Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದ್ರೆ ಮಾತ್ರ ಸುಖಿರಾಜ್ಯ ಸಾಧ್ಯ- ಸಿಎಂ ಸಿದ್ದರಾಮಯ್ಯ

    6 days ago

    ಬೆಂಗಳೂರು, ಜನವರಿ, 10,2026 (www.justkannada.in): ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಇವೆಲ್ಲವೂ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ ಸಾಧ್ಯ. ಅಸಮಾನತೆಯಿರುವ ಸಮಾಜದಲ್ಲಿ ಬಡವ, ಬಲ್ಲಿದ ಎನ್ನದೇ ಎಲ್ಲರನ್ನೂ ಸಮಾನವಾಗಿ ಕಾಣಬೇಕು. ಸಮಾನತೆ, ನ್ಯಾಯ ಒದಗಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ತಿಳಿಸಿದರು. ಇಂದು ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಅಭಿಯೋಜನಾಧಿಕಾರಿಗಳ ಸಂಘದ ವತಿಯಿಂದ KEB ಇಂಜಿನಿಯರ್ ಅಸೋಸಿಯೇಷನ್ ರಜತ  ಮಹೋತ್ಸವದಲ್ಲಿ ಆಯೋಜಿಸಲಾಗಿದ್ದ ತರಬೇತಿ ಕಾರ್ಯಾಗಾರ ಹಾಗೂ […]

    The post ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದ್ರೆ ಮಾತ್ರ ಸುಖಿರಾಜ್ಯ ಸಾಧ್ಯ- ಸಿಎಂ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.



    ಬೆಂಗಳೂರು, ಜನವರಿ, 10,2026 (www.justkannada.in): ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಇವೆಲ್ಲವೂ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ ಸಾಧ್ಯ. ಅಸಮಾನತೆಯಿರುವ ಸಮಾಜದಲ್ಲಿ ಬಡವ, ಬಲ್ಲಿದ ಎನ್ನದೇ ಎಲ್ಲರನ್ನೂ ಸಮಾನವಾಗಿ ಕಾಣಬೇಕು. ಸಮಾನತೆ, ನ್ಯಾಯ ಒದಗಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ತಿಳಿಸಿದರು.

    ಇಂದು ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಅಭಿಯೋಜನಾಧಿಕಾರಿಗಳ ಸಂಘದ ವತಿಯಿಂದ KEB ಇಂಜಿನಿಯರ್ ಅಸೋಸಿಯೇಷನ್ ರಜತ  ಮಹೋತ್ಸವದಲ್ಲಿ ಆಯೋಜಿಸಲಾಗಿದ್ದ ತರಬೇತಿ ಕಾರ್ಯಾಗಾರ ಹಾಗೂ 17ನೇ ರಾಜ್ಯ ಮಟ್ಟದ ಕಾರ್ಯಕ್ರಮವನ್ನು ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

    ನೂರು ಅಪರಾಧಿಗಳು ಶಿಕ್ಷೆಯಿಂದ ತಪ್ಪಿಸಿಕೊಂಡರೂ, ಒಬ್ಬ ನಿರಪರಾಧಿಗೆ ಶಿಕ್ಷೆಯಾಗಬಾರದು

    ಅಭಿಯೋಜಕರು ನ್ಯಾಯ ಸಂರಕ್ಷಕರು. ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಇವೆಲ್ಲವೂ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ ಸಾಧ್ಯ. ಸಮಾಜದ ಜನರ ಹಿತ ಕಾಪಾಡುವುದು ನಮ್ಮೆಲ್ಲರ ಕೆಲಸ. ನಾಗರಿಕ ಸುರಕ್ಷಾ ಸಂಹಿತೆಯನ್ನು ಕೇಂದ್ರ ಸರ್ಕಾರ ಜಾರಿ ಮಾಡಿದೆ. ಕಾಯ್ದೆಯ ಸೆಕ್ಷನ್ 8 ಮತ್ತು 9 ರ ಪ್ರಕಾರ ಅಭಿಯೋಜಕರನ್ನು ವಿಂಗಡಿಸಿ, ಕರ್ತವ್ಯಗಳನ್ನು ಹೇಳಿದ್ದಾರೆ. ಆರೋಪಿಗಳ ಹಕ್ಕುಗಳನ್ನು ಸಂರಕ್ಷಿಸಬೇಕೆಂದು ನಿಯಮ ರೂಪಿಸಿದೆ. ನೂರು ಅಪರಾಧಿಗಳು ಶಿಕ್ಷೆಯಿಂದ  ತಪ್ಪಿಸಿಕೊಂಡರೂ, ಒಬ್ಬ ನಿರಪರಾಧಿಗೆ ಶಿಕ್ಷೆಯಾಗಬಾರದು ಎಂದರು.

    ಸಾಕ್ಷಿಗಳ ವಿಚಾರಣೆ, ಪಾಟಿ ಸವಾಲು ಮಾಡುವಾಗ ಎಚ್ಚರಿಕೆ ಅಗತ್ಯ

    ಆರೋಪಿಗಳ ಪರವಾಗಿರುವ ಸಾಕ್ಷ್ಯಾಧಾರಗಳನ್ನೂ ನ್ಯಾಯಾಲಯದ ಗಮನಕ್ಕೆ ತರುವುದು ಅಭಿಯೋಜಕರ ಆದ್ಯ ಕರ್ತವ್ಯ. ತನಿಖಾಧಿಕಾರಿಗಳ ಜೊತೆ ಮಾತನಾಡುವುದು, ಸಾಕ್ಷಿಗಳ ವಿಚಾರಣೆ, ಪಾಟಿ ಸವಾಲು ಮಾಡುವಾಗ ಎಚ್ಚರಿಕೆಯಿಂದ ಮಾಡಿದರೆ ಶಿಕ್ಷೆ ಪ್ರಮಾಣ ಹೆಚ್ಚಾಗಲು ಸಾಧ್ಯ ಎಂದರು.

    ಶಿಕ್ಷೆ ಪ್ರಮಾಣದರದಲ್ಲಿ ಕರ್ನಾಟಕಕ್ಕೆ 22 ನೇ ಸ್ಥಾನ

    ಎನ್.ಸಿ.ಆರ್.ಬಿ ವರದಿ ಪ್ರಕಾರ ಶಿಕ್ಷೆ ಪ್ರಮಾಣ ದರದಲ್ಲಿ ಕರ್ನಾಟಕ, ಬಿಹಾರ  ಮತ್ತು ರಾಜಸ್ಥಾನ  22ನೇ ಸ್ಥಾನದಲ್ಲಿದೆ. ಕೇರಳದಲ್ಲಿ 87%   ರಷ್ಟಿದೆ., ಮಿಜೋರಾಂ 92%, ಗುಜರಾತ್ ಮತ್ತು ತೆಲಂಗಾಣ 57%, ,  ಉತ್ತರ ಪ್ರದೇಶದಲ್ಲಿ 72%, ದೆಹಲಿ 89% ರಷ್ಟಿದೆ. ನಾವು ಕೇರಳ ರಾಜ್ಯದೊಂದಿಗೆ ಹೋಲಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಕಿವಿಮಾತು ಹೇಳಿದರು.

    ನ್ಯಾಯ ಎತ್ತಿ ಹಿಡಿಯುವ ಪ್ರಯತ್ನವನ್ನು ಅಭಿಯೋಜಕರು ಮಾಡಬೇಕು.

    ಸಮಸ್ಯೆಗಳ ಹೊರತಾಗಿಯೂ ನ್ಯಾಯ ಒದಗಿಸಬೇಕು. ಸೈಬರ್ ಅಪರಾಧಗಳು, ಆರ್ಥಿಕ , ಅಪರಾಧಗಳು ಶುರುವಾಗಿದ್ದು ಇದಕ್ಕೆ ತರಬೇತಿ ಅತ್ಯಂತ ಅವಶ್ಯಕ.  ಅಭಿಯೋಜಕರು ನಿರಂತರ ಅಧ್ಯಯನ ಮಾಡಬೇಕು ಎಂದರು.

    ಅಭಿಯೋಜಕರ ಅಕಾಡೆಮಿ ಸ್ಥಾಪನೆಗೆ ಭರವಸೆ

    ಪ್ರತಿ ವರ್ಷವೂ ಸಮ್ಮೇಳನಗಳು ಜರುಗಬೇಕು ಅಭಿಯೋಜಕರ ಅಕಾಡೆಮಿ ಸ್ಥಾಪಿಸಿ ಅನುದಾನವನ್ನೂ ನೀಡುತ್ತೇವೆ. ಬೇಡಿಕೆಗಳನ್ನು ಪರಿಶೀಲಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಆಶ್ವಾಸನೆಯಿತ್ತರು.

    ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್. ಕೆ ಪಾಟೀಲ್, ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಎಚ್‌.ಪಿ.ಸಂದೇಶ್, ಅಪರ  ಮುಖ್ಯ ಕಾರ್ಯದರ್ಶಿ ಹಾಗೂ ಗೃಹ ಇಲಾಖೆ ಕಾರ್ಯದರ್ಶಿ ತುಷಾರ್ ಗಿರಿ, ಪೊಲೀಸ್ ಮಹಾ ನಿರ್ದೇಶಕ ಡಾ: ಎಂ. ಎ.ಸಲೀಂ, ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆಯ ನಿರ್ದೇಶಕ ಅಂಜಲಿ ದೇವಿ ರಾಜ್ಯ ಅಭಿಯೋಜನಾ ಅಧಿಕಾರಿಗಳ ಸಂಘದ ಅಧ್ಯಕ್ಷ ಅಶ್ವಥ ನಾರಾಯಣ್, ಕಾರ್ಯದರ್ಶಿ ಸವಿತಾ ಮೊದಲಾದವರು ಉಪಸ್ಥಿತರಿದ್ದರು.

    Key words: KEB Engineers Association, Silver Jubilee, Celebrations, CM Siddaramaiah

    The post ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದ್ರೆ ಮಾತ್ರ ಸುಖಿರಾಜ್ಯ ಸಾಧ್ಯ- ಸಿಎಂ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

    Click here to Read More
    Previous Article
    ದುರುಪಯೋಗ ತಡೆಗೆ ವಿಬಿ- ಜಿ ರಾಮ್ ಜಿ ಯೋಜನೆ ಜಾರಿ : ಯದುವೀರ್
    Next Article
    ಅನುಮಾನಕ್ಕೆ ಆಸ್ಪದ ನೀಡಿದ ಒಳಮೀಸಲಾತಿ ಮಸೂದೆ ವಾಪಸ್ : ಚಂದ್ರಶೇಖರ್

    Related ಮುಖಪುಟ Updates:

    Are you sure? You want to delete this comment..! Remove Cancel

    Comments (0)

      Leave a comment