ಬೆಂಗಳೂರು, ಜನವರಿ,8,2026 (www.justkannada.in): ಕಾಂಗ್ರೆಸ್ ಭವನ ನಿರ್ಮಾಣಕ್ಕಾಗಿ ಭೂಮಿ ಮಂಜೂರು, ಎಲ್ಲಾ ಬಿ ಖಾತಾಗಳಿಗೂ ಎ ಖಾತಾ ನೀಡಲು ಒಪ್ಪಿಗೆ ಸೇರಿ ಹಲವು ನಿರ್ಣಯಗಳನ್ನ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನ ಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದ್ದು, ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಕ್ರಮ ಪ್ರಾಧಿಕಾರದ ಅನುಮೋದನೆ ಪಡೆಯದೆ ರಚಿಸಿರುವ ಬಡಾವಣೆಗಳಲ್ಲಿನ ‘ಬಿ-ಖಾತಾ” ನಿವೇಶನ, ಕಟ್ಟಡ, ಫ್ಲಾಟ್ ಗಳಿಗೆ ‘ಎ-ಖಾತಾ’ ನೀಡಲು […]
The post ಕಾಂಗ್ರೆಸ್ ಭವನಕ್ಕೆ ಜಮೀನು, ಎಲ್ಲಾ ಬಿ ಖಾತಾಗಳಿಗೂ ಎ ಖಾತಾ ಭಾಗ್ಯ : ಸಂಪುಟ ಸಭೆಯಲ್ಲಿ ಹಲವು ತೀರ್ಮಾನ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.
ಬೆಂಗಳೂರು, ಜನವರಿ,8,2026 (www.justkannada.in): ಕಾಂಗ್ರೆಸ್ ಭವನ ನಿರ್ಮಾಣಕ್ಕಾಗಿ ಭೂಮಿ ಮಂಜೂರು, ಎಲ್ಲಾ ಬಿ ಖಾತಾಗಳಿಗೂ ಎ ಖಾತಾ ನೀಡಲು ಒಪ್ಪಿಗೆ ಸೇರಿ ಹಲವು ನಿರ್ಣಯಗಳನ್ನ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ.
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನ ಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದ್ದು, ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಕ್ರಮ ಪ್ರಾಧಿಕಾರದ ಅನುಮೋದನೆ ಪಡೆಯದೆ ರಚಿಸಿರುವ ಬಡಾವಣೆಗಳಲ್ಲಿನ ‘ಬಿ-ಖಾತಾ” ನಿವೇಶನ, ಕಟ್ಟಡ, ಫ್ಲಾಟ್ ಗಳಿಗೆ ‘ಎ-ಖಾತಾ’ ನೀಡಲು ತೀರ್ಮಾನಿಸಲಾಗಿದೆ.
ಹಾಗೆಯೇ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಲ್ಲುಕೋಟೆ ಗ್ರಾಮದ ಸ.ನಂ.49 ರಲ್ಲಿ 7.5 ಗುಂಟೆ ಜಮೀನು ಮತ್ತು ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಸಿರವಾರ ಸೀಮಾದಲ್ಲಿ 10 ಗುಂಟೆ ಜಮೀನನ್ನು ಕಾಂಗ್ರೆಸ್ ಭವನ ನಿರ್ಮಾಣಕ್ಕಾಗಿ ಕಾಂಗ್ರೆಸ್ ಭವನ ಟ್ರಸ್ಟ್, ಬೆಂಗಳೂರಿಗೆ ಮಂಜೂರು ಮಾಡಲು ಸಚಿವ ಸಂಪುಟ ಸಭೆಯಲ್ಲಿ ಅಸ್ತು ಎನ್ನಲಾಗಿದೆ.
ಇನ್ನು ಸನ್ನಡತೆ ಆಧಾರದ ಮೇಲೆ ವಿವಿಧ ಕೇಂದ್ರ ಕಾರಾಗೃಹಗಳಲ್ಲಿರುವ 33 ಜೀವಾವಧಿ ಶಿಕ್ಷಾ ಬಂಧಿಗಳ ಅವಧಿಪೂರ್ವ ಬಿಡುಗಡೆಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ಇತರೇ ನಿರ್ಧಾರಗಳು..
