ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಇತಿಹಾಸದಲ್ಲಿ ಅತಿ ಹೆಚ್ಚು ಅವಧಿಗೆ ಮುಖ್ಯಮಂತ್ರಿಯಾದ ಅವಕಾಶ ಪಡೆದು ಕೆಲಸ ಮಾಡುತ್ತಿದ್ದಾರೆ ಎಂದು ಮೈಶುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್ ತಿಳಿಸಿದರು. ಮಂಡ್ಯ ಜಿಲ್ಲಾ ಕುರುಬರ ಸಂಘ ಶೋಷಿತ ಹಾಗೂ ಪ್ರಗತಿಪರ ಸಂಘಟನೆಗಳ ವತಿಯಿಂದ ಮಂಡ್ಯ ನಗರದ ಕನಕ ಭವನದಲ್ಲಿ ದೇವರಾಜ ಅರಸು ರವರ ನಂತರ ಕರ್ನಾಟಕ ರಾಜ್ಯದಲ್ಲಿ ದೀರ್ಘಕಾಲ ಮುಖ್ಯಮಂತ್ರಿಯಾಗಿ ಮುಂದುವರೆ ಯುತ್ತಿರುವ ಅಹಿಂದ ನಾಯಕ ಸಿದ್ದರಾಮಯ್ಯರವರ ಆಡಳಿತದ ಸಂಭ್ರಮಾಚರಣೆಯನ್ನು ಆಚರಿಸಿ ಅವರು ಮಾತನಾಡಿದರು. ದೇವರಾಜ್ ಅರಸು ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು […]
The post ದಾಖಲೆ ನಿರ್ಮಿಸಿದ ಸಿದ್ದರಾಮಯ್ಯ ಅವರಿಂದ ಜನಮೆಚ್ಚುವ ಆಡಳಿತ : ಗಂಗಾಧರ್ appeared first on nudikarnataka.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಇತಿಹಾಸದಲ್ಲಿ ಅತಿ ಹೆಚ್ಚು ಅವಧಿಗೆ ಮುಖ್ಯಮಂತ್ರಿಯಾದ ಅವಕಾಶ ಪಡೆದು ಕೆಲಸ ಮಾಡುತ್ತಿದ್ದಾರೆ ಎಂದು ಮೈಶುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್ ತಿಳಿಸಿದರು.
ಮಂಡ್ಯ ಜಿಲ್ಲಾ ಕುರುಬರ ಸಂಘ ಶೋಷಿತ ಹಾಗೂ ಪ್ರಗತಿಪರ ಸಂಘಟನೆಗಳ ವತಿಯಿಂದ ಮಂಡ್ಯ ನಗರದ ಕನಕ ಭವನದಲ್ಲಿ ದೇವರಾಜ ಅರಸು ರವರ ನಂತರ ಕರ್ನಾಟಕ ರಾಜ್ಯದಲ್ಲಿ ದೀರ್ಘಕಾಲ ಮುಖ್ಯಮಂತ್ರಿಯಾಗಿ ಮುಂದುವರೆ ಯುತ್ತಿರುವ ಅಹಿಂದ ನಾಯಕ ಸಿದ್ದರಾಮಯ್ಯರವರ ಆಡಳಿತದ ಸಂಭ್ರಮಾಚರಣೆಯನ್ನು ಆಚರಿಸಿ ಅವರು ಮಾತನಾಡಿದರು.
ದೇವರಾಜ್ ಅರಸು ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 7240 ದಿನಗಳು ಮುಖ್ಯಮಂತ್ರಿಯಾಗಿ ಆಡಳಿತ ನಡೆಸುತ್ತಿದ್ದಾರೆ. ಸಿದ್ದರಾಮಯ್ಯ ಅವರು ಜನ ಮೆಚ್ಚುವ ಆಡಳಿತ ನೀಡುವ ಮೂಲಕ ಬಡವರ ಹಾಗೂ ಶೋಷಿತರ ಪರವಾಗಿ ಕೆಲಸ ಮಾಡುತ್ತಿದ್ದು ರಾಷ್ಟ್ರವೇ ಮೆಚ್ಚುವ ರೀತಿ ಆಡಳಿತ ಕೊಡುತ್ತಿದ್ದಾರೆ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಅವಕಾಶವನ್ನು ಇನ್ನೂ ಮುಂದುವರಿಸಲಿ ರಾಜ್ಯದ ಸೇವೆ ಮಾಡುವ ಅವಕಾಶ ಇನ್ನೂ ಹೆಚ್ಚಿನ ರೀತಿ ದೊರೆಯಲಿ ಎಂದು ಶುಭ ಹಾರೈಸಿದರು.
ಮಂಡ್ಯ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಎಂ.ಎಲ್.ಸುರೇಶ್ ಮಾತನಾಡಿ, ಕನಕ ಭವನದ ಆವರಣದಲ್ಲಿರುವ ವರಸಿದ್ಧಿ ವಿನಾಯಕ ದೇವಾಲಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಶೋಷಿತ ಸಮುದಾಯ ದವರು ಪೂಜೆ ಸಲ್ಲಿಸಿ ಪಟಾಕಿ ಸಿಡಿಸಿ ಹಂಚಿ ಸಿದ್ದರಾಮಯ್ಯ ಅವರ ಸಂಭ್ರಮಾಚರಣೆ ಕಾರ್ಯಕ್ರಮ ಏರ್ಪಡಿಸಿದ್ದೇವೆ ಎಂದು ತಿಳಿಸಿದರು.
ದೇವರಾಜು ಅರಸು ನಂತರ ದೀರ್ಘಕಾಲದ ಮುಖ್ಯಮಂತ್ರಿ ಯಾಗಿ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯ ಅವರು ರಾಜ್ಯಕ್ಕೆ ಹೆಮ್ಮೆ ಎಂದು ತಿಳಿಸಿದರು.
ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸುವ ಮೂಲಕ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಹಿಂದುಳಿದ ವರ್ಗಗಳು ಸ್ಪರ್ಧಿಸಲು ಹೆಚ್ಚಿನ ಅವಕಾಶ ಮಾಡಿಕೊಟ್ಟರು ಎಂದು ಹೇಳಿದರು.
ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಪಂಚ ಗ್ಯಾರಂಟಿ ಯೋಜನೆಗಳನ್ನು ರಾಜ್ಯದಲ್ಲಿ ಅನುಷ್ಠಾನ ಮಾಡುವ ಮೂಲಕ ಎಲ್ಲಾ ವರ್ಗದ ಜನರಿಗೆ ಈ ಅವಕಾಶವನ್ನು ಮಾಡಿ ಕೊಟ್ಟಿದ್ದಾರೆ ಎಂದು ಹೇಳಿದರು.
ರಾಜ್ಯ ಜವಳಿ ಮತ್ತು ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ. ನಾಗೇಂದ್ರಕುಮಾರ್ ಮಾತನಾಡಿ ಮುಖ್ಯಮಂತ್ರಿಯಾಗಿ ಸಿದ್ದ ರಾಮಯ್ಯ ಅವರು ದೇವರಾಜು ಅರಸು ಅವರ ಮುಖ್ಯಮಂತ್ರಿ ಅವಧಿಯ ದಾಖಲೆಯನ್ನು ಸರಿಗಟ್ಟಿದ್ದಾರೆ ಎಂದು ಹೇಳಿದರು.
ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಪ್ರತಿಯೊಂದು ವರ್ಗಕ್ಕೂ ಕಾರ್ಯಕ್ರಮಗಳನ್ನು ಕೊಟ್ಟು ಹೆಚ್ಚಿನ ಅವಧಿಯಲ್ಲಿ ಅರಸು ದಾಖಲೆಯನ್ನು ರೆಕಾರ್ಡ್ ಮಾಡಿದ್ದಾರೆ.ಸಿದ್ದರಾಮಯ್ಯ ಅವರು ಹೆಸರಲ್ಲ ಅದೊಂದು ಶಕ್ತಿ,ಚೈತನ್ಯ, ಧ್ವನಿ ಇಲ್ಲದವರಿಗೆ ಧ್ವನಿಯಾಗಿ ನಿಂತ ದಿಟ್ಟ ನಾಯಕ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮುಡಾ ಅಧ್ಯಕ್ಷ ಬಿ.ಪಿ.ಪ್ರಕಾಶ್,ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ವಿಜಯಲಕ್ಷ್ಮಿ ರಘುನಂದನ್,ಕೆಪಿಸಿಸಿ ರಾಜ್ಯ ಸಂಘಟನಾ ಕಾರ್ಯದರ್ಶಿ ಕರಡಿಕೊಪ್ಪಲು ಪುಟ್ಟಸ್ವಾಮಿಗೌಡ,
ಮುಖಂಡರಾದ ಎಲ್.ಸಂದೇಶ್, ಸಾವಿತ್ರಮ್ಮ, ಶ್ರೀನಿವಾಸ, ಬೀರಪ್ಪ, ಸಾತನೂರು ರಾಜು, ಸಿ.ಎಂ.ದ್ಯಾವಪ್ಪ, ಅಮ್ಜದ್ ಪಾಷ, ಶಶಿಧರ್, ಶ್ರೀಧರ್, ಹಳುವಾಡಿ ವೆಂಕಟೇಶ್ ಸೇರಿದಂತೆ ಇತರರು ಭಾಗವಹಿಸಿದ್ದರು
The post ದಾಖಲೆ ನಿರ್ಮಿಸಿದ ಸಿದ್ದರಾಮಯ್ಯ ಅವರಿಂದ ಜನಮೆಚ್ಚುವ ಆಡಳಿತ : ಗಂಗಾಧರ್ appeared first on nudikarnataka.
Previous Article
ಸಿಎಂ ಸ್ಪಷ್ಟನೆ ಕೊಟ್ಟ ಮೇಲೆ ನಮ್ಮನ್ನ ಕೇಳಿ ಏನು ಪ್ರಯೋಜನ? ಸಚಿವ ಪ್ರಿಯಾಂಕ್ ಖರ್ಗೆ
Next Article
ಜ.11 ರಿಂದ ರಂಗಾಯಣದಲ್ಲಿ 25ನೇ ವರ್ಷದ ಬಹುರೂಪಿ ನಾಟಕೋತ್ಸವ