ಮನರೇಗಾ ಕಾಯ್ದೆ ಹಾಗೂ ಹಕ್ಕು ಸ್ವರೂಪವನ್ನು ತೆಗೆದುಹಾಕಿ ಕೇವಲ ಸರ್ಕಾರದ ಆಣತಿಯ ‘ವಿಬಿ- ಜೀ ರಾಮ್ ಜೀ’ ಯೋಜನೆ ಜಾರಿಗೆ ತಂದಿರುವುದನ್ನು ಖಂಡಿಸಿ, ಈ ಕಾಯ್ದೆಯನ್ನು ಹಿಂಪಡೆಯುವಂತೆ ಒತ್ತಾಯಿಸಿ ಮಂಡ್ಯದಲ್ಲಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಯಿತು. ಗ್ರಾಮೀಣ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಮಿಕರು ಕೇಂದ್ರ ಸರ್ಕಾರದ ವಿರುದ್ದ ಘೋಷಣೆಗಳನ್ನು ಮೊಳಗಿಸಿ ಆಕ್ರೋಶ ವ್ಯಕ್ತಪಡಿಸಿದರು. 2004-2005ರಲ್ಲಿ ಎಡಪಕ್ಷಗಳ ಬೆಂಬಲದ […]
The post ಕೂಲಿಕಾರರ ಕೆಲಸ ಕಿತ್ತುಕೊಳ್ಳುವ ‘ವಿಬಿ- ಜಿ ರಾಮ್ ಜಿ’ ಹಿಂಪಡೆಯಿರಿ ; ಪ್ರತಿಭಟನೆ appeared first on nudikarnataka.
ಮನರೇಗಾ ಕಾಯ್ದೆ ಹಾಗೂ ಹಕ್ಕು ಸ್ವರೂಪವನ್ನು ತೆಗೆದುಹಾಕಿ ಕೇವಲ ಸರ್ಕಾರದ ಆಣತಿಯ ‘ವಿಬಿ- ಜೀ ರಾಮ್ ಜೀ’ ಯೋಜನೆ ಜಾರಿಗೆ ತಂದಿರುವುದನ್ನು ಖಂಡಿಸಿ, ಈ ಕಾಯ್ದೆಯನ್ನು ಹಿಂಪಡೆಯುವಂತೆ ಒತ್ತಾಯಿಸಿ ಮಂಡ್ಯದಲ್ಲಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಯಿತು.
ಗ್ರಾಮೀಣ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಮಿಕರು ಕೇಂದ್ರ ಸರ್ಕಾರದ ವಿರುದ್ದ ಘೋಷಣೆಗಳನ್ನು ಮೊಳಗಿಸಿ ಆಕ್ರೋಶ ವ್ಯಕ್ತಪಡಿಸಿದರು.
2004-2005ರಲ್ಲಿ ಎಡಪಕ್ಷಗಳ ಬೆಂಬಲದ ಮೇಲೆ ಆಧಾರವಾಗಿದ್ದ ಮನಮೋಹನ ಸಿಂಗ್ ನೇತೃತ್ವದ ಸರ್ಕಾರ ಉದ್ಯೋಗ ಖಾತ್ರಿ ಕಾಯ್ದೆ ಜಾರಿಗೊಳಿಸಿತ್ತು. ಈ ಕಾಯ್ದೆಯನ್ನು ಗ್ರಾಮೀಣ ಭಾಗದ ಕೃಷಿ ಕೂಲಿಕಾರರು, ಬಡ ರೈತರು ಹಾಗೂ ಇನ್ನಿತರ ಗ್ರಾಮೀಣ ದುಡಿಮೆಗಾರರಲ್ಲಿ ಶೇ.30 ರಷ್ಟು ಜನರು ತಮ್ಮ ಜೀವನೋಪಯಕ್ಕಾಗಿ ಅವಲಂಬಿದ್ದರು. ಆದರೆ ಈಈಗಿನ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ MNREGA ಕಾಯ್ದೆ ಹಾಗೂ ಹಕ್ಕು ಸ್ವರೂಪವನ್ನು ತೆಗೆದುಹಾಕಿ ಕೇವಲ ಸರ್ಕಾರದ ಆಣತಿಯ ಯೋಜನೆಯಾಗಿ ಹೊಸದಾಗಿ ವಿಕಸಿತ ಭಾರತ ರೋಜ್‌ಗಾರ್ ಮತ್ತು ಅದೇಶಿಸಿ ಮಿಷನ್ ಗ್ರಾಮೀಣ ಖಾತರಿ ವಿ.ಬಿ.ಜಿ ರಾಮ್ ಜಿ ಕಾಯ್ದೆಯನ್ನು ಜಾರಿಗೊಳಿಸಿರುವುದು ಖಂಡನೀಯ ಎಂದು ಕಿಡಿಕಾರಿದರು.
