Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಶೋಷಿತ ಸಮಾಜದ ಪ್ರತಿಭೆಗಳಿಗೆ ಸರಕಾರ, ಸಮಾಜದ ಪ್ರೋತ್ಸಾಹ ಅಗತ್ಯ: ಡಾ.ವಿಜಯ ಬಲ್ಲಾಳ್

    2 days ago

    ಉಡುಪಿ, ಜ.13: ಪ್ರತಿಭೆಗೆ ಯಾವುದೇ ತಾರತಮ್ಯವಿಲ್ಲ. ಕಡು ಬಡವನಲ್ಲೂ ಪ್ರತಿಭೆ ಇರುತ್ತದೆ. ಸಮಾಜದ ಶೋಷಿತ ವರ್ಗಗಳ ಪ್ರತಿಭೆಗಳಿಗೆ ಸರಕಾರ, ಇಲಾಖೆ ಹಾಗೂ ಸಮಾಜದ ಪ್ರೋತ್ಸಾಹ ಅತೀ ಅಗತ್ಯ ಎಂದು ಅಂಬಲಪಾಡಿ ದೇವಳದ ಧರ್ಮದರ್ಶಿ ಡಾ.ಎನ್. ಬಿ.ವಿಜಯ ಬಲ್ಲಾಳ್ ಹೇಳಿದರು. ಅವರು ಶನಿವಾರ ಅಂಬಲಪಾಡಿ ದೇವಳದ ಭವಾನಿ ಮಂಟಪದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ […]

    The post ಶೋಷಿತ ಸಮಾಜದ ಪ್ರತಿಭೆಗಳಿಗೆ ಸರಕಾರ, ಸಮಾಜದ ಪ್ರೋತ್ಸಾಹ ಅಗತ್ಯ: ಡಾ.ವಿಜಯ ಬಲ್ಲಾಳ್ appeared first on Namma Udupi Bulletin.



    ಉಡುಪಿ, ಜ.13: ಪ್ರತಿಭೆಗೆ ಯಾವುದೇ ತಾರತಮ್ಯವಿಲ್ಲ. ಕಡು ಬಡವನಲ್ಲೂ ಪ್ರತಿಭೆ ಇರುತ್ತದೆ. ಸಮಾಜದ ಶೋಷಿತ ವರ್ಗಗಳ ಪ್ರತಿಭೆಗಳಿಗೆ ಸರಕಾರ, ಇಲಾಖೆ ಹಾಗೂ ಸಮಾಜದ ಪ್ರೋತ್ಸಾಹ ಅತೀ ಅಗತ್ಯ ಎಂದು ಅಂಬಲಪಾಡಿ ದೇವಳದ ಧರ್ಮದರ್ಶಿ ಡಾ.ಎನ್. ಬಿ.ವಿಜಯ ಬಲ್ಲಾಳ್ ಹೇಳಿದರು. ಅವರು ಶನಿವಾರ ಅಂಬಲಪಾಡಿ ದೇವಳದ ಭವಾನಿ ಮಂಟಪದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ಹಮ್ಮಿಕೊಂಡ ಕಲಾ ತರಬೇತಿ ಶಿಬಿರದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

    ಶೋಷಿತ ವರ್ಗಗಳಲ್ಲಿ ಇಂದು ವೈದ್ಯರು, ಇಂಜೀನಿಯರ್ ಸೇರಿದಂತೆ ಉನ್ನತ ಶಿಕ್ಷಣ ಪಡೆದು ಸಮಾಜದ ಮುಖ್ಯವಾಹಿನಿಗೆ ಬರುತ್ತಿರುವುದು ಸ್ವಾಗತಾರ್ಹ ಬೆಳವಣಿಗೆಯಾಗಿದೆ. ಈ ಮೂಲಕ ಅಂಬೇಡ್ಕರ್ ಅವರ ಕನಸು ನನಸಾಗುತ್ತಿದೆ ಎಂದ ಅವರು, ಭಾರತೀಯ ಜಾನಪದ, ಸಾಂಸ್ಕೃತಿಕ ಕಲೆಗಳು ಅತ್ಯಂತ ಪ್ರಭಾವಶಾಲಿಯಾಗಿವೆ. ಈ ಪ್ರತಿಭೆಗಳಿಗೆ ಸೂಕ್ತ ಪ್ರೋತ್ಸಾಹ ಹಾಗೂ ವೇದಿಕೆ ನೀಡಬೇಕು ಎಂದು ಅಭಿಪ್ರಾಯ ಪಟ್ಟರು. ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರು ಮಾತನಾಡಿ, ಕರಾವಳಿ ಜಿಲ್ಲೆಗಳ ಜಾನಪದ ಕಲೆಗಳು ಅತ್ಯಂತ ವೈಶಿಷ್ಠö್ಯ ಪೂರ್ಣವಾಗಿವೆ. ಅದರಲ್ಲೂ ಕೊರಗ ಸಮಾಜ ಅತೀ ಹಿಂದುಳಿದಿದ್ದು, ಅವರ ಸಂಪ್ರದಾಯಗಳು, ಜಾನಪದ ಕಲೆಗಳ ಬಗ್ಗೆ ಹೊರ ಜಗತ್ತಿಗೆ ತಿಳಿದಿರುವುದು ಅತ್ಯಲ್ಪ. ಈ ನಿಟ್ಟಿನಲ್ಲಿ ಅವರ ಜಾನಪದ ಕಲೆಗಳ ಬಗ್ಗೆ ತರಬೇತಿ ನೀಡಿ ಯುವ ಪೀಳಿಗೆಗೆ ದಾಟಿಸುವ ಮಹಾತ್ಕಾರ್ಯವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಮ್ಮಿಕೊಂಡಿರುವುದು ಅಭಿನಂದನೀಯ. ಇದರಿಂದ ಕೊರಗ ಸಮುದಾಯದ ನಶಿಸುತ್ತಿರುವ ಜಾನಪದ ಕಲೆಗಳನ್ನು ಉಳಿಸಿದಂತೆಯೂ ಆಗುತ್ತದೆ ಎಂದರು.

    ಉಡುಪಿ ಜಿಲ್ಲಾ ಡಾ.ಶಿವರಾಮ ಕಾರಂತ ಟ್ರಸ್ಟ್ ಅಧ್ಯಕ್ಷ ಡಾ.ಗಣನಾಥ ಎಕ್ಕಾರು ಮಾತನಾಡಿ, ತರಬೇತಿ ನಮ್ಮ ವ್ಯಕ್ತಿತ್ವವನ್ನು ಬೆಳೆಸುತ್ತದೆ. ಜಾನಪದ ಕಲೆ ಅಂದರೆ ಬರೀ ಕುಣಿಯುವುದಲ್ಲ, ಇದು ನಮ್ಮ ವ್ಯಕ್ತಿತ್ವವನ್ನು ಬದಲಾಯಿಸಬಲ್ಲದು. ಕಲೆ ನಮ್ಮ ಸಂಸ್ಕೃತಿಯನ್ನು ಕಲಿಸುತ್ತದೆ ಎಂದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕ ಮಾತುಗಳನ್ನಾಡಿ, ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿನಿಯರಿಗೆ ಕಲಾ ತರಬೇತಿ ನೀಡಲು ಜಿಲ್ಲೆಯ 2 ಹಾಸ್ಟೇಲುಗಳ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ, ಕಳೆದ ಜುಲೈ ತಿಂಗಳಿಂದ ತರಬೇತಿ ನೀಡಲಾಗುತ್ತಿದೆ ಎಂದರು.

    ವಿದ್ಯಾರ್ಥಿನಿಯರಿಗೆ ತರಬೇತಿ ನೀಡಿದ ಕಲಾಗುರುಗಳಾದ ರಮೇಶ್ ಕಲ್ಮಾಡಿ ಹಾಗೂ ಗಣೇಶ್ ಬಾರ್ಕೂರು ಅವರನ್ನು ಗೌರವಿಸಲಾಯಿತು. ತರಬೇತಿಯಲ್ಲಿ ಪಾಲ್ಗೊಂಡ ವಿದ್ಯಾರ್ಥಿನಿಯರಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಶಿಬಿರದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿಯರು ತಮ್ಮ ಅನಿಸಿಕೆಗಳನ್ನು ವ್ಯಕ್ತ ಪಡಿಸಿದರು. ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಪರಿಶಿಷ್ಟ ಪಂಗಡಗಳ ಕಲ್ಯಾಣಾಧಿಕಾರಿ ನಾರಾಯಣ ಸ್ವಾಮಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

    ಸಮಾಜ ಕಲ್ಯಾಣ ಇಲಾಖೆಯ ಕಚೇರಿ ಅಧೀಕ್ಷಕಿ ವಿಜಯಲಕ್ಷ್ಮಿ ದಿನ್ನಿ, ಕೊರಗ ಸಮಾಜದ ಮುಖಂಡ ಗಣೇಶ್ ಕೊರಗ ಉಪಸ್ಥಿತರಿದ್ದರು. ಉಪನ್ಯಾಸಕ ರಾಮಾಂಜಿ ನಮ್ಮಭೂಮಿ ನಿರೂಪಿಸಿ, ಬನ್ನಂಜೆ ವಸತಿಶಾಲೆಯ ಮೇಲ್ವಿಚಾರಕಿ ಸುಚಿತ್ರಾ ವಂದಿಸಿದರು. ಕಲಾ ತರಬೇತಿ ಪಡೆದ ವಿದ್ಯಾರ್ಥಿನಿಯರಿಂದ ಉತ್ತರ ಕನ್ನಡದ ಹಾಲಕ್ಕಿ ಕುಣಿತ, ಕೋಲಾಟ, ಕೊರಗ ಸಮುದಾಯದ ಡೊಳ್ಳು ಕುಣಿತ, ಕಂಗೀಲು ನೃತ್ಯ ಸಭಿಕರ ಮನಸೂರೆಗೊಂಡವು.

    The post ಶೋಷಿತ ಸಮಾಜದ ಪ್ರತಿಭೆಗಳಿಗೆ ಸರಕಾರ, ಸಮಾಜದ ಪ್ರೋತ್ಸಾಹ ಅಗತ್ಯ: ಡಾ.ವಿಜಯ ಬಲ್ಲಾಳ್ appeared first on Namma Udupi Bulletin.

    Click here to Read More
    Previous Article
    ಜ.13 ರಿಂದ ಮೆಕ್ಕೆಜೋಳ ನೋಂದಣಿ ಮತ್ತು ಖರೀದಿ ಕೇಂದ್ರ ಆರಂಭ
    Next Article
    ಶೀರೂರು ಶ್ರೀ ಪ್ರಥಮ ಸರ್ವಜ್ಞಪೀಠಾರೋಹಣ ಸಫಲರಾಗಿಸೋಣ: ಶಾಸಕ ಯಶಪಾಲ್ ಸುವರ್ಣ

    Related ಮುಖಪುಟ Updates:

    Are you sure? You want to delete this comment..! Remove Cancel

    Comments (0)

      Leave a comment