ಮಂಡ್ಯ ಜಿಲ್ಲೆಯ 4,64.4960 ಮಹಿಳೆಯರಿಗೆ ಗೃಹ ಲಕ್ಷ್ಮಿ ಯೋಜನೆಯಡಿ ಯೋಜನೆ ಪ್ರಾರಂಭಗೊಂಡಾಗಿನಿಂದಲು ಇಲ್ಲಿಯವರೆಗೆ 24 ಕಂತುಗಳ ಮೂಲಕ ರೂ.2133 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಚಿಕ್ಕಲಿಂಗಯ್ಯ ಹೇಳಿದರು. ಮಂಡ್ಯ ಜಿಲ್ಲಾ ಪಂಚಾಯತ್ ಮಿನಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಗೃಹಲಕ್ಷ್ಮಿ ಹಣ ಸೆಪ್ಟೆಂಬರ್ ವರೆಗೆ ಪಾವತಿಸಲಾಗಿದ್ದು ಸೆಪ್ಟೆಂಬರ್ ಮಾಹೆಯಲ್ಲಿ ಜಿಲ್ಲೆಯ 4,64.960 […]
The post ಗೃಹಲಕ್ಷ್ಮಿ ಫಲಾನುಭವಿಗಳು ಬ್ಯಾಂಕ್ ಖಾತೆಯನ್ನು ಆಧಾರ್ ಸೀಡಿಂಗ್ ಮತ್ತು ಇ-ಕೆ.ವೈ.ಸಿ ಮಾಡಿಸಿ : ಚಿಕ್ಕಲಿಂಗಯ್ಯ appeared first on nudikarnataka.
ಮಂಡ್ಯ ಜಿಲ್ಲೆಯ 4,64.4960 ಮಹಿಳೆಯರಿಗೆ ಗೃಹ ಲಕ್ಷ್ಮಿ ಯೋಜನೆಯಡಿ ಯೋಜನೆ ಪ್ರಾರಂಭಗೊಂಡಾಗಿನಿಂದಲು ಇಲ್ಲಿಯವರೆಗೆ 24 ಕಂತುಗಳ ಮೂಲಕ ರೂ.2133 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಚಿಕ್ಕಲಿಂಗಯ್ಯ ಹೇಳಿದರು.
ಮಂಡ್ಯ ಜಿಲ್ಲಾ ಪಂಚಾಯತ್ ಮಿನಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಗೃಹಲಕ್ಷ್ಮಿ ಹಣ ಸೆಪ್ಟೆಂಬರ್ ವರೆಗೆ ಪಾವತಿಸಲಾಗಿದ್ದು ಸೆಪ್ಟೆಂಬರ್ ಮಾಹೆಯಲ್ಲಿ ಜಿಲ್ಲೆಯ 4,64.960 ಮಹಿಳೆಯರಿಗೆ ರೂ. 92.99 ಕೋಟಿ ಅನುದಾನವನ್ನು ನೀಡಲಾಗಿದೆ ಎಂದರು.
ಜಿಲ್ಲೆಯಲ್ಲಿ 1603 ಐ.ಟಿ.ಜಿ ಎಸ್.ಟಿ ಪಾವತಿದಾರರು ಇದ್ದು ಸದರಿಯವರಿಗೆ ಗೃಹಲಕ್ಷ್ಮ ಹೋಗಿರುವುದಿಲ್ಲ. ಸದರಿ 1603 ಜನರಲ್ಲಿ ಬಡವರು ಹಾಗೂ ಆರ್ಥಿಕವಾಗಿ ಹಿಂದುಳಿದವರು ಇದ್ದಾರೆ. ಅಧಿಕಾರಿಗಳು ಅವರತ್ತ ಗಮನ ಹರಿಸಿ ಗೃಹಲಕ್ಷ್ಮಿ ಹಣ ತಲುಪುವಂತೆ ಮಾಡಬೇಕು. ಸದರಿ 1603 ಜನರು ತಾವು ಐಟಿಜಿಎಸ್‌ಟಿ ಪಾವತಿದಾರರಲ್ಲವೆಂದು ಸಿಡಿಪಿಓ ಕಚೇರಿಯಲ್ಲಿ ಅರ್ಜಿ ಪಡೆದು ಪಾನ್ ಕಾರ್ಡ್, ಆಧಾರ್ ಕಾರ್ಡ್,ರೇಷನ್ ಕಾರ್ಡ್ ಗಳನ್ನು ಜೋಡಿಸಿ ಅರ್ಜಿ ಸಲ್ಲಿಸಬೇಕು ಎಂದು ಹೇಳಿದರು.