ಚಾಮರಾಜನಗರ ಜಿಲ್ಲೆಯಲ್ಲಿ166 ಗ್ರಾಮಗಳ ಬಹುಗ್ರಾಮ ಕುಡಿಯುವ ಸರಬರಾಜು ನೀರು ಯೋಜನೆಯ 3 ವರ್ಷಗಳ ಕಾರ್ಯಾಚರಣೆ ಮತ್ತು ನಿರ್ವಹಣೆ ಕಾಮಗಾರಿ 33.04 ಕೋಟಿ ಮೊತ್ತದಲ್ಲಿ ಅನುಷ್ಠಾನ
ಹೊಳೆನರಸೀಪುರ ಪಟ್ಟಣದಲ್ಲಿ ತಾಲೂಕು ಪಂಚಾಯಿತಿ ಕಚೇರಿ ಕಟ್ಟಡ ನಿರ್ಮಾಣ ಕಾಮಗಾರಿಯ 12.30 ಕೋಟಿ ರೂ. ಪರಿಷ್ಕೃತ ಮೊತ್ತಕ್ಕೆ ಅನುಮೋದನೆ.
KKRDB ಅನುದಾನದಿಂದ ಕಲಬುರಗಿಯಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಮೆಗಾ ಡೇರಿ ನಿರ್ಮಾಣ, KKRDB ಅನುದಾನದಿಂದ ಕಲಬುರಗಿಯಲ್ಲಿ 10 ಕೋಟಿ ವೆಚ್ಚದಲ್ಲಿ ಪ್ರಾದೇಶಿಕ ಸಹಕಾರ ಭವನ
24 ಕೋಟಿ ರೂ. ಅಂದಾಜು ಮೊತ್ತದಲ್ಲಿ ಬೆಂಗಳೂರಿನ ಜಯನಗರದಲ್ಲಿ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ 2ನೇ ಹಂತದ ಕಟ್ಟಡ ಕಾಮಗಾರಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ
40 ಕೋಟಿ ರೂ. ಅಂದಾಜು ಮೊತ್ತದಲ್ಲಿ ಚಿಕ್ಕಬಳ್ಳಾಪುರದ ನಂದಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ನೂತನ ಆಸ್ಪತ್ರೆ ಹಾಗೂ ಜಿಲ್ಲಾಸ್ಪತ್ರೆಗೆ ಅವಶ್ಯವಿರುವ ಯಂತ್ರೋಪಕರಣ ಮತ್ತು ಪೀಠೋಪಕರಣ ಖರೀದಿ.
KSDL ಬೆಂಗಳೂರು ಸಂಕೀರ್ಣಕ್ಕೆ 17.70 ಕೋಟಿ ಮೊತ್ತದ ಸಾಬೂನು ತಯಾರಿಸುವ ಯಂತ್ರ ಖರೀದಿ
ಕೋಲಾರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ 24.96 ಕೋಟಿ ವೆಚ್ಚದಲ್ಲಿ ಪಿಪಿಪಿ ಮಾದರಿಯ 50 TPD ಬಯೋ ಸಿಎನ್ಜಿ ಘಟಕ ಸ್ಥಾಪನೆ
ಲೋಕೋಪಯೋಗಿ ಇಲಾಖೆಯ ಮೂಲಕ 70.70 ಕೋಟಿ ವೆಚ್ಚದಲ್ಲಿ ಮಂಡ್ಯದ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಆಡಳಿತ ಭವನ ನಿರ್ಮಾಣ
11.03 ಕೋಟಿ ವೆಚ್ಚದಲ್ಲಿಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ದುಬ್ಬನಶಶಿಯ ಮತ್ತು ಗಂಗೆಕೊಳ್ಳದ ಕಡಲ ತೀರದಲ್ಲಿ ಸಮುದ್ರ ಕೊರೆತ ಪ್ರತಿಬಂಧಕ ಕಾಮಗಾರಿಯ ಪರಿಷ್ಕೃತ ಅಂದಾಜಿಗೆ ಅನುಮೋದನೆ.
Key words: Several, decisions, cabinet meeting
The post ಕಾಂಗ್ರೆಸ್ ಭವನಕ್ಕೆ ಜಮೀನು, ಎಲ್ಲಾ ಬಿ ಖಾತಾಗಳಿಗೂ ಎ ಖಾತಾ ಭಾಗ್ಯ : ಸಂಪುಟ ಸಭೆಯಲ್ಲಿ ಹಲವು ತೀರ್ಮಾನ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.
Previous Article
ಜ.9 ರಿಂದ ಡಿಜಿಟಲ್ ಇ-ಸ್ಟಾಂಪ್ ತರಬೇತಿ: ಭಾಗವಹಿಸಿ, ಸದುಪಯೋಗ ಪಡೆದುಕೊಳ್ಳಿ
Next Article
ಸಿಎಂ ಸಿದ್ದರಾಮಯ್ಯಗೆ 77.17 ಕೋಟಿ ರೂ. ಲಾಭಾಂಶ ಅರ್ಪಿಸಿದ ಕ್ರೆಡಲ್