ಜನವರಿ ಒಂದರಿಂದ ಮೂವತ್ತೊಂದರವರೆಗೂ ಒಂದು ತಿಂಗಳ ಕಾಲ ರಾಜ್ಯಾದ್ಯಂತ ರಸ್ತೆ ಸುರಕ್ಷತಾ ಸಪ್ತಾಹ ಮಾಸಾಚರಣೆ ಆಚರಿಸುವ ಮೂಲಕ ಸಾರ್ವಜನಿಕರಿಗೆ ರಸ್ತೆ ಸುರಕ್ಷತೆಯ ಕುರಿತು ಅರಿವು ಮೂಡಿಸಲಾಗುವುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಸುಬ್ರಹ್ಮಣ್ಯ ಜೆ.ಎನ್ ತಿಳಿಸಿದರು. ಮಂಡ್ಯ ಜಿಲ್ಲಾ ನ್ಯಾಯಾಲಯ ವಿಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2019 ರಿಂದ 2025 ವರೆಗೂ 2.13.292 ಅಪಘಾತ ಪ್ರಕರಣಗಳು ರಾಜ್ಯದಲ್ಲಿ ದಾಖಲಾಗಿದೆ. ಕಳೆದ 6 […]
The post ರಾಜ್ಯಾದ್ಯಂತ ರಸ್ತೆ ಸುರಕ್ಷತಾ ಸಪ್ತಾಹ ಮಾಸಾಚರಣೆ – ಸುಬ್ರಹ್ಮಣ್ಯ appeared first on nudikarnataka.
ಜನವರಿ ಒಂದರಿಂದ ಮೂವತ್ತೊಂದರವರೆಗೂ ಒಂದು ತಿಂಗಳ ಕಾಲ ರಾಜ್ಯಾದ್ಯಂತ ರಸ್ತೆ ಸುರಕ್ಷತಾ ಸಪ್ತಾಹ ಮಾಸಾಚರಣೆ ಆಚರಿಸುವ ಮೂಲಕ ಸಾರ್ವಜನಿಕರಿಗೆ ರಸ್ತೆ ಸುರಕ್ಷತೆಯ ಕುರಿತು ಅರಿವು ಮೂಡಿಸಲಾಗುವುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಸುಬ್ರಹ್ಮಣ್ಯ ಜೆ.ಎನ್ ತಿಳಿಸಿದರು.
ಮಂಡ್ಯ ಜಿಲ್ಲಾ ನ್ಯಾಯಾಲಯ ವಿಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2019 ರಿಂದ 2025 ವರೆಗೂ 2.13.292 ಅಪಘಾತ ಪ್ರಕರಣಗಳು ರಾಜ್ಯದಲ್ಲಿ ದಾಖಲಾಗಿದೆ. ಕಳೆದ 6 ವರ್ಷಗಳಲ್ಲಿ 60 ಸಾವಿರಕ್ಕೂ ಹೆಚ್ಚು ಜನರು ರಸ್ತೆ ಅಪಘಾತದಲ್ಲಿ ಪ್ರಾಣ ಚೆಲ್ಲಿದ್ದಾರೆ ಎಂದು ತಿಳಿಸಿದರು.
ಮಧ್ಯ ಸೇವಿಸಿ ವಾಹನ ಚಲಾವಣೆ, ಅತಿ ವೇಗವಾಗಿ ವಾಹನ ಚಲಾವಣೆಯಿಂದ ರಸ್ತೆ ಅಪಘಾತ ಪ್ರಕರಣಗಳಲ್ಲಿ ಶೇ 28% ರಷ್ಟು ಪಾದಚಾರಿಗಳು ಮೃತಪಟ್ಟಿದ್ದಾರೆ. ಜನರಿಗೆ ರಸ್ತೆ ಸುರಕ್ಷತೆಯ ಕುರಿತು ಜಾಗೃತಿ ಮೂಡಿಸುವ ದೃಷ್ಟಿಯಿಂದ ಒಂದು ತಿಂಗಳ ಕಾಲ ರಸ್ತೆ ಸುರಕ್ಷತಾ ಸಪ್ತಹ ಮಾಸಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಶಾಲಾ ಕಾಲೇಜು, ಆಸ್ಪತ್ರೆ ಹಾಗೂ ಇನ್ನಿತರ ಸ್ಥಳಗಳಲ್ಲಿ ರಸ್ತೆ ಸುರಕ್ಷತೆಯ ಕುರಿತು ಜಾಗೃತಿ ಮೂಡಿಸಲಾಗುವುದು ಎಂದು ಹೇಳಿದರು.
ವಾಹನಗಳ ಚಾಲಕರಿಗೆ ರಸ್ತೆ ಸುರಕ್ಷತಾ ನಿಯಮಗಳ ಕುರಿತು ಅರಿವು ಇರಬೇಕು. ರಾಜ್ಯದಲ್ಲಿ ಕಳೆದ ಒಂದು ವರ್ಷದಲ್ಲಿ 33,000ಕ್ಕೂ ಹೆಚ್ಚು ಅಪಘಾತ ಪ್ರಕರಣಗಳು ದಾಖಲಾಗಿದ್ದು 12,000ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಎಷ್ಟೋ ಪ್ರಕರಣಗಳಲ್ಲಿ ಅಪ್ರಾಪ್ತರ ವಾಹನ ಚಲಾವಣೆಯಿಂದ ಸಾವು ನೋವು ಸಂಭವಿಸಿದೆ. ಯುವಕರಿಗೆ ಕಾನೂನಿನ ಅರಿವಿನ ಕೊರತೆ ಇದೆ ಜಿಲ್ಲೆಯ ಎಲ್ಲಾ ಯುವಕರಿಗೂ ಕಾನೂನು ಅರಿವು ಹಾಗೂ ರಸ್ತೆ ಸುರಕ್ಷತಾ ನಿಯಮಗಳ ಕುರಿತು ಜಾಗೃತಿ ಮೂಡಿಸಬೇಕು ಎಂದು ಹೇಳಿದರು.