ಕೆಲ ಗೃಹ ಲಕ್ಷ್ಮಿ ಫಲಾನುಭವಿಗಳು ತಮ್ಮ ಬ್ಯಾಂಕ್ ಖಾತೆಯನ್ನು ಆಧಾರ್ ಸೀಡಿಂಗ್ ಮತ್ತು ಇ-ಕೆ.ವೈ.ಸಿ ಮಾಡಿಸದಿರುವ ಕಾರಣ ಹಣ ಬಂದಿರುವುದಿಲ್ಲ ಹಾಗಾಗಿ ಸಾರ್ವಜನಿಕರಿಗೆ ಆಧಾರ್ ಸೀಡಿಂಗ್ ಮತ್ತು ಇ-ಕೆ.ವೈ.ಸಿ ಮಾಡಿಸುವಂತೆ ಜಾಗೃತಿ ಮೂಡಿಸಿ ಎಂದು ತಿಳಿ ಹೇಳಿದರು.
ಅನ್ನ ಭಾಗ್ಯ ಯೋಜನೆಯಡಿ ಜಿಲ್ಲೆಯಲ್ಲಿ ಇಲ್ಲಿಯವರೆಗೂ 4.47.166 ಫಲಾನುಭವಿಗಳು ಇದ್ದು ಜುಲೈ -2023 ರಿಂದ ಡಿಸೆಂಬರ್ 24 ರ ವರೆಗೆ ಅಕ್ಕಿಯ ಬದಲು 402.6 ಕೋಟಿ ಹಣವನ್ನು ಫಲಾನುಭವಿಗಳಿಗೆ ಪಾವತಿಸಲಾಗಿದೆ. ಫೆಬ್ರವರಿ 2025 ರ ಮಾಹೆಯಿಂದ ನಗದು ಬದಲು ಅಕ್ಕಿಯನ್ನು ನ್ಯಾಯಬೆಲೆ ಅಂಗಡಿಗಳ ಮೂಲಕ ವಿತರಣೆ ಮಾಡಲಾಗುತ್ತಿದೆ ಎಂದರು.
ಆರೋಗ್ಯ ಸಮಸ್ಯೆ ಇರುವವರಿಗೆ ಬಿಪಿಎಲ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನಿಸಲಾಗಿದ್ದು. ಅರ್ಹರು ವೈದ್ಯರಿಂದ ದೃಢೀಕರಿಸಿದ ಆರೋಗ್ಯ ಸಮಸ್ಯೆಯ ವಿವರಗಳನ್ನು ಅರ್ಜಿಯ ಜೊತೆಗೆ ಸಲ್ಲಿಸಿ ಬಿ.ಪಿ. ಎಲ್ ಕಾರ್ಡ್ ಪಡೆಯಬಹುದು. ಅನ್ನಭಾಗ್ಯ ಯೋಜನೆಯಡಿ 2026 ಜನವರಿ ಮಾಹೆಯಲ್ಲಿ ಒಟ್ಟು 1.55.988.45 ಕ್ವಿಂಟಾಲ್ ಅಕ್ಕಿಯನ್ನು ಜಿಲ್ಲೆಯಲ್ಲಿ ನೀಡಲಾಗುವುದು. ಎಂದು ಹೇಳಿದರು.
ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಕೆ ಹನುಮಂತಯ್ಯ ಅವರು ಮಾತನಾಡಿ ಜಿಲ್ಲೆಯಲ್ಲಿ ಶಕ್ತಿ ಯೋಜನೆಯಡಿ ಜೂನ್ 2023 ರಿಂದ ನವೆಂಬರ್ 2025 ರ ವರೆಗೂ 18.03.04.248 ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ. ಇಲ್ಲಿಯವರೆಗೂ ಶಕ್ತಿ ಯೋಜನೆಯಡಿ ರೂ. 492.93 ಕೋಟಿ ವೆಚ್ಚವಾಗಿದೆ ಎಂದು ಹೇಳಿದರು.
ಬೆಂಗಳೂರು ಮೈಸೂರು ಬಸ್ ಗಾಗಿ ಅನೇಕ ಪ್ರಯಾಣಿಕರು ಸಂಚಾರ ಬೆಳೆಸುತ್ತಿದ್ದಾರೆ. ಆದ್ದರಿಂದ ಪ್ರಾಮಾಣಿಕರಿಗೆ ತೊಂದರೆ ಉಂಟಾಗದಂತೆ ಬಸ್ ವ್ಯವಸ್ಥೆ ಕಲ್ಪಿಸಿ ಹಾಗೂ ಜಿಲ್ಲೆಯ ಶಾಲಾ ಕಾಲೇಜು ಮಕ್ಕಳಿಗೆ ತೊಂದರೆಯಾಗದಂತೆ ಸಾರಿಗೆ ವ್ಯವಸ್ಥೆ ಕಲ್ಪಿಸಿ ಎಂದು ಕಿವಿಮಾತು ಹೇಳಿದರು.
ಗೃಹ ಜ್ಯೋತಿ ಯೋಜನೆ ಯಡಿ ಜಿಲ್ಲೆಯ ಜಿಲ್ಲೆಯಲ್ಲಿ 4.98.144 ಫಲಾನುಭವಿಗಳು ಇದ್ದು ಆಗಸ್ಟ್ 2023 ರಿಂದ ನವೆಂಬರ್ 2025 ರ ವರೆಗೂ ಜಿಲ್ಲೆಯಲ್ಲಿ 54.91 ಲಕ್ಷ ಯೂನಿಟ್ ವಿದ್ಯುತ್ ಬಳಕೆ ಮಾಡಲಾಗಿದೆ ಗೃಹಜೋತಿ ಯೋಜನೆಯಡಿ ರೂ.491.19 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದರು.
ಚೆಸ್ಕಾ ಅಧಿಕಾರಿಗಳು ಜನ ಸಂಪರ್ಕ ಸಭೆಗಳನ್ನು ನಡೆಸಿದಾಗ ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಸದಸ್ಯರನ್ನು ಆಹ್ವಾನಿಸಿ. ಆಗ ಮಾತ್ರ ಚಸ್ಕಾಂ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಾಗುತ್ತದೆ ಎಂದು ಹೇಳಿದೆ.
ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ರಾಜೇಂದ್ರ ಎಸ್.ಹೆಚ್ ಅವರು ಮಾತನಾಡಿ ಯುವ ನಿಧಿ ಯೋಜನೆಯಡಿ ಜಿಲ್ಲೆಯಲ್ಲಿ 6730 ಫಲಾನುಭವಿಗಳು ನೊಂದಣಿಯಾಗಿದ್ದು ಸೆಪ್ಟೆಂಬರ್ 2025 ರ ವರೆಗೂ 18.73 ಕೋಟಿ ಅನುದಾನವನ್ನು ಜಿಲ್ಲೆಗೆ ಬಿಡುಗಡೆ ಮಾಡಲಾಗಿದೆ. ಅಕ್ಟೋಬರ್ ಮಾಹೆ ಹಣವನ್ನು ಶೀಘ್ರವೇ ಪಾವತಿಸಲಾಗುವುದು. ಯುವ ನಿಧಿ ಪ್ಲಸ್ ಯೋಜನೆಯಡಿ ಜಿಲ್ಲೆಯ ಯುವಕರಿಗೆ ತರಬೇತಿ ನೀಡಲು ಆನ್ಲೈನ್ ತಂತ್ರಾಂಶದಲ್ಲಿ ದೋಷ ಉಂಟಾಗಿದ್ದು ಇನ್ನೆರಡು ವಾರಗಳಲ್ಲಿ ಪರಿಹರಿಸಲಾಗುವುದು ಎಂದು ತಿಳಿಸಿದರು.
ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಯುವನಿಧಿ ಯೋಜನೆಯ ಕುರಿತಾಗಿ ಹೆಚ್ಚಿನ ಪ್ರಚಾರ ಕೈಗೊಳ್ಳಿ. ಎಲ್ಲಾ ಕಾಲೇಜುಗಳಲ್ಲಿ ಇವನಿಗೆ ಯೋಜನೆ ಕುರಿತು ಸೂಚನಾ ಫಲಕಗಳನ್ನು ಅಳವಡಿಸಿ ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಶಿವಣ್ಣ, ಜಿಲ್ಲಾ ಪಂಚಾಯತ್ ಯೋಜನಾಧಿಕಾರಿ ಧನುಷ್, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಸದಸ್ಯರುಗಳಾದ ಅಜಯ್ ಕುಮಾರ್ ಬಿ.ಪಿ, ಕೆ. ರುದ್ರಪ್ಪ, ವೀಣಾ, ಶಂಕರೇಗೌಡ, ಬಸವರಾಜು, ಮಹಮದ್ ಅನ್ಸರ್ , ಅನ್ಸರ್ ಪಾಷಾ, ಮೂಡ್ಲಪ್ಪ ಮೂಡ್ಲಿಗೌಡ, ರಮೇಶ್ ಬಿ.ಎಂ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
The post ಗೃಹಲಕ್ಷ್ಮಿ ಫಲಾನುಭವಿಗಳು ಬ್ಯಾಂಕ್ ಖಾತೆಯನ್ನು ಆಧಾರ್ ಸೀಡಿಂಗ್ ಮತ್ತು ಇ-ಕೆ.ವೈ.ಸಿ ಮಾಡಿಸಿ : ಚಿಕ್ಕಲಿಂಗಯ್ಯ appeared first on nudikarnataka.
Previous Article
ಉದ್ಯಾವರ: ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ
Next Article
ಬ್ರಹ್ಮಾವರ ಕೃಷಿ ಸಂಶೋಧನಾ ಕೇಂದ್ರದ ಮರ ಸಾಗಾಟ ಪ್ರಕರಣ: ಹಿರಿಯ ಕ್ಷೇತ್ರ ಅಧೀಕ್ಷಕ ಡಾ.ಶಂಕರ್ ವರ್ಗ