Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಕೊರಚ ಸಮುದಾಯದ ಕುಟುಂಬಗಳಿಗೆ ತ್ವರಿತವಾಗಿ ಹಕ್ಕು ಪತ್ರ ವಿತರಣೆಗೆ ಕ್ರಮವಹಿಸಿ- ಪಲ್ಲವಿ ಜಿ

    6 days ago

    ಮೈಸೂರು,ಜನವರಿ,10,2026 (www.justkannada.in): ಟಿ.ನರಸೀಪುರ ಟೌನ್ ನಲ್ಲಿರುವ ಶಿವಪಾರ್ವತಿ ನಗರದಲ್ಲಿ ತಾತ್ಕಾಲಿಕ ಗುಡಿಸಲುಗಳಲ್ಲಿ ನೆಲೆಸಿರುವ 40 ಕ್ಕೂ ಹೆಚ್ಚು ಪರಿಶಿಷ್ಟ ಜಾತಿ ಅಲೆಮಾರಿ ಕೊರಚ ಸಮುದಾಯದ ಕುಟುಂಬಗಳಿಗೆ ತ್ವರಿತವಾಗಿ ಹಕ್ಕು ಪತ್ರ ವಿತರಣೆಗೆ ಕ್ರಮವಹಿಸಬೇಕು ಎಂದು ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಟಿ.ನರಸೀಪುರ ಪುರಸಭೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು […]

    The post ಕೊರಚ ಸಮುದಾಯದ ಕುಟುಂಬಗಳಿಗೆ ತ್ವರಿತವಾಗಿ ಹಕ್ಕು ಪತ್ರ ವಿತರಣೆಗೆ ಕ್ರಮವಹಿಸಿ- ಪಲ್ಲವಿ ಜಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.



    ಮೈಸೂರು,ಜನವರಿ,10,2026 (www.justkannada.in): ಟಿ.ನರಸೀಪುರ ಟೌನ್ ನಲ್ಲಿರುವ ಶಿವಪಾರ್ವತಿ ನಗರದಲ್ಲಿ ತಾತ್ಕಾಲಿಕ ಗುಡಿಸಲುಗಳಲ್ಲಿ ನೆಲೆಸಿರುವ 40 ಕ್ಕೂ ಹೆಚ್ಚು ಪರಿಶಿಷ್ಟ ಜಾತಿ ಅಲೆಮಾರಿ ಕೊರಚ ಸಮುದಾಯದ ಕುಟುಂಬಗಳಿಗೆ ತ್ವರಿತವಾಗಿ ಹಕ್ಕು ಪತ್ರ ವಿತರಣೆಗೆ ಕ್ರಮವಹಿಸಬೇಕು ಎಂದು ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಟಿ.ನರಸೀಪುರ ಪುರಸಭೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ ಆಯೊಜಿಸಿದ್ದ ಟಾರ್ಪಲ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜ.26 ರರೊಳಗೆ ಹಕ್ಕು ಪತ್ರ ವಿತರಣೆಯಾಗಬೇಕು. ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೂ ತರಲಾಗುವುದು. ಅಧಿಕಾರಿಗಳು ಹಕ್ಕುಪತ್ರ ನೀಡಲು ಕ್ರಮಕೈಗೊಳ್ಳಬೇಕು ಎಂದರು.

    ಡಾ.ಬಿ.ಆರ್.ಅಂಬೇಡ್ಕರ್ ಅವರು ನಿಡಿರುವ ಸಂವಿಧಾನದಡಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಪಡೆದುಕೊಳ್ಳುವ ಹಕ್ಕು ನೀಡಲಾಗಿದೆ. ಆದರೆ, ಹಕ್ಕುಗಳನ್ನು ಪಡೆದುಕೊಳ್ಳಲು ಸಂವಿಧಾನದ ಅರಿವು ಮುಖ್ಯವಾಗಿದ್ದು, ಪ್ರತಿಯೊಬ್ಬರು ಶಿಕ್ಷಣ ಪಡೆಯಬೇಕು.  ಕುಲ ಕಸುಬು ಜೊತೆಗೆ ಕಡ್ಡಾಯವಾಗಿ ಶಿಕ್ಷಣ ಪಡೆದುಕೊಳ್ಳಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯದ ಮಕ್ಕಳಿಗೆ ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ಶೇ.10 ರಷ್ಟು ಮೀಸಲಾತಿ ನೀಡಲಾಗಿದೆ. ಯಾವುದೇ ಪ್ರವೇಶ ಪರೀಕ್ಷೆ ಬರೆಯದಿದ್ದರೂ ಶಾಲೆಗೆ ಸೇರಿಸಬಹುದಾಗಿದ್ದು, ಸದ್ಬಳಕೆ ಮಾಡಿಕೊಳ್ಳಬೇಕು. ಮುಂದಿನ ಬಾರಿ ಶಿವಪಾರ್ವತಿ ನಗರಕ್ಕೆ ಬರುವಾಗ ಹಕ್ಕು ಪತ್ರ ವಿತರಣೆಯಾಗಿ, ದೊಡ್ಡ ಕಾರ್ಯಕ್ರಮವೇ ಆಯೋಜನೆಯಾಗಬೇಕು. ರಾಜ್ಯ  ಸರ್ಕಾರ ಬಡವರ ಪರವಾಗಿ ಕೆಲಸ ಮಾಡುತ್ತಿದೆ. ಧ್ವನಿ ಇಲ್ಲದ, ಅವಕಾಶ ವಂಚಿತ ಕೊರಮ-ಕೊರಚ ಸಮುದಾಯಗಳಿಗೆ ನ್ಯಾಯ ದೊರಕಿಸಿ ಕೊಡುವ ಮೂಲಕ ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶಯಗಳನ್ನು ಈಡೇರಿಸುವ ನಿಟ್ಟಿನಲ್ಲಿ ರಾಜ್ಯದ ಮುಖ್ಯಮಂತ್ರಿಗಳು ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.

    ಶಿವಪಾರ್ವತಿನಗರದ ನಿವಾಸಿಗಳಿಗೆ ಶಾಶ್ವತ ನೆಲೆ ದೊರಕಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಜಿಲ್ಲಾ ಉಸ್ತುವಾರಿ ಸಚಿವರು ಕೂಡ ವಿಶೇಷ ಕಾಳಜಿಯ ತೋರಿದ್ದು, ಸಮಾಜ ಕಲ್ಯಾಣ ಇಲಾಖೆಯಿಂದ ಅನುದಾನ ನಿಡುವ ಭರವಸೆ ನೀಡಿದ್ದಾರೆ.

    ಟಾರ್ಪಲ್ ಹಂಚಿಕೆ ಮುಖ್ಯವಲ್ಲ. ಶಾಶ್ವತ ನೆಲೆ ಸಿಕ್ಕಿ, ಹಕ್ಕು ಪತ್ರಗಳನ್ನು ನೀಡುವಂತಾಗಬೇಕು. ಗುಡಿಸಲು ಮುಕ್ತವಾಗಿ ಬದುಕು ನಡೆಸುವಂತಾಗಬೇಕು. ಈ ನಿಟ್ಟಿನಲ್ಲಿ ಟಿ.ನರಸೀಪುರ ಪುರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಇಚ್ಛಾಶಕ್ತಿಯಿಂದ ಕಾರ್ಯ ನಿರ್ವಹಿಸಬೇಕು. ಆದಷ್ಟು ಬೇಗ ಯಾವುದೇ ವಿಳಂಬವನ್ನು ಮಾಡದೆ ಹಕ್ಕು ಪತ್ರವನ್ನು ನಿಡುವ ಕೆಲಸ ಮಾಡಬೇಕು ಸೂಚಿಸಿದರು.

    ಜ.26 ರೊಳಗೆ ಹಕ್ಕು ಪತ್ರ ದೊರಕಿಸಿ ಕೊಡುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಅಖಿಲ ಕರ್ನಾಟಕ ಕುಳುವ ಮಹಾಸಂಘದ ಪ್ರಧಾನ ಕಾರ್ಯದರ್ಶಿ ಆನಂದ್ ಕುಮಾರ್ ಏಕಲವ್ಯ, ರಾಜ್ಯ ಸಂಘಟನಾ ಕಾರ್ಯದರ್ಶಿ ರಂಗಸ್ವಾಮಿ, ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಅಲಗೂಡು ಶಿವಕುಮಾರ್, ಮೈಸೂರು ಜಿಲ್ಲಾ ಕೊರಮ-ಕೊರಚ ಮಹಾಸಂಘದ ಪ್ರಧಾನ ಕಾರ್ಯದರ್ಶಿ ಮೋಹನ್ ಕಾಯಕ, ಜಂಟಿ ಕಾರ್ಯದರ್ಶಿ ಎನ್.ಕುಮಾರ್, ಉಪಾಧ್ಯಕ್ಷ ಸಿ.ರಾಜು, ದಲಿತ ಸಂಘರ್ಷ ಸಮಿತಿ ತಾಲೂಕು ಸಂಚಾಲಕ ಯಾಚೇನಹಳ್ಳಿ ಸೋಮಶೇಖರ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ವಿನೂತನ್ ಮತ್ತಿತರರು ಉಪಸ್ಥಿತರಿದ್ದರು.

    Key words: title deeds, Koracha community, families,Mysore, Pallavi

    The post ಕೊರಚ ಸಮುದಾಯದ ಕುಟುಂಬಗಳಿಗೆ ತ್ವರಿತವಾಗಿ ಹಕ್ಕು ಪತ್ರ ವಿತರಣೆಗೆ ಕ್ರಮವಹಿಸಿ- ಪಲ್ಲವಿ ಜಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

    Click here to Read More
    Previous Article
    ಚುನಾವಣಾ ಬಾಂಡ್ ಹೆಸರಿನಲ್ಲಿ ಬಿಜೆಪಿ ವಸೂಲಿ ಮಾಡಿದ್ದೆಷ್ಟು? : ಪ್ರಹ್ಲಾದ್ ಜೋಷಿಗೆ ದಿನೇಶ್ ಗುಂಡೂರಾವ್ ಪ್ರಶ್ನೆ
    Next Article
    ಜ.26ರಿಂದ ಮನರೇಗಾ ಉಳಿಸಿ ಅಭಿಯಾನ- ಡಿಸಿಎಂ ಡಿಕೆ ಶಿವಕುಮಾರ್

    Related ಮುಖಪುಟ Updates:

    Are you sure? You want to delete this comment..! Remove Cancel

    Comments (0)

      Leave a comment