ಸದರಿ ವರ್ಷ ರಸ್ತೆ ಅಪಘಾತಗಳಲ್ಲಿ ಮೃತಪಟ್ಟ 12000 ಜನರಲ್ಲಿ ಶೇ 60 ರಷ್ಟು ಜನರು ಕುಟುಂಬದ ಮುಖ್ಯಸ್ಥರಾಗಿದ್ದರು. ರಸ್ತೆ ಸುರಕ್ಷತಾ ನಿಯಮ ಪಾಲಿಸದೆ ಇದುದ್ದರಿಂದ ಒಂದು ಕುಟುಂಬವೆ ನಷ್ಠ ಅನುಭವಿಸುತ್ತಿವೆ. ರಸ್ತೆ ಸುರಕ್ಷತೆಯ ಕುರಿತು ರಾಜ್ಯದಲ್ಲಿ ಅತಿ ಹೆಚ್ಚು ಕಾರ್ಯಕ್ರಮಗಳನ್ನು ರೂಪಿಸಿದ ಜಿಲ್ಲೆಗೆ ರಾಜ್ಯಮಟ್ಟದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶರಾದ ಆನಂದ್ ಎಂ ಅವರು ಮಾತನಾಡಿ ಯುವಕರ ಉತ್ಸಾಹದ ವಾಹನ ಚಲಾವಣೆಗೆ ಅನೇಕರು ಬಲಿಯಾಗುತ್ತಿದ್ದಾರೆ. ಪೋಷಕರು ತಮ್ಮ ಮಕ್ಕಳ ಕುರಿತು ಎಚ್ಚರಿಕೆ ವಹಿಸಬೇಕು. ಅಪ್ರಪ್ತ ಮಕ್ಕಳಿಗೆ ಹಾಗೂ ವಾಹನ ಚಲಾವಣೆ ಪರವಾನಿಗೆ ಇಲ್ಲದವರಿಗೆ ವಾಹನಗಳನ್ನು ನೀಡಬಾರದು. ಸಾರ್ವಜನಿಕರು ಸಾಧ್ಯವಾದಷ್ಟು ಸಾರ್ವಜನಿಕ ಸೇವಾ ವಾಹನಗಳನ್ನು ಬಳಸಿದರೆ ಅಪಘಾತ ಪ್ರಕರಣಗಳನ್ನು ತಪ್ಪಿಸಬಹುದು ಎಂದರು.
ರಸ್ತೆ ಸುರಕ್ಷತಾ ನಿಯಮಗಳ ಕುರಿತು ಕುರಿತು ಅರಿವು ಮೂಡಿಸಲು ಹೈ ಸ್ಕೂಲ್, ಪಿಯುಸಿ ಹಾಗೂ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಬೇಕು. ಮಕ್ಕಳಿಗೆ ರಸ್ತೆ ಸುರಕ್ಷತೆಯ ಕುರಿತು ಆಶುಭಾಷಣ, ಕ್ವಿಜ್, ಚಿತ್ರಕಲೆ ಹೇಗೆ ಮುಂತಾದ ಕಾರ್ಯಕ್ರಮಗಳನ್ನು ಶಾಲಾ ಕಾಲೇಜುಗಳಲ್ಲಿ ರೂಪಿಸುವ ಮೂಲಕ ಜಾಗೃತಿ ಮೂಡಿಸಬೇಕು. ಬ್ಯಾಂಕುಗಳು, ಜಿಲ್ಲಾ ವಕೀಲರ ಸಂಘಗಳು, ವಿಮಾ ಸಂಸ್ಥೆಗಳು ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆಯ ಮತ್ತು ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಬ್ಲಡ್ ಕ್ಯಾಂಪ್, ಜಾಗೃತಿ ಜಾಥಾ ಸೇರಿದಂತೆ ಇನ್ನಿತರ ಜಾಗೃತಿ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಹೇಮಾವತಿ, ಶಿಕ್ಷಣ ಇಲಾಖೆಯ ಅಧಿಕಾರಿಗಳು ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
The post ರಾಜ್ಯಾದ್ಯಂತ ರಸ್ತೆ ಸುರಕ್ಷತಾ ಸಪ್ತಾಹ ಮಾಸಾಚರಣೆ – ಸುಬ್ರಹ್ಮಣ್ಯ appeared first on nudikarnataka.
Previous Article
ಮೈಸೂರಿನಲ್ಲಿ ಕಾನೂನು ವಿಶ್ವವಿದ್ಯಾಲಯದ ಪ್ರಾದೇಶಿಕ ಕಚೇರಿ ಸ್ಥಾಪಿಸಲು ಮನವಿ
Next Article
ಮಂಡ್ಯ | ಶಾಸಕ ರವಿಕುಮಾರ್ ಹುಟ್ಟುಹಬ್ಬ ; ಉಪಹಾರ ವಿತರಣೆ – ರಕ್ತದಾನ