣಗೆರೆ, ಮೇ.06 :  ಜಿಲ್ಲೆಯ 5 ರಿಂದ 7 ವರ್ಷ ಹಾಗೂ 15 ರಿಂದ 17 ವರ್ಷದ ವಯೋಮಿತಿಯ ಮಕ್ಕಳಿಗೆ ಕಡ್ಡಾಯ ಬಯೋಮೆಟ್ರಿಕ್ ಅಪ್‌ಡೇಟ್ (Mandatory Biometric Update) ಮಾಡಿಸಲು  ಜಿಲ್ಲಾಡಳಿತವು ವಿಶೇಷ ಅವಕಾಶ  ಕಲ್ಪಿಸಿದೆ. ಜಿಲ್ಲೆಯ ಎಲ್ಲಾ ಆಧಾರ್ ಕೇಂದ್ರಗಳಲ್ಲಿ ಸೆಪ್ಟೆಂಬರ್ 30, 2026 ರವರೆಗೆ ಈ ಸೇವೆಯು ಸಂಪೂರ್ಣ ಉಚಿತವಾಗಿ ಲಭ್ಯವಿರಲಿದೆ. ಆಧಾರ್ ನಿಯಮಗಳ ಪ್ರಕಾರ, ಮಕ್ಕಳಿಗೆ 5 ಮತ್ತು 15 ವರ್ಷ ತುಂಬಿದಾಗ ಬಯೋಮೆಟ್ರಿಕ್ ವಿವರಗಳನ್ನು ನವೀಕರಿಸುವುದು ಕಡ್ಡಾಯವಾಗಿದೆ. ಈ ನವೀಕರಣದಿಂದ ಶಾಲಾ ದಾಖಲಾತಿ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳು, ವಿದ್ಯಾರ್ಥಿ ವೇತನ ಹಾಗೂ ಸರ್ಕಾರದ ವಿವಿಧ ಜನಕಲ್ಯಾಣ ಯೋಜನೆಗಳ ಸೌಲಭ್ಯ ಪಡೆಯಲು ಅನುಕೂಲವಾಗಲಿದೆ. Read also : ಸ್ಟಾಂಗ್ ರೂಂ ಬೀಗ ಒಡೆದ ಪ್ರಕರಣ: ರಾಜ್ಯ-ಕೇಂದ್ರ ಚುನಾವಣಾ ಆಯೋಗಕ್ಕೆ ಆಪ್‌ನಿಂದ ದೂರು ಪೋಷಕರು ತಮ್ಮ ಮಕ್ಕಳ ಆಧಾರ್ ಕಾರ್ಡ್ ಮತ್ತು ಪೂರಕ ದಾಖಲೆಗಳೊಂದಿಗೆ ಹತ್ತಿರದ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಜಿಲ್ಲೆಯ ಎಲ್ಲಾ ಪೋಷಕರು ಈ ಜವಾಬ್ದಾರಿಯನ್ನು ಅರಿತು, ನಿಗದಿತ ಅವಧಿಯೊಳಗೆ ತಮ್ಮ ಮಕ್ಕಳ ಆಧಾರ್ ನವೀಕರಿಸುವ ಮೂಲಕ ಸರ್ಕಾರದ ಯೋಜನೆಗಳು ತಲುಪಲು ಸಹಕರಿಸಬೇಕೆಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ದಕ್ಷಿಣಕ್ಕೆ ಸೂಪರ್ ಸ್ಪೆಷಲಿಟಿ ಆಸ್ಪತ್ರೆ ಮತ್ತು ಕಾಲೇಜು ಮಂಜೂರಾತಿಗೆ ಕೆ.ಅಬ್ದುಲ್ ಜಬ್ಬಾರ್ ಮನವಿ
Next Article
DMK ಬೆನ್ನಿಗೆ ಚೂರಿ ಹಾಕಿ ಕಾಂಗ್ರೆಸ್ ಗೆದ್ದೆತ್ತಿನ ಬಾಲ ಹಿಡಿದಿದೆ-ಆರ್.ಅಶೋಕ್ ವ್ಯಂಗ್ಯ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment