ಸಚಿವ ಝಮೀರ್ ಅಹ್ಮದ್ ಅವರ ಮಗ ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾದ ಫ್ಲೆಕ್ಸ್‌ಗಳನ್ನು ತೆರವುಗೊಳಿಸಿದ ವಿಚಾರವಾಗಿ ಕೆಪಿಸಿಸಿ ಸಂಯೋಜಕ ರಾಜೀವ್ ಗೌಡ, ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಜಿ. ಅಮೃತಗೌಡ ಅವರೊಂದಿಗೆ ಗೂಂಡಾವರ್ತನೆ ಮಾಡಿ ಧಮ್ಕಿ ಹಾಕಿರುವ ಘಟನೆ ನಡೆದಿದೆ. ರಾಜೀವ್ ಗೌಡ ಅವರು ಅಧಿಕಾರಿ ಅಮೃತಗೌಡ ಅವರಿಗೆ ಕರೆ ಮಾಡಿ ಅವಾಚ್ಯವಾಗಿ ನಿಂದಿಸಿರುವ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಮಂಗಳವಾರ ಸಂಜೆ ಶಿಡ್ಲಘಟ್ಟದ ನೆಹರೂ ಮೈದಾನದಲ್ಲಿ ‘ಕಲ್ಟ್’ […]
The post ಚಿಕ್ಕಬಳ್ಳಾಪುರ | ಕಾಂಗ್ರೆಸ್ ಮುಖಂಡನಿಂದ ಪೌರಾಯುಕ್ತೆಗೆ ಅವಾಚ್ಯ ಶಬ್ದಗಳಿಂದ ನಿಂದನೆ, ಧಮ್ಕಿ appeared first on nudikarnataka.
ಸಚಿವ ಝಮೀರ್ ಅಹ್ಮದ್ ಅವರ ಮಗ ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾದ ಫ್ಲೆಕ್ಸ್‌ಗಳನ್ನು ತೆರವುಗೊಳಿಸಿದ ವಿಚಾರವಾಗಿ ಕೆಪಿಸಿಸಿ ಸಂಯೋಜಕ ರಾಜೀವ್ ಗೌಡ, ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಜಿ. ಅಮೃತಗೌಡ ಅವರೊಂದಿಗೆ ಗೂಂಡಾವರ್ತನೆ ಮಾಡಿ ಧಮ್ಕಿ ಹಾಕಿರುವ ಘಟನೆ ನಡೆದಿದೆ.
ರಾಜೀವ್ ಗೌಡ ಅವರು ಅಧಿಕಾರಿ ಅಮೃತಗೌಡ ಅವರಿಗೆ ಕರೆ ಮಾಡಿ ಅವಾಚ್ಯವಾಗಿ ನಿಂದಿಸಿರುವ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಮಂಗಳವಾರ ಸಂಜೆ ಶಿಡ್ಲಘಟ್ಟದ ನೆಹರೂ ಮೈದಾನದಲ್ಲಿ ‘ಕಲ್ಟ್’ ಸಿನಿಮಾದ ಪ್ರಚಾರ ಸಭೆ ಆಯೋಜಿಸಲಾಗಿತ್ತು. ಈ ಹಿನ್ನೆಲೆ ಕೋಟೆ ವೃತ್ತದಲ್ಲಿ ರಸ್ತೆಗೆ ಅಡ್ಡವಾಗಿ ಸಿನಿಮಾ ಪ್ರಚಾರದ ಫ್ಲೆಕ್ಸ್‌ಗಳನ್ನು ಅಳವಡಿಸಲಾಗಿತ್ತು. ಇದರಿಂದ ವಾಹನ ಸಂಚಾರಕ್ಕೆ ಅಡ್ಡಿಯಾಗಿತ್ತು. ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆ ನಗರಸಭೆ ಸಿಬ್ಬಂದಿ ಫ್ಲೆಕ್‌ಗಳನ್ನು ಕಚೇರಿಗೆ ತಂದಿಟ್ಟಿದ್ದರು. ಈ ಬಗ್ಗೆ ನಗರಸಭೆ ಮಾಜಿ ಅಧ್ಯಕ್ಷ ಹಾಗೂ ರಾಜೀವ್ ಗೌಡ ಬೆಂಬಲಿಗ ಅಪ್ಸರ್‌ಗೆ ಪೌರಾಯುಕ್ತರು ಮಾಹಿತಿ ಕೂಡ ನೀಡಿದ್ದರು ಎಂದು ವರದಿಯಾಗಿದೆ.
“>
ಫ್ಲೆಕ್ಸ್ ಬಿಚ್ಚಿದ್ದಕ್ಕೆ ತೀವ್ರ ಆಕ್ರೋಶಗೊಂಡ ರಾಜೀವ್‌ಗೌಡ ಪೌರಾಯುಕ್ತೆಗೆ ಕರೆಮಾಡಿ ಅವಾಚ್ಯವಾಗಿ ಬೈದಿದ್ದಾರೆ. ಗೂಂಡಾವರ್ತನೆ ಮಾಡಿ ಧಮ್ಕಿ ಹಾಕಿದ್ದಾರೆ ಎಂದು ವರದಿಗಳು ವಿವರಿಸಿವೆ.
“ಬ್ಯಾನರ್ ಬಿಚ್ಚಿಸಿದರೆ ಬೆಂಕಿ ಹಚ್ಚಿಸುವೆ. ನನ್ನ ಒಳ್ಳೆಯತನ ನೋಡಿದ್ದೀರಿ ಕೆಟ್ಟತನ ನೋಡಿಲ್ಲ” ಎಂದು ರಾಜೀವ್‌ಗೌಡ ಪೌರಾಯುಕ್ತೆಗೆ ಧಮ್ಕಿ ಹಾಕಿರುವುದು ವೈರಲ್ ಆಡಿಯೋದಲ್ಲಿದೆ. ಇದಕ್ಕೆ ಪ್ರತಿಕ್ರಿಯಸಿದ ಪೌರಾಯುಕ್ತೆ ಅಮೃತಗೌಡ ಅವರು, “ರಸ್ತೆಯಲ್ಲಿ ಕಟ್ಟಿದ್ದಾರೆ. ಸಾರ್ವಜನಿಕರಿಂದ ದೂರು ಬಂದಿದೆ. ಅನುಮತಿ ಪಡೆಯದೆ ಬ್ಯಾನರ್ ಕಟ್ಟಿದ್ದಾರೆ. ಅಪಘಾತ ಆದರೆ ನಾವು ಹೊಣೆ..” ಎಂದು ಹೇಳಿದ್ದಾರೆ.
ಈ ವೇಳೆ ಮತಷ್ಟು ಕುಪಿತರಾದ ರಾಜೀವ್‌ಗೌಡ, “ಬೆಂಕಿ ಹಚ್ಚುತ್ತೇನೆ, ಚಪ್ಪಲಿಯಲ್ಲಿ ಹೊಡೆಸುತ್ತೇನೆ, ಜನರನ್ನು ದಂಗೆ ಏಳಿಸುತ್ತೇನೆ” ಎಂದಿದ್ದಾರೆ. ಮುಂದುವರಿದು, ಅವಾಚ್ಯ ಶಬ್ದಗಳಿಂದ ಮಹಿಳಾ ಸರ್ಕಾರಿ ಅಧಿಕಾರಿಗೆ ನಿಂದಿಸಿದ್ದಾರೆ.
ರಾಜೀವ್ ಗೌಡ ವಿರುದ್ದ ಪ್ರತಿಭಟನೆ
ಪೌರಾಯುಕ್ತೆ ಅಮೃತಾಗೌಡ ಅವರಿಗೆ ರಾಜೀವ್‌ಗೌಡ ಧಮ್ಕಿ ಹಾಕಿರುವುದನ್ನು ಖಂಡಿಸಿ ಚಿಕ್ಕಬಳ್ಳಾಪುರ ಜಿಲ್ಲೆಯ ವಿವಿಧ ನಗರಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಬುಧವಾರ (ಜ.14) ಆಯಾ ನಗರ ಸ್ಥಳೀಯ ಸಂಸ್ಥೆಗಳ ಆವರಣದಲ್ಲಿ ಪ್ರತಿಭಟಿಸಿದ್ದಾರೆ ಎಂದು ವರದಿಯಾಗಿದೆ.
ರಾಜೀವ್ ಗೌಡ ಧಮ್ಕಿ ಹಾಕಿರುವ ಆಡಿಯೋವನ್ನು ಜೆಡಿಎಸ್ ಪಕ್ಷ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, “ಕಾಂಗ್ರೆಸ್ ದುರಾಡಳಿತದಲ್ಲಿ ಕಾಂಗ್ರೆಸ್ ಮುಖಂಡರ ಗೂಂಡಾಗಿರಿ ಜೋರಾಗಿದೆ. ಸಚಿವ ಝಮೀರ್ ಅಹ್ಮದ್ ಅವರ ಮಗ ಝೈದ್ ಖಾನ್ ಸಿನಿಮಾದ ಫ್ಲೆಕ್ಸ್‌ಗಳನ್ನು ತೆರವುಗೊಳಿಸಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವಾಚ್ಯವಾಗಿ, ಅಶ್ಲೀಲ ಶಬ್ದಗಳಿಂದ ನಿಂದಿಸಿ ಪ್ರಾಣ ಬೆದರಿಕೆ ಹಾಕಿದ್ದಾನೆ” ಎಂದಿದೆ.
ಮುಂದುವರಿದು, “ಶಿಡ್ಲಘಟ್ಟದ ಕೋಟೆ ಸರ್ಕಲ್ ರಸ್ತೆಗಳಲ್ಲಿ ಅನುಮತಿ ಪಡೆಯದೆ, ಅಕ್ರಮವಾಗಿ ಫ್ಲೆಕ್ಸ್ ಬ್ಯಾನರ್ ಅಳವಡಿಸಿದ್ದಕ್ಕೆ, ಪೌರಾಯುಕ್ತೆ ಅಮೃತಗೌಡ ಅವರು, ರಸ್ತೆಯಲ್ಲಿ ಅಪಘಾತ ಹೆಚ್ಚಿದ್ದು, ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಬ್ಯಾನರ್‌ಗಳನ್ನು ತೆರವುಗೊಳಿಸಿದ್ದಾರೆ.
ಇದಕ್ಕೆ ಕಾಂಗ್ರೆಸ್ ಮುಖಂಡ ದೂರವಾಣಿ ಕರೆ ಮಾಡಿ, ಬ್ಯಾನರ್ ತೆಗೆಸಿದವರನ್ನು ‘ಬೆಂಕಿ ಹಾಕಿ ಸುಟ್ಟು ಹಾಕುತ್ತೇನೆ, ಚಪ್ಪಲಿಯಲ್ಲಿ ಹೊಡೆಸುತ್ತೇನೆ, ಕಾರ್ಯಕರ್ತರನ್ನು ಕರೆಸಿ ದಂಗೆ ಎಬ್ಬಿಸುತ್ತೇನೆ ಎಂದು ಮಹಿಳಾಧಿಕಾರಿಗೆ ಅಶ್ಲೀಲವಾಗಿ ನಿಂದಿಸಿ ಬೆದರಿಕೆಯೊಡ್ಡಿದ್ದಾನೆ” ಎಂದು ಹೇಳಿದೆ.
“ಸಿಎಂ ಸಿದ್ದರಾಮಯ್ಯ , ಗೃಹ ಸಚಿವರ ಪಮೇಶ್ವರ್ ಅವರೇ ಪೌರಾಯುಕ್ತೆಗೆ ಧಮ್ಕಿ ಹಾಗೂ ಜೀವ ಬೆದರಿಕೆ ಹಾಕಿರುವ ಕಾಂಗ್ರೆಸ್ ಗೂಂಡಾ ರಾಜೀವ್ ಗೌಡನನ್ನು ತಕ್ಷಣವೇ ಬಂಧಿಸಿ, ಕಾನೂನು ಕ್ರಮ ಜರುಗಿಸಿ. ಕಾಂಗ್ರೆಸ್ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರೇ ಕೆಪಿಸಿಸಿ ರಾಜ್ಯ ಸಂಯೋಜಕನಾಗಿರುವ ಬೀದಿ ರೌಡಿ ರಾಜೀವ್ ಗೌಡನನ್ನು ಮೊದಲು ಪಕ್ಷದಿಂದ ವಜಾ ಮಾಡಿ” ಎಂದು ಆಗ್ರಹಿಸಿದೆ.
ಕೃಪೆ : ನಾನು ಗೌರಿ.ಕಾಂ
The post ಚಿಕ್ಕಬಳ್ಳಾಪುರ | ಕಾಂಗ್ರೆಸ್ ಮುಖಂಡನಿಂದ ಪೌರಾಯುಕ್ತೆಗೆ ಅವಾಚ್ಯ ಶಬ್ದಗಳಿಂದ ನಿಂದನೆ, ಧಮ್ಕಿ appeared first on nudikarnataka.
Previous Article
ಶ್ರೀ ದುರ್ಗಾಂಭಿಕ ದೇವಿ ಜಾತ್ರೆ -ಪ್ರಾಣಿಬಲಿ ನಿಷೇಧ:ಜಿಲ್ಲಾಧಿಕಾರಿ ಗಂಗಾಧರಸ್ವಾಮಿ
Next Article
ಪತ್ತೆಯಾದ ಬಾಲಕಾರ್ಮಿಕರ ಬಗ್ಗೆ ನಿಗಾವಹಿಸಿ : ನ್ಯಾ.ಮಹಾವೀರ ಮ.ಕರೆಣ್ಣವರ