Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಮಹಿಳಾ ಮತ್ತು ಪುರುಷರಿಗೆ ಸಮಾನ ವೇತನ ನೀಡಿದ ಉದ್ಯೋಗ ಖಾತರಿ ಯೋಜನೆ ಹೆಸರು ಬದಲಾವಣೆಗೆ ಅಸಮಧಾನ

    1 week ago

    ದಾವಣಗೆರೆ: ಅಭಿವೃದ್ಧಿ ಕಾಮಗಾರಿ ದೆಹಲಿ ಮಟ್ಟದಲ್ಲಿ ತೀರ್ಮಾನ ಆಗಬೇಕಿಲ್ಲ. ಪಂಚಾಯತ್‍ನಲ್ಲಿ ಗ್ರಾಮಸಭೆ ಮೂಲಕ ಗ್ರಾಪಂ ಸದಸ್ಯರು ತೀರ್ಮಾನ ಕೈಗೊಂಡು ನಮ್ಮ ಹಳ್ಳಿಯಲ್ಲಿ ಇಷ್ಟು ಶೌಚಾಲಯ ಆಗಬೇಕು. ಇಷ್ಟು ಶಾಲೆಗಳ ಅಭಿವೃದ್ಧಿ ಆಗಬೇಕು. ನಮ್ಮ ಹೊಲದ ರಸ್ತೆಗಳು ಅಭಿವೃದ್ಧಿ ಆಗಬೇಕು. ಜಲಮೂಲಗಳ ಶುದ್ದೀಕರಣ, ಹೂಳೆತ್ತಿ ಅಂತರ್ಜಲ ಹೆಚ್ಚಳದ ಮೂಲಕ ಸ್ವಾವಲಂಬಿ ಹಳ್ಳಿಯ ರೂಪುರೇಷ ಹಾಕಿಕೊಂಡು ಪಂಚಾಯತ್‍ನಲ್ಲಿ ತೀರ್ಮಾನ ಮಾಡಿಕೊಂಡರೆ ಜನರು ಉದ್ಯೋಗ ಖಾತರಿಯಲ್ಲಿ ಹಳ್ಳಿಯನ್ನು ಕಟ್ಟುವ ಕೆಲಸ ಮಾಡುತ್ತಾರೆ ಎಂದು ದಾವಣಗೆರೆ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್ (Dr.Prabha […]

    ದಾವಣಗೆರೆ: ಅಭಿವೃದ್ಧಿ ಕಾಮಗಾರಿ ದೆಹಲಿ ಮಟ್ಟದಲ್ಲಿ ತೀರ್ಮಾನ ಆಗಬೇಕಿಲ್ಲ. ಪಂಚಾಯತ್‍ನಲ್ಲಿ ಗ್ರಾಮಸಭೆ ಮೂಲಕ ಗ್ರಾಪಂ ಸದಸ್ಯರು ತೀರ್ಮಾನ ಕೈಗೊಂಡು ನಮ್ಮ ಹಳ್ಳಿಯಲ್ಲಿ ಇಷ್ಟು ಶೌಚಾಲಯ ಆಗಬೇಕು. ಇಷ್ಟು ಶಾಲೆಗಳ ಅಭಿವೃದ್ಧಿ ಆಗಬೇಕು. ನಮ್ಮ ಹೊಲದ ರಸ್ತೆಗಳು ಅಭಿವೃದ್ಧಿ ಆಗಬೇಕು. ಜಲಮೂಲಗಳ ಶುದ್ದೀಕರಣ, ಹೂಳೆತ್ತಿ ಅಂತರ್ಜಲ ಹೆಚ್ಚಳದ ಮೂಲಕ ಸ್ವಾವಲಂಬಿ ಹಳ್ಳಿಯ ರೂಪುರೇಷ ಹಾಕಿಕೊಂಡು ಪಂಚಾಯತ್‍ನಲ್ಲಿ ತೀರ್ಮಾನ ಮಾಡಿಕೊಂಡರೆ ಜನರು ಉದ್ಯೋಗ ಖಾತರಿಯಲ್ಲಿ ಹಳ್ಳಿಯನ್ನು ಕಟ್ಟುವ ಕೆಲಸ ಮಾಡುತ್ತಾರೆ ಎಂದು ದಾವಣಗೆರೆ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್ (Dr.Prabha Malikarjun) ತಿಳಿಸಿದರು.

    ಅವರು ಮಾಯಕೊಂಡ ಕ್ಷೇತ್ರ ವ್ಯಾಪ್ತಿಯ ಹೊನ್ನೂರು ಗ್ರಾಮದಲ್ಲಿ ಮಂಗಳವಾರ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಸಹಯೋಗದಲ್ಲಿ ಆಯೋಜಿಸಿದ್ದ ಮನರೇಗಾ ಕಾಮಗಾರಿ ಸ್ಥಳದಲ್ಲಿ ಆರೋಗ್ಯ ತಪಾಸಣಾ ಶಿಬಿರ ಮತ್ತು ಕೂಲಿಕಾರರ ಕುಂದುಕೊರತೆಗಳ ಪರಿಶೀಲನೆ ಕಾರ್ಯಕ್ರಮ ಉದ್ಘಾಟಿಸಿ ಅವರು (Dr.Prabha Malikarjun) ಮಾತನಾಡಿದರು.

    ಉದ್ಯೋಗ ಖಾತರಿ ಯೋಜನೆ ಅನುಷ್ಟಾನದಲ್ಲಿ ಗ್ರಾಮ ಪಂಚಾಯಿತಿಯಲ್ಲಿ ಉತ್ತಮ ಕೆಲಸ ಮಾಡಿ ಜನರಿಗೆ ಉದ್ಯೋಗ ನೀಡಿದ್ದಾರೆ. ಈ ನಿಟ್ಟಿನಲ್ಲಿ ಹೊನ್ನೂರು ಗ್ರಾಪಂನಲ್ಲಿ ಅಧಿಕಾರಿಗಳು ಒಳ್ಳೆಯ ಕೆಲಸ ಮಾಡಿದ್ದರಿಂದ ಇಲ್ಲಿನ ಗ್ರಾಪಂ ಉದ್ಯೋಗ ಖಾತರಿಯಲ್ಲಿ ನಂ.1 ಸ್ಥಾನ ಪಡೆದುಕೊಂಡಿದೆ ಎಂದು ಅವರು (Dr.Prabha Malikarjun) ಶ್ಲಾಘಿಸಿದರು.

    ಮನರೇಗಾದಿಂದ ದೇಶದಲ್ಲಿ 5 ರಿಂದ 6 ಕೋಟಿ ಜನ ಕೂಲಿಕಾರ್ಮಿಕರು ಆರ್ಥಿಕವಾಗಿ ಸಬಲರಾಗಿದ್ದಾರೆ. 2005 ರಿಂದ 2026 ರವರೆಗೆ ಸುಮಾರು 20 ವರ್ಷಗಳಿಂದ ಗ್ರಾಮಗಳ ಅಭಿವೃದ್ಧಿಗೆ ಮನರೇಗಾ ಯೋಜನೆ ಕಾರಣವಾಗಿತ್ತು. ಈಗ ಇದನ್ನು ಕೇಂದ್ರ ಸರ್ಕಾರ ಬದಲಾಯಿಸಿ ವಿಕಸಿತ ಭಾರತ-ಗ್ಯಾರಂಟೀ ಫಾರ್ ರೋಜಗಾರ್ ಮತ್ತು ಆವೀಜಿಕ ಮಿಷನ್ ವಿಬಿ-ಜಿ.ರಾಮ್ ಜಿ ಕಾಯ್ದೆ-2005 ಎಂದು ಬದಲಿಸಿದ್ದು ಹಳ್ಳಿ ಅಧಿಕಾರ ಕಸಿದುಕೊಂಡು, ಗ್ರಾಮೀಣ ಆರ್ಥಿಕತೆಗೆ ಪೆಟ್ಟು ನೀಡಲು ಮುಂದಾಗಿದೆ. ಮಹಿಳಾ ಮತ್ತು ಪುರುಷರಿಗೆ ಸಮಾನವಾದ ಕೆಲಸ ಕೊಡುವ ಯೋಜನೆವೊಂದಿದ್ದರೆ ಅದು, ‘ಮನರೇಗಾ’ ಯೋಜನೆ. ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಮಹಾಪುರುಷನ ಹೆಸರಿಟ್ಟ ‘ಮನರೇಗಾ’ಯೋಜನೆಯ ಹೆಸರನ್ನೇ ಅಳಿಸುವ ಕೆಲಸ ಮಾಡಿದೆ ಎಂದು ಸಂಸದರು (Dr.Prabha Malikarjun) ಅಸಮಧಾನ ವ್ಯಕ್ತಪಡಿಸಿದರು.


    ಶಾಸಕರಾದ ಕೆ.ಎಸ್.ಬಸವಂತಪ್ಪ ಅವರು ಹಳ್ಳಿ ಜನರ ದನಿಯಾಗಿ, ಅವರ ಕಷ್ಟ-ಸುಖಗಳನ್ನು ಅಂಚಿಕೊಂಡಿದ್ದಾರೆ. ಅವರು ಬಡವರ ಕಷ್ಟ-ಸುಖಗಳನ್ನು ಚೆನ್ನಾಗಿ ಅರಿತುಕೊಂಡಿದ್ದಾರೆ. ಅವರ ಜೊತೆಯಲ್ಲಿ ಮಾಯಕೊಂಡ ಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗಿಯಾದಾಗ ಅವರಿಂದ ಸಾಕಷ್ಟು ಕಲಿಯುವ ಅವಕಾಶ ಸಿಕ್ಕಿದೆ. ಸ್ವಯಂ ಉದ್ಯೋಗದಲ್ಲಿ ನೀವು ಹೇಗೆ ಆರ್ಥಿಕವಾಗಿ ಸಬಲರಾಗಬಹುದು ಎಂಬ ಬಗ್ಗೆ ತಿಳಿಸಿದ್ದಾರೆ ಎಂದು (Dr.Prabha Malikarjun) ಮೆಚ್ಚುಗೆ ವ್ಯಕ್ತಪಡಿಸಿದರು.


    ಶಾಸಕರಾದ ಕೆ.ಎಸ್.ಬಸವಂತಪ್ಪ ಮಾತನಾಡಿ, ದೇಶದಲ್ಲಿ ದುಡಿಯುವ ವರ್ಗಕ್ಕೆ ಕೆಲಸ ಕೊಡಬೇಕೆಂಬ ಉದ್ದೇಶದಿಂದ 2005ರಲ್ಲಿ ಯುಪಿಎ ಸರ್ಕಾರ ನೇತೃತ್ವ ವಹಿಸಿದ್ದ ಮಾಜಿ ಪ್ರಧಾನಿ ದಿ.ಮನಮೋಹನ್ ಸಿಂಗ್ ಅವರು ‘ಮನರೇಗಾ’ ಯೋಜನೆ ಜಾರಿಗೊಳಿಸುವ ಮೂಲಕ ದುಡಿಯುವ ವರ್ಗಕ್ಕೆ ಕೆಲಸ ಕೊಟ್ಟು ಆರ್ಥಿಕವಾಗಿ ಸಬಲರನ್ನಾಗಿ ಮಾಡಿತು. ಅಂದಿನಿಂದ ಈವರೆಗೆ ದೇಶದ ಗ್ರಾಮೀಣ ಪ್ರದೇಶಗಳು ಅಭಿವೃದ್ಧಿ ಪಥದಲ್ಲಿ ಸಾಗುತ್ತಿವೆ. ಮನರೇಗಾ’ ಯೋಜನೆ ಜಾರಿಗೊಳ್ಳುವ ಪೂರ್ವದಲ್ಲಿ ಇಲ್ಲಿನ ಹಳ್ಳಿಯ ಜನರು ಮಹಾರಾಷ್ಟ್ರ, ಕೇರಳ ಸೇರಿದಂತೆ ಹೊರ ರಾಜ್ಯ ಹಾಗೂ ರಾಜ್ಯದ ಕಾಫಿನಾಡು ಸೇರಿದಂತೆ ವಿವಿಧ ಜಿಲ್ಲೆಗಳಿಗೆ ಉದ್ಯೋಗ ಅರಸಿ ವಲಸೆ ಹೋಗುತ್ತಿದ್ದರು. ಯಾವಾಗ ಹಿಂದಿನ ಯುಪಿಎ ಸರ್ಕಾರ ‘ಮನರೇಗಾ’ ಯೋಜನೆ ಜಾರಿಗೊಳಿಸಿತು. ಅಂದಿನಿಂದ ಈವರೆಗೂ ಹಳ್ಳಿಯ ಜನರು ಬದುಕು ಕಂಡುಕೊಂಡು ಆರ್ಥಿಕವಾಗಿ ಸಬಲರಾದರು. ಆದರೆ ಈಗ ಕೇಂದ್ರ ಸರ್ಕಾರ ‘ಮನರೇಗಾ’ ಹೆಸರು ಬದಲಾಯಿಸುತ್ತಿದೆ ಎಂದು (Dr.Prabha Malikarjun) ಅಸಮಧಾನ ವ್ಯಕ್ತಪಡಿಸಿದರು.

    ಕಾರ್ಯಕ್ರಮದಲ್ಲಿ ಜಿಪಂ ಸಿಇಓ ಗಿತ್ತೆ ಮಾಧವ ವಿಠ್ಠಲ್ ರಾವ್, ತಾಪಂ ಇಓ ರಾಮಭೋವಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಷಣ್ಮುಖಪ್ಪ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

    Click here to Read More
    Previous Article
    ವೆನೆಜುವೆಲಾ ಬಳಿ ರಷ್ಯಾ ಜಲಾಂತರ್ಗಾಮಿ ನೌಕೆ
    Next Article
    ಪೊಲೀಸ್ ಠಾಣೆಯಲ್ಲೇ ಹೆಡ್ ಕಾನ್ಸ್ ಟೇಬಲ್ ಆತ್ಮಹತ್ಯೆಗೆ ಶರಣು

    Related ಮುಖಪುಟ Updates:

    Are you sure? You want to delete this comment..! Remove Cancel

    Comments (0)

      Leave a comment