Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಮಕ್ಕಳ ಹಕ್ಕುಗಳಿಗೆ ಶ್ರೀರಕ್ಷೆಯಾಗಿದೆ ಮಕ್ಕಳ ರಕ್ಷಣಾ ಆಯೋಗ : ಅಪರ್ಣಾ ಎಂ ಕೊಳ್ಳ

    2 weeks ago

    ಸುದ್ದಿದಿನ,ದಾವಣಗೆರೆ:ಯಾವುದೇ ಒಂದು ಮಗುವು ತನ್ನ ತಾಯಿಯ ಗರ್ಭದಲ್ಲಿರುವಾಗಲೇ ಮಗುವಿನ ಹಕ್ಕುಗಳು ಆರಂಭವಾಗುತ್ತವೆ. ಅವರ ಹಕ್ಕುಗಳ ರಕ್ಷಣೆಗಾಗಿಯೇ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ರಚಿಸಲಾಗಿದೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಅಪರ್ಣಾ ಎಂ ಕೊಳ್ಳ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾರ್ಮಿಕ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ವತಿಯಿಂದ ಶುಕ್ರವಾರ ನಗರದ […]

    ಸುದ್ದಿದಿನ,ದಾವಣಗೆರೆ:ಯಾವುದೇ ಒಂದು ಮಗುವು ತನ್ನ ತಾಯಿಯ ಗರ್ಭದಲ್ಲಿರುವಾಗಲೇ ಮಗುವಿನ ಹಕ್ಕುಗಳು ಆರಂಭವಾಗುತ್ತವೆ. ಅವರ ಹಕ್ಕುಗಳ ರಕ್ಷಣೆಗಾಗಿಯೇ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ರಚಿಸಲಾಗಿದೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಅಪರ್ಣಾ ಎಂ ಕೊಳ್ಳ ತಿಳಿಸಿದರು.

    ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾರ್ಮಿಕ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ವತಿಯಿಂದ ಶುಕ್ರವಾರ ನಗರದ ಎ. ವಿ.ಕೆ ಕಾಲೇಜ್ ರಸ್ತೆಯಲ್ಲಿನ ಗುರುಭವನದಲ್ಲಿ ಆಯೋಜಿಸಲಾಗಿದ್ದ ನಿಮ್ಮ ಹಕ್ಕು ನಿಮ್ಮ ಧ್ವನಿ ಮಕ್ಕಳೊಂದಿಗೆ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

    ಪ್ರತಿಯೊಬ್ಬರಿಗೂ ಬದುಕುವ ಹಕ್ಕು, ರಕ್ಷಣೆಯ ಹಕ್ಕು, ಉಚಿತ ಮತ್ತು ಕಡ್ಡಾಯ ಶಿಕ್ಷಣ, ಸಮಾನತೆಯ ಹಕ್ಕು ಹೀಗೆ ತಮ್ಮ ಹಕ್ಕುಗಳು ನಾವು ತಾಯಿಯ ಗರ್ಭದಲ್ಲಿರುವಾಗಲೇ ಮಕ್ಕಳ ಹಕ್ಕುಗಳು ಆರಂಭವಾಗುತ್ತದೆ. ಅವುಗಳನ್ನು ರಕ್ಷಿಸುವ ಸಲುವಾಗಿಯೇ ಸರ್ಕಾರ ವಿವಿಧ ಯೋಜನೆ ರೂಪಿಸಿದೆ. ಮಕ್ಕಳ ರಕ್ಷಣಾ ಘಟಕ, ಕಲ್ಯಾಣ ಸಮಿತಿ ರಚಿಸಿದೆ. ನಿಮ್ಮ ಹಕ್ಕುಗಳಿಗೆ ಚ್ಯುತಿ ಉಂಟಾದಾಗ, ಉಲ್ಲಂಘನೆಯಾದಾಗ ಯಾವುದೇ ರೀತಿಯ ಸಮಸ್ಯೆಗಳು ಎದುರಾದಾಗ ಮಕ್ಕಳ ಸಹಾವಾಣಿ ಸಂಖ್ಯೆ 1098 ಅಥವಾ ಪೊಲೀಸ್ ಸಹಾಯವಾಣಿ ಸಂಖ್ಯೆ 112ಗೆ ಸಂಪರ್ಕಿಸಬೇಕು.

    ಎಂತಹದೇ ಸಮಸ್ಯೆಗಳಿದ್ದರೂ ಮುಕ್ತವಾಗಿ ಹೇಳಿಕೊಂಡು ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು. ಇದಕ್ಕಾಗಿ ಆಯೋಗವು ಸದಾ ನಿಮ್ಮೊಂದಿಗಿರಲಿದೆ ಎಂದರು.
    ಶಿಕ್ಷಣ ಒಂದು ಹರಿತವಾದ ಆಯುಧವಿದ್ದಂತೆ, ಅದನ್ನು ಪ್ರತಿಯೊಬ್ಬರು ಸದ್ವಿನಿಯೋಗ ಪಡೆದು ಉತ್ತಮ ವ್ಯಕ್ತಿಯಾಗಬೇಕು.

    ಜಿಲ್ಲೆಯಲ್ಲಿ ಇಂದಿಗೂ ಸಹ ಬಾಲ್ಯ ವಿವಾಹ ಪ್ರಕರಣ ದಾಖಲಾಗುತ್ತಿವೆ. ಇನ್ನು ಮುಂದೆಯೂ ಮಾರ್ಚ್ ಮತ್ತು ಏಪ್ರಿಲ್ ಮಾಹೆಯಲ್ಲಿ ಮದುವೆ ನಡೆಯುತ್ತವೆ. ಈ ಸಂದರ್ಭದಲ್ಲಿ ಬಾಲ್ಯ ವಿವಾಹ ನಡೆಯುವುದು ಕಂಡು ಬಂದಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಅಥವಾ ಪೊಲೀಸ್ ಇಲಾಖೆ ಸಹಾಯವಾಣಿ ಸಂಖ್ಯೆ 112ಗೆ ಸಂಪರ್ಕಿಸಲು ತಿಳಿಸಿದರು.

    ವಿದ್ಯಾರ್ಥಿಯೊಬ್ಬರು ಮಾತನಾಡಿ, ಡ್ರಾಪ್ ಔಟ್ ಮಕ್ಕಳ ಸಂಖ್ಯೆ ಹೆಚ್ಚಳಕ್ಕೆ ಕಾರಣವೇನು. ಅದಕ್ಕೆ ಪರಿಹಾರೋಪಾಯ ಕ್ರಮಗಳನ್ನು ಕೈಗೊಂಡಿದ್ದೀರಿ ಎಂಬ ಪ್ರಶ್ನೆಗೆ ಡಿಡಿಪಿಐ ಮಾತನಾಡಿ, ವೈಯಕ್ತಿಕ ಹಾಗೂ ಮನೆಯ ಆರ್ಥಿಕ ಪರಿಸ್ಥಿತಿ ಬಡತನ, ಬಾಲಕಾರ್ಮಿಕತೆ ಹೀಗೆ ಮುಂತಾದ ಕಾರಣಗಳಿಂದ ಶಾಲೆಗಳಿಂದ ಹೊರಗುಳಿಯುತ್ತಿದ್ದಾರೆ ಎಂದರು.

    ಇದಕ್ಕೆ ದನಿಗೂಡಿಸಿದ ಎಸ್ಪಿ ಉಮಾಪ್ರಶಾಂತ್, ಜಿಲ್ಲೆಯಲ್ಲಿ ಇಲಾಖೆಯ ಮಾಹಿತಿ ಪ್ರಕಾರ ಪ್ರಸ್ತುತ 820 ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ. ಮನೆ ಮನೆಗೆ ಪೊಲೀಸ್ ಭೇಟಿ ನೀಡಿದಾಗ ವಿದ್ಯಾಭ್ಯಾಸದ ಕಡೆ ಒಲವಿಲ್ಲದಿರವುದು. ಬಾಲಕಾರ್ಮಿಕ ಪದ್ಧತಿ, ಬಡತನ ಹಾಗೂ ಪೋಷಕರಿಗೆ ಶಿಕ್ಷಣದ ಮಹತ್ವ ತಿಳಿಯದಿರುವುದು, ಈ ಎಲ್ಲಾ ಕಾರಣಗಳಿಂದ ಹೊರಗುಳಿದಿದ್ದಾರೆ. ಆದರೂ ಮನೆ ಮನೆಗೆ ಭೇಟಿ ನೀಡುವ ಸಂದರ್ಭದಲ್ಲಿ ಪೋಷಕರ ಮನವೊಲಿಸಿ ಕರೆತರುವ ಪ್ರಯತ್ನ ಮಾಡಲಾಗುತ್ತಿದೆ. ಮಕ್ಕಳು ಸರ್ಕಾರಿ ಶಾಲೆಗಳಲ್ಲಿ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಳ್ಳಬೇಕು. ಗುಣಮಟ್ಟದ ಶಿಕ್ಷಣ ಪಡೆದು ನಮ್ಮಂತೆಯೇ ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು ಎಂದು ಹುರಿದುಂಬಿಸಿದರು.

    ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯೊಬ್ಬರು ಮಾತನಾಡಿ, ಇತ್ತೀಚೆಗೆ ಕನ್ನಡ ಮಾಧ್ಯಮ ಶಾಲೆಗಳು ಮುಚ್ಚಲಾಗುತ್ತಿದೆ. ಅದಕ್ಕೆ ಪ್ರಮುಖ ಕಾರಣವೇನು ?. ಹೀಗೆ ಮುಂದುವರೆದರೆ ಬಡತನ ಮತ್ತು ಗ್ರಾಮೀಣ ಭಾಗದ ಮಕ್ಕಳು ಪಾಡೇನು ಎಂದು ಮಾರ್ಮಿಕವಾಗಿ ಪ್ರಶ್ನಿಸಿದರು.

    ಇದಕ್ಕೆ ಪ್ರತಿಕ್ರಿಯಿಸಿದ ಡಿಡಿಪಿಐ ಪ್ರಸ್ತುತ ಹೆಚ್ಚಿನ ಮಕ್ಕಳು ನಗರ ಮತ್ತು ಆಂಗ್ಲ ಮಾಧ್ಯಮದ ಮೇಲಿನ ವ್ಯಾಮೋಹದಿಂದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ದಾಖಲಾತಿ ಸಂಖ್ಯೆ ಕುಸಿಯುತ್ತಿದೆ. ಆದ್ದರಿಂದ ಜಿಲ್ಲೆಯಲ್ಲಿ 10 ಶಾಲೆಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ . ಅವುಗಳಲ್ಲಿ ಹೆಚ್ಚು ಸಂಖ್ಯೆಯಲ್ಲಿ ದಾಖಲಾತಿ ಆರಂಭವಾದ ನಂತರ ಪುನಃ ತೆರೆಯಲು ಅವಕಾಶ ನೀಡಲಾಗುವುದು ಎಂದು ತಿಳಿಸಿದರು.

    ನಗರದ ಎಸ್‌ಪಿಎಸ್ ಶಾಲೆಯಲ್ಲಿ ಸುಸಜ್ಜಿತ ಕಟ್ಟಡ ಗುಣಮಟ್ಟದ ಶಿಕ್ಷಣವಿದೆ. ಆದರೆ ಆಟದ ಮೈದಾನವಿಲ್ಲ ಎಂದು ಬೇಸರಿಸಿದರು. ಸಂಬAಧಪಟ್ಟ ಅಧಿಕಾರಿಗಳು ಪ್ರತಿಕ್ರಿಯಿಸಿ ನಗರದಲ್ಲಿ ಲಭ್ಯವಿರುವ ಸರ್ಕಾರಿ ನಿವೇಶನ ಪಡೆದು ನೀಡಲಾಗುವುದು ಭರವಸೆ ನೀಡಿದರು.

    ಜಿಲ್ಲೆಯ ಸಂತೇಬೆನ್ನೂರಿನ ಎಸ್.ಎಸ್.ಜೆ.ವಿ.ಪಿ ಶಾಲೆಯ ಸುತ್ತಮುತ್ತಲೂ 200 ಮೀಟರ್ ತಂಬಾಕು, ದೂಮಪಾನ ನಿಷೇಧಿತ ಪ್ರದೇಶವೆಂದು ಗುರುತಿಸಲಾಗಿದೆ. ಆದರೂ ಶಾಲೆಯ ತಡೆಗೋಡೆಯ ಸುತ್ತಮುತ್ತ ಎಗ್ಗಿಲ್ಲದೇ ತಂಬಾಕು ಉತ್ಪನ್ನ ಮಾರಾಟ, ಬಳಕೆ ಮಾಡಲಾಗುತ್ತಿದೆ. ಇದರಿಂದ ಶಾಲೆಯ ಮಕ್ಕಳು ಸಹ ದಾರಿ ತಪ್ಪುತ್ತಿದ್ದಾರೆ. ಹಾಗೆಯೇ ಸಂಜೆಯಾದರೆ ಶಾಲಾ ಆವರಣ ಕುಡುಕರ ಹಾಗೂ ಪುಂಡರ ಅಡ್ಡೆಯಾಗಿ ಮಾರ್ಪಾಡಾಗುತ್ತಿದೆ. ಶಾಲೆಯ ಕೂಗಳತೆಯ ದೂರದಲ್ಲಿಯೇ ಪೊಲೀಸ್ ಠಾಣೆ ಇದೆ. ಆದರೂ ಯಾವುದೇ ರೀತಿಯ ಕ್ರಮವಹಿಸುತ್ತಿಲ್ಲ ಎಂದು ವಿದ್ಯಾರ್ಥಿನಿಯೊಬ್ಬರು ಗಂಭೀರವಾಗಿ ಆರೋಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೊಲೀಸ್ ವರಿಷ್ಠಾಧಿಕಾರಿ ಪರಿಶೀಲಿಸಿ ಸಂಬAಧಪಟ್ಟವರ ವಿರುದ್ಧ ಕ್ರಮವಹಿಸಲಾಗುವುದು ಎಂದರು.

    ಇAದಿನ ಮಕ್ಕಳು ಹೆಚ್ಚು ಟಿವಿ, ಮೊಬೈಲ್ ಬಳಕೆ, ಆನ್ ಲೈನ್ ಗೇಮಿಂಗ್ ಗೀಳಿಗೆ ಬಲಿಯಾಗುತ್ತಿದ್ದಾರೆ. ಇದರಿಂದ ಓದುವ ಆಸಕ್ತಿ, ಏಕಾಗ್ರತೆ ಪಠ್ಯಗಳ ಜೊತೆಗಿನ ಒಡನಾಟವನ್ನೇ ಮರೆಯುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಆದ್ದರಿಂದ ಮಕ್ಕಳು ಪುಸ್ತಕ ಓದುವ ಹವ್ಯಾಸ ರೂಢಿಸಿಕೊಳ್ಳಬೇಕು. ಪಠ್ಯದ ಜೊತೆಗೆ ವಿವಿಧ ರೀತಿಯ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ವಿದ್ಯೆಗೆ ವಿನಯವೇ ಭೂಷಣ ಎಂಬAತೆ ಉತ್ತಮ ಸಂಸ್ಕಾರ, ಸಂಯಮ ತಾಳ್ಮೆ, ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಂಡಲ್ಲಿ ಜೀವನದಲ್ಲಿ ಖಂಡಿತಾ ಯಶಸ್ವಿಯಾಗಬಹುದು ಎಂದು ಎಸ್ಪಿ ಉಮಾಪ್ರಶಾಂತ್ ಸಲಹೆ ನೀಡಿದರು.

    ಪೋಕ್ಸೋ ಕಾಯ್ದೆಗೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿದ ಎಸ್ಪಿ ಅವರು ಪ್ರತೀ ವರ್ಷ ಸರಿ ಸುಮಾರು 90 ರಿಂದ 100 ಪ್ರಕರಣಗಳು ದಾಖಲಾಗುತ್ತಿವೆ. ಇಂತಹ ಪ್ರಕರಣ ಇತ್ಯರ್ಥಪಡಿಸುವ ಸಲುವಾಗಿ ವಿಶೇಷ ನ್ಯಾಯಾಲಯಗಳು ಸಹ ಸ್ಥಾಪಿಸಲಾಗಿದೆ ಎಂದ ಅವರು, ಪ್ರಸಕ್ತ ವರ್ಷದಲ್ಲಿ ಶೇ.94 ರಷ್ಟು ಪೋಕ್ಸೊ ಪ್ರಕರಣ ದಾಖಲಾಗಿವೆ ಎಂದು ಮಾಹಿತಿ ನೀಡಿದರು.

    ಈ ಪ್ರಕರಣಗಳು ಹೆಚ್ಚಿನದಾಗಿ ಹದಿಹರೆಯದ ವಯಸ್ಸಿನಲ್ಲಿ ಅಥವಾ ಓದುವ ವಯಸ್ಸಿನಲ್ಲಿ ಪ್ರೀತಿ – ಪ್ರೇಮದ ಪಾಶಕ್ಕೆ ಬಲಯಾಗಿ ಅತೀ ಹೆಚ್ಚು ಪ್ರಕರಣ ದಾಖಲಾಗುತ್ತವೆ. ಆದ್ದರಿಂದ ಮಕ್ಕಳು ಓದುವ ವಯಸ್ಸಿನಲ್ಲಿ ಶ್ರದ್ಧೆಯಿಂದ ತಮ್ಮ ಕಾರ್ಯವನ್ನು ನಿರ್ವಹಿಸಬೇಕು. ಈ ಪ್ರೀತಿ ಪ್ರೇಮ ಅಮಲಿಗೆ ಬಿದ್ದು ತಮ್ಮ ಭವಿಷ್ಯದ ಜೀವನ ಆಳು ಮಾಡಿಕೊಳ್ಳಬೇಡಿ ಎಂದು ಸಲಹೆ ನೀಡಿದರು.

    ಸಭೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕವಿತಾ ಸ್ವಾಗತಿಸಿದರು. ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೊಟ್ರೇಶ್ ಅಧ್ಯಕ್ಷತೆ ವಹಿಸಿದ್ದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ರಾಜಾನಾಯ್ಕ, ಬಡಾವಣೆ ಪೊಲೀಸ್ ಇನ್ಸ್ಪೆಕ್ಟರ್ ಗಾಯತ್ರಿ ಸೇರಿದಂತೆ ಮತ್ತಿತರರು ಇದ್ದರು.

    ಸುದ್ದಿದಿನ.ಕಾಂ|ವಾಟ್ಸಾಪ್|9980346243

    Click here to Read More
    Previous Article
    ಬಾಲ್ಯ ವಿವಾಹ ಮತ್ತು ಶಾಲೆಯಿಂದ ಮಕ್ಕಳು ಹೊರಗುಳಿಯದಂತೆ ಕ್ರಮವಹಿಸಿ :ಅಪರ್ಣಾ ಎಂ ಕೊಳ್ಳಾ
    Next Article
    ಬ್ರಹ್ಮಾವರ: ಅಕ್ರಮ ಮರಳುಗಾರಿಕೆ- 17 ದೋಣಿಗಳ ವಶಕ್ಕೆ

    Related ಮುಖಪುಟ Updates:

    Are you sure? You want to delete this comment..! Remove Cancel

    Comments (0)

      Leave a comment