Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಬಾಲ್ಯ ವಿವಾಹ ಮತ್ತು ಶಾಲೆಯಿಂದ ಮಕ್ಕಳು ಹೊರಗುಳಿಯದಂತೆ ಕ್ರಮವಹಿಸಿ :ಅಪರ್ಣಾ ಎಂ ಕೊಳ್ಳಾ

    2 weeks ago

    ದಾವಣಗೆರೆ ಜ.02: ಜಿಲ್ಲೆಯಲ್ಲಿ ಆಗುತ್ತಿರುವ ಬಾಲ್ಯ ವಿವಾಹ ಮತ್ತು ಶಾಲೆಯಿಂದ ಹೊರಗುಳಿದಿರುವ ಮಕ್ಕಳ ಬಗ್ಗೆ ನಿಗವಹಿಸಿ ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಬೇಕು, ತಪ್ಪಿದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮವಹಿಸಲಾಗುವುದು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಅಪರ್ಣಾ ಎಂ ಕೊಳ್ಳಾ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾರ್ಮಿಕ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ […]

    ದಾವಣಗೆರೆ ಜ.02: ಜಿಲ್ಲೆಯಲ್ಲಿ ಆಗುತ್ತಿರುವ ಬಾಲ್ಯ ವಿವಾಹ ಮತ್ತು ಶಾಲೆಯಿಂದ ಹೊರಗುಳಿದಿರುವ ಮಕ್ಕಳ ಬಗ್ಗೆ ನಿಗವಹಿಸಿ ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಬೇಕು, ತಪ್ಪಿದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮವಹಿಸಲಾಗುವುದು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಅಪರ್ಣಾ ಎಂ ಕೊಳ್ಳಾ ತಿಳಿಸಿದರು.
    ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾರ್ಮಿಕ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ವತಿಯಿಂದ ಶುಕ್ರವಾರ ನಗರದ ಈಶ್ವರಮ್ಮ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದ್ದ ಆರ್.ಟಿ.ಇ ಅನುಷ್ಠಾನ ಮತ್ತು ಪ್ರಗತಿ ಪರಿಶೀಲನಾ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

    ಬಾಲ್ಯ ವಿವಾಹ ಮುಕ್ತ ಭಾರತ-2030 ಅನ್ನು ಗುರಿಯಿಟ್ಟುಕೊಂಡು ಶಾಲಾ ಶಿಕ್ಷಣ ಇಲಾಖೆ ಕಾರ್ಯ ನಿರ್ವಹಿಸಬೇಕಾಗಿದೆ ಇದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಜಿಲ್ಲೆಯಲ್ಲಿ ಒಂದನೇ ತರಗತಿಯಿಂದ ಹತ್ತನೇ ತರಗತಿಯವರೆಗೆ ಒಟ್ಟಾರೆ 820 ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ, ಪ್ರಾಥಮಿಕ ಶಾಲೆಯಿಂದ ತೇರ್ಗಡೆಯಾಗಿ ಪ್ರೌಡಶಾಲೆಗೆ ಪ್ರವೇಶ ಪಡೆದಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು ಒಂದು ವೇಳೆ ಶಾಲೆಯಲ್ಲಿ ಪ್ರವೇಶ ಪಡೆಯದೆ ಹೊರಗುಳಿದಿದ್ದಲ್ಲಿ ಸಕಾರಣಗಳನ್ನು ತಿಳಿದು ಆ ಮಗುವು ಶಾಲೆಗೆ ಪುನಃ ಪ್ರವೇಶ ಪಡೆಯುವಂತೆ ಮಾಡಬೇಕು, ಈ ಬಗ್ಗೆ ಅಧಿಕಾರಿಗಳು ಕೂಡಲೇ ಕ್ರಮವಹಿಸಬೇಕು ಎಂದರು.

    ಜಿಲ್ಲೆಯಲ್ಲಿರುವ ವಸತಿ ರಹಿತ ಮತ್ತು ವಸತಿ ಸಹಿತ ಶಾಲೆಗಳ ಬಗ್ಗೆ ಮಾಹಿತಿಯನ್ನು ಪಡೆಯಬೇಕು, ನವೀಕರಣಗೊಳ್ಳದ ವಸತಿ ರಹಿತ ಮತ್ತು ವಸತಿ ಸಹಿತ ಶಾಲೆಗಳ ವಿರುದ್ಧ ಕ್ರಮವಹಿಸಬೇಕು ಮತ್ತು ಸ್ಪರ್ಧಾತ್ಮಕ ತರಬೇತಿ ಕೇಂದ್ರಗಳ ಮಾಹಿತಿಯನ್ನು ಪಡೆದು ಆಯೋಗಕ್ಕೆ ಮೂರು ದಿನಗಳಲ್ಲಿ ಸಲ್ಲಿಸಬೇಕು ಅವರು ಕಡ್ಡಾಯವಾಗಿ ಶಿಕ್ಷಣ ಇಲಾಖೆಯಲ್ಲಿ ನೊಂದಾಯಿಸಿಕೊAಡಿರಬೇಕು, ನವೋದಯ, ಕಿತ್ತೂರು ರಾಣಿ ಚೆನ್ನಮ್ಮ, ಮುರಾರ್ಜಿ ಮತ್ತು ಅಬ್ದುಲ್ ಕಲಾಂ ವಸತಿ ಶಾಲೆಗಳಿಗೆ ಪ್ರವೇಶ ಪಡೆಯುವಂತಹ ಮಕ್ಕಳಿಗೆ ಪ್ರವೇಶ ಪರೀಕ್ಷೆಗೆ ಹಾಜರಾಗಲು ವಿಶೇಷ ತರಗತಿಗಳನ್ನು ಆಯೋಜಿಸಿ ತರಬೇತಿ ನೀಡಬೇಕು ಎಂದರು.

