ಮಕ್ಕಳು ಕೇವಲ ಪಠ್ಯ ಪುಸ್ತಕಗಳಿಗೆ ಸೀಮಿತವಾಗದೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಮಕ್ಕಳು ತಮ್ಮಲ್ಲಿ ಇರುವ ಪ್ರತಿಭೆಯನ್ನು ಅನಾವರಣಗೊಳಿಸಿದಾಗ ಮಾತ್ರ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಮಂಡ್ಯ ಶಾಸಕ ರವಿಕುಮಾರ್ ಹೇಳಿದರು. ಮಂಡ್ಯ ನಗರದ ಸಂತ ಜೋಸೆಫರ ಪ್ರೌಢಶಾಲೆ ಆವರಣದಲ್ಲಿ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಮಂಡ್ಯ ಶಾಲಾ ಶಿಕ್ಷಣ ಇಲಾಖೆ ಮಂಡ್ಯ ವತಿಯಿಂದ ಆಯೋಜಿಸಲಾಗಿದ್ದ 2025-26 ನೇ ಸಾಲಿನ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಮಕ್ಕಳು ಐ ಎ […]
The post ಮಕ್ಕಳು ಪಠ್ಯೇತರ ಚಟುವಟಿಕೆಗಳಲ್ಲೂ ಸಕ್ರಿಯರಾಗಬೇಕು : ರವಿಕುಮಾರ್ appeared first on nudikarnataka.
ಮಕ್ಕಳು ಕೇವಲ ಪಠ್ಯ ಪುಸ್ತಕಗಳಿಗೆ ಸೀಮಿತವಾಗದೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಮಕ್ಕಳು ತಮ್ಮಲ್ಲಿ ಇರುವ ಪ್ರತಿಭೆಯನ್ನು ಅನಾವರಣಗೊಳಿಸಿದಾಗ ಮಾತ್ರ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಮಂಡ್ಯ ಶಾಸಕ ರವಿಕುಮಾರ್ ಹೇಳಿದರು.
ಮಂಡ್ಯ ನಗರದ ಸಂತ ಜೋಸೆಫರ ಪ್ರೌಢಶಾಲೆ ಆವರಣದಲ್ಲಿ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಮಂಡ್ಯ ಶಾಲಾ ಶಿಕ್ಷಣ ಇಲಾಖೆ ಮಂಡ್ಯ ವತಿಯಿಂದ ಆಯೋಜಿಸಲಾಗಿದ್ದ 2025-26 ನೇ ಸಾಲಿನ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು
ಮಕ್ಕಳು ಐ ಎ ಎಸ್, ಐ,ಟಿ ಎಫ್ ನಂತಹ ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು. ಜನ ಸೇವಕರಾಗಿ ರಾಜಕೀಯ ಪ್ರವೇಶ ಮಾಡಬೇಕು. ಭಾರತ ಯುವ ಪೀಳಿಗೆಯ ಮೇಲೆ ನಿಂತಿದೆ. ಮಕ್ಕಳು ದೊಡ್ಡ ಕನಸುಗಳನ್ನು ಕಾಣಬೇಕು ಮತ್ತು ಕನಸನ್ನು ನನಸಾಗಿಸಲು ಶ್ರಮ ವಹಿಸಬೇಕು ಎಂದರು.

ಜಿಲ್ಲಾಧಿಕಾರಿ ಡಾ ಕುಮಾರ ಮಾತನಾಡಿ, ಮಕ್ಕಳಿಗೆ ಶಿಕ್ಷಣದ ಜೊತೆಗೆ ಅವರ ಪ್ರತಿಭೆಯನ್ನು ಅನಾವರಣಗೊಳಿಸಲು ಸೂಕ್ತ ವೇದಿಕೆ ದೊರೆಯಬೇಕು. ಪ್ರತಿಯೊಂದು ಮಗುವಿನಲ್ಲೂ ವಿಶೇಷ ಪ್ರತಿಭೆ ಅಡಕವಾಗಿರುತ್ತದೆ. ಅಂತಹ ಮಕ್ಕಳಿಗೆ ಸೂಕ್ತ ವೇದಿಕೆ ಸಿಗದಿದ್ದರೆ ಅವರ ಪ್ರತಿಭೆ ಕಮರಿ ಹೋಗುತ್ತದೆ ಹಾಗಾಗಿ ಮಕ್ಕಳಿಗೆ ಸೂಕ್ತ ವೇದಿಕೆ ಕಲ್ಪಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಹೇಳಿದರು.
ಪ್ರತಿಭಾ ಕಾರಂಜಿ ಮಕ್ಕಳಲ್ಲಿ ಇರುವ ಪ್ರತಿಭೆಯನ್ನು ಅನಾವರಣಗೊಳಿಸಲು ಸೂಕ್ತ ವೇದಿಕೆಯಾಗಿದೆ. ಮಕ್ಕಳಲ್ಲಿ ಇರುವ ಪ್ರತಿಭೆಯನ್ನು ಗುರುತಿಸುವ ಶಕ್ತಿ ಇರುವುದು ಶಿಕ್ಷಕರಿಗೆ ಮಾತ್ರ. ಶಿಕ್ಷಕರು ಮಕ್ಕಳ ಪ್ರತಿಭೆಯನ್ನು ಗುರುತಿಸಿ ಅವರ ಬೆಳವಣಿಗೆಗೆ ಪ್ರೋತ್ಸಾಹ ನೀಡಬೇಕು. ಪಠ್ಯದಷ್ಟೆ ಪಠ್ಯೇತರ ಚಟುವಟಿಕೆಗಳು ಮುಖ್ಯ ಮಕ್ಕಳಿಗೆ ಜೀವನದ ಮೌಲ್ಯಗಳ ಕುರಿತು ಶಿಕ್ಷಕರು ಅರಿವು ಮೂಡಿಸಬೇಕು. ಜಿಲ್ಲೆಯಲ್ಲಿ ಶಿಕ್ಷಣ ಇಲಾಖೆ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ ಕಳೆದ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶವನ್ನು ಜಿಲ್ಲೆಯ ವಿದ್ಯಾರ್ಥಿಗಳು ಕಾಪಾಡಿಕೊಂಡಿದ್ದಾರೆ ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಧಿಕಾರಿ ಕೆ.ಆರ್ ನಂದಿನಿ ಮಾತನಾಡಿ ಪ್ರತಿಭಾ ಕಾರಂಜಿ ವೈಯಕ್ತಿಕವಾಗಿ ನನ್ನ ಜೀವನದ ಅವಿಭಾಜ್ಯ ಅಂಗವಾಗಿದೆ. ಕಲಿಕಾ ದಿನಗಳಲ್ಲಿ ನಮ್ಮ ಶಾಲೆಯನ್ನು ಪ್ರತಿನಿಧಿಸಿ ವಿವಿಧ ಪ್ರತಿಭಾ ಕಾರಂಜಿ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದೆ. ಪ್ರತಿಭೆಗಳ ಸಮ್ಮಿಲನ ಮತ್ತು ಅನಾವರಣಕ್ಕೆ ಪ್ರತಿಭಾ ಕಾರಂಜಿ ಒಂದು ಉತ್ತಮ ವೇದಿಕೆಯಾಗಿದೆ ಎಂದರು.

ಮಕ್ಕಳಲ್ಲಿ ವಿವಿಧ ಪ್ರತಿಭೆಗಳು ಇರುತ್ತವೆ ಅದನ್ನು ಪ್ರತಿಭೆಯನ್ನು ಗುರುತಿಸುವ ಕೆಲಸವನ್ನು ಪೋಷಕರು ಮತ್ತು ಶಿಕ್ಷಕರು ಮಾಡಬೇಕು. ಮಕ್ಕಳಿಗೆ ಆತ್ಮವಿಶ್ವಾಸ ತುಂಬುವ ಕೆಲಸ ಮಾಡಬೇಕು. ಮಕ್ಕಳ ಪ್ರತಿಭೆಯನ್ನು ಗುರುತಿಸಿದಾಗ ಮಾತ್ರ ಅವರು ಎತ್ತರಕ್ಕೆ ಬೆಳೆಯುತ್ತಾರೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಕೆ.ನಾಗೇಶ್, ಜಿಲ್ಲಾ ಪ್ರಾಂಶುಪಾಲ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಜೆ.ವೈ .ಮಂಜುನಾಥ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷರಾದ ಪುಟ್ಟರಾಜಯ್ಯ, ಡಯಟ್ ಉಪ ನಿರ್ದೇಶಕರಾದ ಹೆಚ್.ಎನ್.ಯೋಗೇಶ್, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಜಿ.ಎ.ಲೋಕೇಶ್, ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಮಹದೇವ್, ಉತ್ತರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಟಿ.ಸೌಭಾಗ್ಯ ಸಂತ ಜೋಷೇಫರ ಶಾಲಾ ಸಿಬ್ಬಂದಿ ವರ್ಗ ವಿದ್ಯಾರ್ಥಿಗಳು ಹಾಜರಿದ್ದರು.
The post ಮಕ್ಕಳು ಪಠ್ಯೇತರ ಚಟುವಟಿಕೆಗಳಲ್ಲೂ ಸಕ್ರಿಯರಾಗಬೇಕು : ರವಿಕುಮಾರ್ appeared first on nudikarnataka.
Previous Article
ಜನಾರ್ಧನರೆಡ್ಡಿಯಿಂದ ಗಣಿ ಅತಿಕ್ರಮಣ ಸಾಬೀತು : ಸದ್ಯದಲ್ಲೇ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿಯಿಂದ ಸುಪ್ರೀಂಗೆೆ ವರದಿ ಸಲ್ಲಿಕೆ
Next Article
ಮಂಡ್ಯ | ಗಾಂಜಾ ಮಾರಾಟ ಮಾಡಿ ಸಿಕ್ಕಿ ಬಿದ್ದವನಿಗೆ 6 ತಿಂಗಳು ಜೈಲು