ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

2 months ago

40

0

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಮಂಗಳವಾರ ಹೆಜಮಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಟೋಲ್ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಸಭೆ ನಡೆಸಿ ಸುಧೀರ್ಘವಾಗಿ ಚರ್ಚಿಸಿದರು. ಸ್ಥಳೀಯರಿಗೆ ಹಳೆ ಮಾದರಿಯಂತೆ ಟೋಲ್ ವಿನಾಯಿತಿ ನೀಡುವಂತೆ ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು. ಹೆಜಮಾಡಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಇನಾಯತ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಟೋಲ್ ಅಧಿಕಾರಿಗಳು, ಹೆಜಮಾಡಿ ಗ್ರಾಮ ಪಂಚಾಯತ್ ಮಾಜಿ ಸದಸ್ಯರು, ಸ್ಥಳೀಯರು ಉಪಸ್ಥಿತರಿದ್ದರು. The post ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಹುಬ್ಬಳ್ಳಿಯಲ್ಲಿ ಹಲಸು ಮೇಳ
Next Article
ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ: ಸಮಿತಿ ಸದಸ್ಯರಿಂದ ಧರ್ಮಸ್ಥಳ ಭೇಟಿ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment