Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಅರಸು ದಾಖಲೆಯನ್ನು ಸರಿಗಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ

    1 week ago

    ರಾಜ್ಯದಲ್ಲಿ ಸುದೀರ್ಘ ಅವಧಿಯ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆ ಹೊಂದಿದ್ದ ದೇವರಾಜ​ ಅರಸು ಅವರ​ ದಾಖಲೆಯನ್ನು ಸಿದ್ದರಾಮಯ್ಯ ಮಂಗಳವಾರ (ಜ. 6) ಸರಿಗಟ್ಟಿದ್ದಾರೆ.ಆ ಮೂಲಕ, ಅತಿ ಹೆಚ್ಚು ಅವಧಿ ರಾಜ್ಯ ಸರ್ಕಾರದ ಚುಕ್ಕಾಣಿ ಹಿಡಿದ ಮುಖ್ಯಮಂತ್ರಿ ಎಂಬ ಗರಿಮೆಗೆ ಅವರು ಪಾತ್ರರಾಗಿದ್ದಾರೆ. ಈ ಹಿರಿಮೆಯ ಹೊರತಾಗಿ, ಅತಿ ಹೆಚ್ಚು 16 ಬಾರಿ ಬಜೆಟ್​ ಮಂಡಿಸಿದ ದಾಖಲೆಯನ್ನೂ ಸಿದ್ದರಾಮಯ್ಯ ಹೊಂದಿದ್ದಾರೆ. ಅಲ್ಲದೆ, 2026-27ನೇ ಸಾಲಿನಲ್ಲಿ ತಮ್ಮ 17ನೇ ಬಜೆಟ್‌ ಮಂಡಿಸುವ ಉತ್ಸಾಹದಲ್ಲಿದ್ದಾರೆ. ಈ ಸಂತಸವನ್ನು ಸಂಭ್ರಮಿಸಲು ರಾಜ್ಯದಾದ್ಯಂತ ಇರುವ ಸಿದ್ದರಾಮಯ್ಯ […]

    The post ಅರಸು ದಾಖಲೆಯನ್ನು ಸರಿಗಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ appeared first on nudikarnataka.



    ರಾಜ್ಯದಲ್ಲಿ ಸುದೀರ್ಘ ಅವಧಿಯ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆ ಹೊಂದಿದ್ದ ದೇವರಾಜ​ ಅರಸು ಅವರ​ ದಾಖಲೆಯನ್ನು ಸಿದ್ದರಾಮಯ್ಯ ಮಂಗಳವಾರ (ಜ. 6) ಸರಿಗಟ್ಟಿದ್ದಾರೆ.ಆ ಮೂಲಕ, ಅತಿ ಹೆಚ್ಚು ಅವಧಿ ರಾಜ್ಯ ಸರ್ಕಾರದ ಚುಕ್ಕಾಣಿ ಹಿಡಿದ ಮುಖ್ಯಮಂತ್ರಿ ಎಂಬ ಗರಿಮೆಗೆ ಅವರು ಪಾತ್ರರಾಗಿದ್ದಾರೆ.

    ಈ ಹಿರಿಮೆಯ ಹೊರತಾಗಿ, ಅತಿ ಹೆಚ್ಚು 16 ಬಾರಿ ಬಜೆಟ್​ ಮಂಡಿಸಿದ ದಾಖಲೆಯನ್ನೂ ಸಿದ್ದರಾಮಯ್ಯ ಹೊಂದಿದ್ದಾರೆ. ಅಲ್ಲದೆ, 2026-27ನೇ ಸಾಲಿನಲ್ಲಿ ತಮ್ಮ 17ನೇ ಬಜೆಟ್‌ ಮಂಡಿಸುವ ಉತ್ಸಾಹದಲ್ಲಿದ್ದಾರೆ.