    ಒAದನೇ ತರಗತಿಯಿಂದ ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪ.ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳ ಬಗ್ಗೆ ಮಾಹಿತಿ ಕಲೆಹಾಕಿ ಅವರ ವ್ಯಾಸಂಗದ ಬಗ್ಗೆ ಅರಿತು ಅವರುಗಳಿಗೆ ವಿಶೇಷ ತರಗತಿಗಳನ್ನು ಏರ್ಪಡಿಸಬೇಕು, ಜಿಲ್ಲೆಯಲ್ಲಿರುವ ಎಲ್ಲಾ ಮಕ್ಕಳ ಆಧಾರ್ ಸಿಡಿಂಗ್ ಮಾಡಿಸಿ ಅಪಾರ್ ತಂತ್ರಾAಶದಲ್ಲಿ ನೊಂದಾಯಿಸಲು ಕ್ರಮವಹಿಸಬೇಕು ಜಿಲ್ಲೆಯಲ್ಲಿ ಇನ್ನು 58000 ಮಕ್ಕಳ ಆಧಾರ್ ಲಿಂಕ್ ಆಗಿರುವುದಿಲ್ಲ ಕೂಡಲೇ ಕ್ರಮವಹಿಸಬೇಕು ಎಂದರು.
    ಎಲ್ಲಾ ಶಾಲೆಗಳಲ್ಲಿ ಶೌಚಾಲಯಗಳಿದ್ದು ಬಹುತೇಕ ಶಾಲೆಗಳಲ್ಲಿ ಬಳಕೆಯಾಗುತ್ತಿಲ್ಲ ಕೆಲವು ಶಾಲೆಗಳಲ್ಲಿ ಇರುವ ಶೌಚಾಲಯಗಳು ದುರಸ್ಥಿಗೆ ಬಂದಿದ್ದು ತ್ವರಿತವಾಗಿ ದುರಸ್ಥಿಪಡಿಸಿ ಬಳಕೆಗೆ ನೀಡುವಂತೆ ತಾಕಿತು ಮಾಡಿದರು, ಶೌಚಾಲಯಗಳ ನಿರ್ವಹಣೆ ಮಾಡದೇ ಇದ್ದರೆ ಸಂಬAಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮವಹಿಸಲಾಗುವುದು, ಹತ್ತನೇ ತರಗತಿಯಲ್ಲಿ ಕಳೆದ ಬಾರಿ ಶೇ.80.55 ರಷ್ಟು ಮಕ್ಕಳು ತೇರ್ಗಡೆಹೊಂದಿದ್ದು ಇನ್ನು ಹೆಚ್ಚು ಪ್ರಗತಿಯನ್ನು ಸಾಧಿಸಿ , ಜಿಲ್ಲೆಯು ಪ್ರಥಮ ಸ್ಥಾನದಲ್ಲಿ ಬರುವಂತೆ ಅಧಿಕಾರಿಗಳು ಮತ್ತು ಶಿಕ್ಷಕರು ಕ್ರಮವಹಿಸಬೇಕು ಎಂದು ತಿಳಿಸಿದರು.
    ಸಭೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೊಟ್ರೇಶ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕವಿತಾ , ಬಿಇಒಗಳು ಹಾಗೂ ಇತರರು ಉಪಸ್ಥಿತರಿದ್ದರು.
    Click here to Read More
    Previous Article
    ಜ.3- ಭೂಮಿಗೆ ಸೂರ್ಯ ಚಂದ್ರರ ಬಲು ಅಪರೂಪದ ಸಂಗಮ
    Next Article
    ಮಕ್ಕಳ ಹಕ್ಕುಗಳಿಗೆ ಶ್ರೀರಕ್ಷೆಯಾಗಿದೆ ಮಕ್ಕಳ ರಕ್ಷಣಾ ಆಯೋಗ : ಅಪರ್ಣಾ ಎಂ ಕೊಳ್ಳ

    Related ತಾಜಾ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment