Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಮದ್ದೂರು | ತಾಲ್ಲೂಕು ಕಛೇರಿಗೆ ಜಿಲ್ಲಾಧಿಕಾರಿ ಅನಿರೀಕ್ಷಿತ ಭೇಟಿ : ಪರಿಶೀಲನೆ

    1 week ago

    ಮದ್ದೂರು ತಾಲ್ಲೂಕು ಕಚೇರಿಯ ವಿವಿಧ ಶಾಖೆಗಗಳಿಗೆ ಬುಧವಾರ ಭೇಟಿ ನೀಡಿ ಪರಿಶೀಲಿಸಿದ ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಅವರು, ಕಚೇರಿ ಕಾರ್ಯನಿರ್ವಹಣೆ, ಕಡತ ವಿಲೇವಾರಿ, ಸಾರ್ವಜನಿಕ ಸೇವೆಗಳ ಅನುಷ್ಠಾನ ಹಾಗೂ ಸಿಬ್ಬಂದಿಗಳ ಹಾಜರಾತಿಯನ್ನು ಪರಿಶೀಲಿಸಿದರು. ಕಚೇರಿಯಲ್ಲಿ ಹಾಜರಿದ್ದ ಸಾರ್ವಜನಿಕರ ಅಹವಾಲುಗಳನ್ನು ನೇರವಾಗಿ ಸ್ವೀಕರಿಸಿ, ಪ್ರತಿ ಅಹವಾಲನ್ನು ಗಂಭೀರವಾಗಿ ಪರಿಗಣಿಸಿ ನಿಗದಿತ ಅವಧಿಯೊಳಗೆ ಇತ್ಯರ್ಥಪಡಿಸುವಂತೆ ತಹಶೀಲ್ದಾರ್ ಅವರಿಗೆ ಸೂಚನೆ ನೀಡಿದರು. ಇ-ಆಫೀಸ್ ವ್ಯವಸ್ಥೆಯಲ್ಲಿ ಬಾಕಿಯಿರುವ ಎಲ್ಲಾ ಕಡತಗಳನ್ನು ಕಾಲಮಿತಿಯೊಳಗೆ ವಿಲೇವಾರಿ ಮಾಡಿ, ಡಿಜಿಟಲ್ ಕಾರ್ಯವಿಧಾನವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ನಿರ್ದೇಶನ ನೀಡಿದರು. […]

    The post ಮದ್ದೂರು | ತಾಲ್ಲೂಕು ಕಛೇರಿಗೆ ಜಿಲ್ಲಾಧಿಕಾರಿ ಅನಿರೀಕ್ಷಿತ ಭೇಟಿ : ಪರಿಶೀಲನೆ appeared first on nudikarnataka.



    ಮದ್ದೂರು ತಾಲ್ಲೂಕು ಕಚೇರಿಯ ವಿವಿಧ ಶಾಖೆಗಗಳಿಗೆ ಬುಧವಾರ ಭೇಟಿ ನೀಡಿ ಪರಿಶೀಲಿಸಿದ ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಅವರು, ಕಚೇರಿ ಕಾರ್ಯನಿರ್ವಹಣೆ, ಕಡತ ವಿಲೇವಾರಿ, ಸಾರ್ವಜನಿಕ ಸೇವೆಗಳ ಅನುಷ್ಠಾನ ಹಾಗೂ ಸಿಬ್ಬಂದಿಗಳ ಹಾಜರಾತಿಯನ್ನು ಪರಿಶೀಲಿಸಿದರು.

    ಕಚೇರಿಯಲ್ಲಿ ಹಾಜರಿದ್ದ ಸಾರ್ವಜನಿಕರ ಅಹವಾಲುಗಳನ್ನು ನೇರವಾಗಿ ಸ್ವೀಕರಿಸಿ, ಪ್ರತಿ ಅಹವಾಲನ್ನು ಗಂಭೀರವಾಗಿ ಪರಿಗಣಿಸಿ ನಿಗದಿತ ಅವಧಿಯೊಳಗೆ ಇತ್ಯರ್ಥಪಡಿಸುವಂತೆ ತಹಶೀಲ್ದಾರ್ ಅವರಿಗೆ ಸೂಚನೆ ನೀಡಿದರು.

    ಇ-ಆಫೀಸ್ ವ್ಯವಸ್ಥೆಯಲ್ಲಿ ಬಾಕಿಯಿರುವ ಎಲ್ಲಾ ಕಡತಗಳನ್ನು ಕಾಲಮಿತಿಯೊಳಗೆ ವಿಲೇವಾರಿ ಮಾಡಿ, ಡಿಜಿಟಲ್ ಕಾರ್ಯವಿಧಾನವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ನಿರ್ದೇಶನ ನೀಡಿದರು.

    ಸಾರ್ವಜನಿಕರ ಅನಗತ್ಯ ಅಲೆದಾಟ ತಪ್ಪಿಸುವ ಉದ್ದೇಶದಿಂದ, ಆದಾಯ ಮತ್ತು ಜಾತಿ ಪ್ರಮಾಣಪತ್ರ, ಭೂಹಿಡುವಳಿ ಪ್ರಮಾಣಪತ್ರ, ವಂಶವೃಕ್ಷ, ನಿವಾಸ ಪ್ರಮಾಣಪತ್ರ ಸೇರಿದಂತೆ ಎಲ್ಲಾ ಸೇವೆಗಳನ್ನು ಸಕಾಲ ಯೋಜನೆಯಡಿ ನಿಗದಿತ ಅವಧಿಯಲ್ಲಿಯೇ ಒದಗಿಸಬೇಕು ಎಂದು ಕಟ್ಟುನಿಟ್ಟಾಗಿ ಸೂಚಿಸಿದರು. ವಿಳಂಬ ಅಥವಾ ನಿರ್ಲಕ್ಷ್ಯ ಕಂಡುಬಂದಲ್ಲಿ ಸಂಬಂಧಿಸಿದ ನೌಕರರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

    ಕಚೇರಿಯ ಅಭಿಲೇಖಾಲಯ ಶಾಖೆ ಹಾಗೂ ದಾಖಲೆ ನಿರ್ವಹಣೆಯನ್ನು ಪರಿಶೀಲಿಸಿದ ಮಾನ್ಯರು, ಸಾರ್ವಜನಿಕರು ದಾಖಲೆಗಳನ್ನು ಕೋರಿ ಸಲ್ಲಿಸುವ ಅರ್ಜಿಗಳ ಸಂದರ್ಭದಲ್ಲಿ ಸರ್ಕಾರಕ್ಕೆ ನಿಗದಿತ ಶುಲ್ಕವನ್ನು ಕಡ್ಡಾಯವಾಗಿ ವಸೂಲಿಸಿ, ಸ್ವೀಕರಿಸಿದ ದಿನವೇ ಸರ್ಕಾರಕ್ಕೆ ಜಮಾ ಮಾಡಿ, ದಾಖಲೆಗಳನ್ನು ಸರಿಯಾಗಿ ಸಂರಕ್ಷಿಸುವಂತೆ ಸೂಚಿಸಿದರು. ಜೊತೆಗೆ ದಾಖಲೆಗಳ ಡಿಜಿಟಲೀಕರಣ ಹಾಗೂ ವ್ಯವಸ್ಥಿತ ಸಂಗ್ರಹಣೆಗೆ ಒತ್ತು ನೀಡುವಂತೆ ತಿಳಿಸಿದರು.

    ಹೋಬಳಿ ಮಟ್ಟದ ಎಲ್ಲಾ ಸಿಬ್ಬಂದಿಯು ಕೇಂದ್ರಸ್ಥಾನದಲ್ಲಿಯೇ ಕಡ್ಡಾಯವಾಗಿ ಲಭ್ಯವಿದ್ದು, ಸಾರ್ವಜನಿಕರ ಮನವಿಗಳಿಗೆ ತ್ವರಿತ ಸ್ಪಂದನೆ ನೀಡಬೇಕೆಂದು ಕಟ್ಟುನಿಟ್ಟಾಗಿ ನಿರ್ದೇಶನ ನೀಡಿದರು. ಕಚೇರಿಗೆ ನಿಗದಿತ ಸಮಯಕ್ಕೆ ಹಾಜರಾಗುವುದು, ಐಡಿ ಕಾರ್ಡ್ ಧರಿಸುವಿಕೆ, ಸ್ವಚ್ಛತೆ ಕಾಪಾಡುವುದು ಹಾಗೂ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸುವುದು ಕಡ್ಡಾಯ ಎಂದು ಸೂಚಿಸಿದರು.

    ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಾದ ಆಧಾರ್ ಸೀಡಿಂಗ್, ಇ-ಪೌತಿ ಖಾತಾ ಆಂದೋಲನ, ನಮೂನೆ 1 ರಿಂದ 5, ಗೈರು ವಿಲೆ ಕಡತಗಳ ವಿಲೇವಾರಿ, ಸಕಾಲ ಸೇವೆಗಳು, ನ್ಯಾಯಾಲಯ ಪ್ರಕರಣಗಳು, ಒತ್ತುವರಿ ತೆರವು, ಭೂ ಸುರಕ್ಷ, 11ಇ ತಿದ್ದುಪಡಿ, ಬಗರ್ ಹುಕ್ಕುಂ ಅರ್ಜಿಗಳ ವಿಲೇವಾರಿ ಹಾಗೂ ಹಕ್ಕುಪತ್ರ ವಿತರಣೆಗಳ ಪ್ರಗತಿಯನ್ನು ಸಮಗ್ರವಾಗಿ ಪರಿಶೀಲಿಸಿದರು.

    The post ಮದ್ದೂರು | ತಾಲ್ಲೂಕು ಕಛೇರಿಗೆ ಜಿಲ್ಲಾಧಿಕಾರಿ ಅನಿರೀಕ್ಷಿತ ಭೇಟಿ : ಪರಿಶೀಲನೆ appeared first on nudikarnataka.

    Click here to Read More
    Previous Article
    ನಾನು ಕೋರ್ಟ್ ಸ್ಟೇ ತಂದು ರಾಜಕಾರಣ ಮಾಡ್ತಿಲ್ಲ: ಪ್ರತಾಪ್ ಗೆ ನಾಗೇಂದ್ರ ಟಾಂಗ್.
    Next Article
    ಬಳ್ಳಾರಿ DIGP ವರ್ತಿಕಾ ಕಟಿಯಾರ್ ಎತ್ತಂಗಡಿ; ನೂತನ SP ಮತ್ತು IGP ನೇಮಿಸಿದ ಸರ್ಕಾರ

    Related ಮುಖಪುಟ Updates:

    Are you sure? You want to delete this comment..! Remove Cancel

    Comments (0)

      Leave a comment