    ಈ ಸಂತಸವನ್ನು ಸಂಭ್ರಮಿಸಲು ರಾಜ್ಯದಾದ್ಯಂತ ಇರುವ ಸಿದ್ದರಾಮಯ್ಯ ಅವರ ಅಭಿಮಾನಿಗಳು, ಬೆಂಬಲಿಗರು, ಹಿತೈಷಿಗಳು ಸಾಲು ಸಾಲು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ನೆಲಮಂಗಲದಲ್ಲಿ ಸುಮಾರು 10 ಸಾವಿರ ಜನರಿಗೆ ನಾಟಿಕೋಳಿಯ ಭೋಜನವನ್ನು ಅವರ ಅಭಿಮಾನಿಗಳು ಮಂಗಳವಾರ ಆಯೋಜಿಸಿದ್ದಾರೆ. ವಿಜಯಪುರ, ಕಲಬುರಗಿ,‌ ಹಾಸನ, ಮೈಸೂರು ಸೇರಿದಂತೆ ಹಲವೆಡೆ ರಕ್ತದಾನ ಶಿಬಿರ, ಸಮಾವೇಶಗಳು ನಡೆಯಲಿವೆ.

    ‘ಸಾಮಾಜಿಕ ನ್ಯಾಯ’ದ ನಾಯಕರಾಗಿ ಗುರುತಿಸಿಕೊಂಡಿದ್ದ ದೇವರಾಜ​ ಅರಸು 2,789 ದಿನಗಳು, ಅಂದರೆ 7 ವರ್ಷ 239 ದಿನ (ಎರಡು ಅವಧಿಗೆ) ಮುಖ್ಯಮಂತ್ರಿ ಆಗಿದ್ದರು. ಈ ದಾಖಲೆಯನ್ನು ಸಿದ್ದರಾಮಯ್ಯ ಮುರಿಯಲಿದ್ದಾರೆ.

    ಅರಸು​ ಅವರು 1972ರ ಮಾರ್ಚ್​ 20ರಿಂದ 1980 ಜನವರಿ 7ರವರೆಗೆ ಸತತ ಏಳೂವರೆ ವರ್ಷ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು. ಸಿದ್ದರಾಮಯ್ಯ 2013ರಿಂದ 2018ರ ಅವಧಿಯಲ್ಲಿ ಮೊದಲ ಬಾರಿ 1,829 ದಿನ ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿದ್ದರು. 2023ರ ಮೇ 20ರಿಂದ ಎರಡನೇ ಬಾರಿಮುಖ್ಯಮಂತ್ರಿ ಆಗಿದ್ದಾರೆ. ಮುಖ್ಯಮಂತ್ರಿಯ ಅಧಿಕಾರಾವಧಿ ಲೆಕ್ಕ ಮಾಡುವಾಗ ಪ್ರಮಾಣವಚನ ಸ್ವೀಕರಿಸಿದ ದಿನದಿಂದ ಪರಿಗಣಿಸಲಾಗುತ್ತದೆ ಎಂದು ವಿಧಾನಸಭೆ ಸಚಿವಾಲಯದ ಮೂಲಗಳು ತಿಳಿಸಿವೆ.

    ಅರಸು ಮತ್ತು ಸಿದ್ದರಾಮಯ್ಯ ಇಬ್ಬರೂ ತಮ್ಮ ವರ್ಚಸ್ಸು, ಸಂಘಟನಾ ಚಾತುರ್ಯದಿಂದ ರಾಜ್ಯ ರಾಜಕೀಯದಲ್ಲಿ ಬೆಳೆದವರು. ಅಲ್ಪಸಂಖ್ಯಾತ,ಹಿಂದುಳಿದ, ದಲಿತ (ಅಹಿಂದ) ಸಂಯೋಜನೆಯನ್ನು ಸಮರ್ಥವಾಗಿ ಬಳಸಿಕೊಂಡವರು. ಒಕ್ಕಲಿಗರು ಮತ್ತು ಲಿಂಗಾಯತರ ಪ್ರಾಬಲ್ಯದ ನಡುವೆ, ಅತಿ ಹೆಚ್ಚು ಅವಧಿಗೆ ಮುಖ್ಯಮಂತ್ರಿ ಪಟ್ಟದಲ್ಲಿ ಉಳಿಯಲು ಕೂಡ ಈ ಸಂಯೋಜನೆಇಬ್ಬರಿಗೂ ಸಹಾಯ ಮಾಡಿದೆ. ಸಿದ್ದರಾಮಯ್ಯ ಅವರು ಅಹಿಂದ ನಾಯಕರೆಂದೇ ಹೆಸರು ಗಳಿಸಿದ್ದಾರೆ. ತಮ್ಮ ರಾಜಕೀಯ ವಿರೋಧಿಗಳ ಬಲ ಕುಗ್ಗಿಸಲು ಅವರು ಈ ‘ಅಸ್ತ್ರ’ವನ್ನು ಸಮರ್ಥವಾಗಿ ಬಳಸಿಕೊಂಡಿದ್ದಾರೆ ಎಂಬ ವಿಶ್ಲೇಷಣೆಯೂ ರಾಜಕೀಯ ವಲಯದಲ್ಲಿದೆ.

    ಸಾಮಾಜಿಕ ನ್ಯಾಯ, ಜಾತ್ಯತೀತತೆ ಹಾಗೂ ಕೋಮುವಾದಿ ವಿರೋಧಿ ನಿಲುವುಗಳನ್ನು ಬಲವಾಗಿ ಪ್ರತಿಪಾದಿಸುತ್ತಲೇ ಬಂದಿರುವ ಸಿದ್ದರಾಮಯ್ಯ, ಅಹಿಂದ ಗುಂಪುಗಳ ಕಡೆಗೆ ವಿಶೇಷ ಪ್ರೀತಿ ತೋರಿದರು. ತಮ್ಮ ಅಧಿಕಾರಾವಧಿಯಲ್ಲಿ ಅನ್ನಭಾಗ್ಯ, ಕ್ಷೀರ ಭಾಗ್ಯ ಸೇರಿದಂತೆ ಹಲವು ‘ಭಾಗ್ಯ’ಗಳ ಜೊತೆಗೆ, ಹಲವು ಸಾಮಾಜಿಕ ಕಲ್ಯಾಣ ಕಾರ್ಯಕ್ರಮಗಳನ್ನು ಸಿದ್ದರಾಮಯ್ಯ ಜಾರಿಗೆ ತಂದಿದ್ದಾರೆ. ಈ ಅವಧಿಯಲ್ಲಿ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ‘ಪಂಚ ಗ್ಯಾರಂಟಿ’ಗಳನ್ನು ಅನುಷ್ಠಾನ ಮಾಡಿದೆ.

    ಸಿದ್ದರಾಮಯ್ಯ ಅವರ ರಾಜಕೀಯ ಜೀವನ ಜನತಾಪಕ್ಷ, ಜನತಾದಳ ಮತ್ತು 2006ರಿಂದ ಕಾಂಗ್ರೆಸ್‌ನಲ್ಲಿ ಮುಂದುವರಿದಿದೆ. ಕರ್ನಾಟಕದ ಇತಿಹಾಸದಲ್ಲಿ ಅತಿ ಹೆಚ್ಚು ಅವಧಿಗೆ ಮುಖ್ಯಮಂತ್ರಿಯಾದವರಲ್ಲಿ ದೇವರಾಜ ಅರಸು ಅವರ ನಂತರ ಎಸ್. ನಿಜಲಿಂಗಪ್ಪ(7 ವರ್ಷ 175 ದಿನ), ರಾಮಕೃಷ್ಣ ಹೆಗಡೆ (5 ವರ್ಷ 216 ದಿನ), ಬಿ.ಎಸ್. ಯಡಿಯೂರಪ್ಪ (5 ವರ್ಷ 82 ದಿನ) ಇದ್ದಾರೆ.

    The post ಅರಸು ದಾಖಲೆಯನ್ನು ಸರಿಗಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ appeared first on nudikarnataka.

    Click here to Read More
    Previous Article
    ದೀರ್ಘಾವಧಿ ಸಿಎಂ ದಾಖಲೆ: ಸಿದ್ದರಾಮಯ್ಯಗೆ ಪತ್ರ ಬರೆದು ಶುಭಹಾರೈಸಿದ ಬಸವರಾಜ ರಾಯರೆಡ್ಡಿ
    Next Article
    ಕಾಡು ಉಳಿಸಿ……. ನಾಡು ಉಳಿಸಿ…….

    Related ಮುಖಪುಟ Updates:

    Are you sure? You want to delete this comment..! Remove Cancel

    Comments (0)

      Leave a comment