ಈ ಹೊಸ ಕಾಯ್ದೆಯಿಂದ ಕೂಲಿಕಾರರ ಮೇಲೆ ಹಲವು ದುಷ್ಪರಿಣಾಮಗಳು ಬೀರುತ್ತವೆ. ಉದಾ:-ರೈತರ ಋತುವಿನ ಸಂದರ್ಭದಲ್ಲಿ 60 ದಿನಗಳ ಕೃಷಿ ಕೆಲಸ ನಿರ್ಭಂದಿಸಿದನ್ನು ನೋಡಿದ್ದರೆ 125 ದಿನಗಳ ಕೆಲಸ ಸಿಗುವುದಿಲ್ಲ ಮತ್ತು ಕೆಲಸದಿಂದ ವಂಚಿತರಾಗುತ್ತಾರೆ. ಕೇಂದ್ರ ಸರ್ಕಾರ 60% ರಾಜ್ಯ ಸರ್ಕಾರ 40% ರಷ್ಟು ಮೊತ್ತವನ್ನು ಖರ್ಚು ಮಾಡಬೇಕೆಂಬ ಅಂಶಗಳಿಂದ ಕೂಲಿಕಾರರಿಗೆ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರ ಹಣ ನೀಡಿಲ್ಲವೆಂದು, ರಾಜ್ಯ ಸರ್ಕಾರವು ಕೇಂದ್ರ ಸರ್ಕಾರವು ಹಣ ಕೊಟ್ಟಿಲ್ಲವೆಂದು ಹೇಳುವ ಮೂಲಕ ಕೂಲಿ ಕಾರ್ಮಿಕರನ್ನು ಕೂಲಿಯಿಂದ ವಂಚಿತರಾಗಿ ಮಾಡುತ್ತದೆ ಎಂದು ದೂರಿದರು.
MNREGA ಕಾಯ್ದೆಯಲ್ಲಿ ಯಂತ್ರಗಳನ್ನು ಬಳಸಬಾರದು, ಮಾನವ ದಿನಗಳ ಮೂಲಕ ಉದ್ಯೋಗ ಸೃಷ್ಟಿಸಲು ಕಾನೂನು ಇತ್ತು ಈಗ ಈ ಹೊಸ ಕಾಯ್ದೆಯಲ್ಲಿ ಯಂತ್ರಗಳನ್ನು ಬಳಸಿ ಗುತ್ತಿಗೆದಾರರಿಗೆ ಅನುಕೂಲ ಮಾಡಿಕೊಡುವ ಅಂಶಗಳನ್ನು ಒಳಗೊಂಡಿದೆ. ಆದ್ದರಿಂದ ಕೂಲಿಕಾರರಿಗೆ ಕೂಲಿ ದಿನಗಳು ಸಿಗದಂತೆ ಆಗುತ್ತದೆ. ಗುತ್ತಿಗೆದಾರರಿಗೆ ಅನುಕೂಲವಾಗುತ್ತದೆ. ಕೇಂದ್ರ ಸರ್ಕಾರ ಅನುಮೋದನೆ ಪಡೆದು ಈ ಉದ್ಯೋಗ ಯೋಜನೆಯಲ್ಲಿ ಕೆಲಸ ಕೊಡಬೇಕೆಂಬ ನಿಯಮಗಳು ಹಾಗೂ ಕೇಂದ್ರ ಸರ್ಕಾರ ಅಧಿಸೂಚಿತ ರಾಜ್ಯ ಮತ್ತು ಜಿಲ್ಲೆಗಳಲ್ಲಿ ಮಾತ್ರವೇ ಉದ್ಯೋಗ ಖಾತರಿ ಜಾರಿ ಎರಬ ಅಂತಗಳು ಕೂಲಿಕಾರದ ಹಕ್ಕನ್ನು ಕಸಿದುಕೊಳ್ಳಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಯನ್ನು ಕೃಷಿ ಮತ್ತು ಗ್ರಾಮೀಳಾ ಕಾರ್ಮಿಕ ಸಂಘದ ಮಂಡ್ಯ ಜಿಲ್ಲಾ ಸಮಿತಿಯು ಬಲವಾಗಿ ಖಂಡಿಸುತ್ತದೆ ಮತ್ತು ಈ ಹೊಸ ಪದ್ಧತಿ ಕಾಯ್ದೆಯು ಉದ್ಯೋಗ ಖಾತ್ರಿಯನ್ನು ಮುಂದಿನ ದಿನಗಳಲ್ಲಿ ತೆಗೆದುಹಾಕುವ ಹುನ್ನಾರವಾಗಿದ್ದು, ಕೂಡಲೇ ಇದನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಮುಖಂಡರಾದ ಪುಟ್ಟಮಾದು, ಶಿವಮಲ್ಲಯ್ಯ, ಹನುಮೇಶ್, ಸರೋಜಮ್ಮ, ವಸಂತ, ಅನಿತಾ, ಶೋಭ.ವೈ.ಎಸ್, ಅಮಾಸಯ್ಯ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.
The post ಕೂಲಿಕಾರರ ಕೆಲಸ ಕಿತ್ತುಕೊಳ್ಳುವ ‘ವಿಬಿ- ಜಿ ರಾಮ್ ಜಿ’ ಹಿಂಪಡೆಯಿರಿ ; ಪ್ರತಿಭಟನೆ appeared first on nudikarnataka.
Previous Article
ರಸ್ತೆ ವಿಸ್ತೀರ್ಣ ವಿರೋಧಿಸಿ ಎಸ್‌ಓಜಿ ಕಾಲೋನಿ ನಿವಾಸಿಗಳ ಪ್ರತಿಭಟನೆ
Next Article
IT ಇಲಾಖೆಯವರು ಹೆಚ್ ಡಿಕೆ ಜೇಬಲ್ಲೇ ಇದ್ದಾರಲ್ಲಾ- ಡಿಸಿಎಂ ಡಿಕೆ ಶಿವಕುಮಾರ್ ಟಾಂಗ್