ದಾವಣಗೆರೆ, ಜ.14 :ಬಾಲ ಕಾರ್ಮಿಕರನ್ನು ಪತ್ತೆ ಹಚ್ಚಿ, ಅವರನ್ನು ಕಾನೂನು ಕ್ರಮದನ್ವಯ ಪೋಷಕರ ವಶಕ್ಕೆ ನೀಡಿದ ನಂತರ ಮಕ್ಕಳ ಮೇಲೆ ನಿಗಾವಹಿಸಿ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿ ಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ.ಕರೆಣ್ಣವರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಏರ್ಪಡಿಸಿದ್ದ ಕಾರ್ಮಿಕ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಾಲಕಾರ್ಮಿಕರನ್ನು ಪತ್ತೆ ಹಚ್ಚಿದ ನಂತರ ಅವರು ಬಾಲ ಮಂದಿರಗಳಲ್ಲಿ ಅವರನ್ನು ಪೋಷಿಸುತ್ತಾರೆ. ನಂತರ ವಾರಸುದಾರರ ಪತ್ತೆ ಹಚ್ಚಿ […]
ದಾವಣಗೆರೆ, ಜ.14 :ಬಾಲ ಕಾರ್ಮಿಕರನ್ನು ಪತ್ತೆ ಹಚ್ಚಿ, ಅವರನ್ನು ಕಾನೂನು ಕ್ರಮದನ್ವಯ ಪೋಷಕರ ವಶಕ್ಕೆ ನೀಡಿದ ನಂತರ ಮಕ್ಕಳ ಮೇಲೆ ನಿಗಾವಹಿಸಿ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿ ಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ.ಕರೆಣ್ಣವರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಏರ್ಪಡಿಸಿದ್ದ ಕಾರ್ಮಿಕ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬಾಲಕಾರ್ಮಿಕರನ್ನು ಪತ್ತೆ ಹಚ್ಚಿದ ನಂತರ ಅವರು ಬಾಲ ಮಂದಿರಗಳಲ್ಲಿ ಅವರನ್ನು ಪೋಷಿಸುತ್ತಾರೆ. ನಂತರ ವಾರಸುದಾರರ ಪತ್ತೆ ಹಚ್ಚಿ ಪೋಷಕರ ವಶಕ್ಕೆ ನೀಡಲಾಗುತ್ತಿದೆ , ನಂತರ ಪತ್ತೆ ಹಚ್ಚಿದ ಬಾಲ ಕಾರ್ಮಿಕರ ಬಗ್ಗೆ ಯಾವುದೇ ಮಾಹಿತಿಯು ಇಲಾಖೆಯಲ್ಲಿ ಇರುವುದಿಲ್ಲ. ಅದುದರಿಂದ ಮಕ್ಕಳ ರಕ್ಷಣಾ ಘಟಕ , ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸ್ವಯಂಸೇವಾ ಸಂಸ್ಥೆಗಳು ಒಟ್ಟಾಗಿ ಪಾಲಕರ ವಶಕ್ಕೆ ನೀಡಿದ ಮಕ್ಕಳ ಬಗ್ಗೆ ಮಾಹಿತಿಯನ್ನು ಕಲೆಹಾಕಿ ನಿಗಾವಹಿಸಬೇಕು. ಇಲ್ಲವಾದಲ್ಲಿ ಬಡತನ ಅಥವಾ ಕೌಟುಂಬಿಕ ಆರ್ಥಿಕ ಪರಿಸ್ಥಿತಿಯು ಅವರನ್ನು ಮತ್ತೆ ಬಾಲಕಾರ್ಮಿಕರನ್ನಾಗಿ ಮಾಡಬಹುದು. ಆದುದರಿಂದ ಮಕ್ಕಳು ಮತ್ತು ಪೋಷಕರೊಂದಿಗೆ ಆಪ್ತ ಸಮಾಲೋಚನೆ ಕಡ್ಡಾಯವಾಗಿ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪ್ರಸಕ್ತ ಸಾಲಿನಲ್ಲಿ ಇದುವರೆಗೆ 16 ಬಾಲ ಕಾರ್ಮಿಕ ಪ್ರಕರಣಗಳನ್ನು ಪತ್ತೆಹಚ್ಚಿದ್ದು ಆ ಬಾಲಕಾರ್ಮಿಕರು ಶಾಲೆಗೆ ಹೋಗುತ್ತಿದ್ದಾರೆ ಅಥವಾ ಪುನಃ ಕೆಲಸಕ್ಕೆ ಹೋಗುತ್ತಿದ್ದಾರೆ ಎಂಬುದರ ಬಗ್ಗೆ ವಿಸ್ತೃತವಾಗಿ ವರದಿ ನೀಡುವಂತೆ ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಬೀದಿನಾಟಕ, ಗೋಡೆಬರಹ, ಕರಪತ್ರಗಳು , ಆಟೋಪ್ರಚಾರ, ತರಬೇತಿ ಕಾರ್ಯಗಾರಗಳು, ಬಿತ್ತಿ ಪತ್ರಗಳು ಸಂಚಾರಿ ರಥ ಹಾಗೂ ಮಕ್ಕಳಿಗೆ ಪ್ರಬಂಧ ಸ್ಪರ್ಧೇಯನ್ನು ಏರ್ಪಡಿಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದು ಕಾರ್ಮಿಕ ಅಧಿಕಾರಿ ಸಭೆಗೆ ತಿಳಿಸಿದರು.
Read also : ಶ್ರೀ ದುರ್ಗಾಂಭಿಕ ದೇವಿ ಜಾತ್ರೆ -ಪ್ರಾಣಿಬಲಿ ನಿಷೇಧ:ಜಿಲ್ಲಾಧಿಕಾರಿ ಗಂಗಾಧರಸ್ವಾಮಿ
ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಅವರು ಮಾತನಾಡಿ ಪ್ರತಿ ಮಾಹೆ ತಾಲ್ಲೂಕು ಮಟ್ಟದಲ್ಲಿ ಬಾಲಕಾರ್ಮಿಕರನ್ನು ತಡೆಗಟ್ಟುವ ಬಗ್ಗೆ ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ತ್ರೈಮಾಸಿಕ ಸಭೆಯಲ್ಲಿ ಅನುಪಾಲನಾ ವರದಿಯನ್ನು ಮಂಡಿಸಬೇಕು, ಅರಿವು ಕಾರ್ಯಕ್ರಮಗಳನ್ನು ನಡೆಸಬೇಕು, ಶಾಲಾ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಜಿಲ್ಲಾ ಮಟ್ಟದ ಕಾರ್ಯಪಡೆ ಸಮಿತಿ ಸದಸ್ಯರುಗಳು ಪ್ರಸಕ್ತ ಸಾಲಿನಲ್ಲಿ ಪತ್ತೆಯಾಗಿರುವ 16 ಬಾಲಕಾರ್ಮಿಕರ ಬಗ್ಗೆ ಪ್ರಸ್ತುತ ಅವರು ಶಾಲೆಗೆ ದಾಖಲಾಗಿರುವ ಬಗ್ಗೆ ಅಥವಾ ಅವರು ಏನು ಮಾಡುತ್ತಿದ್ದಾರೆ ಎಂಬುದರ ಬಗ್ಗೆ ವರದಿಯನ್ನು ನೀಡ ಬೇಕು , ಮಂಡಕ್ಕಿ ಬಟ್ಟಿ ಕೇಂದ್ರಗಳ ಮೇಲೆ ದಾಳಿ ನಡೆಸಬೇಕು ಮತ್ತು ಮಾಲೀಕರೊಂದಿಗೆ ಸಭೆ ನಡೆಸಿ ಬಾಲಕಾರ್ಮಿಕರ ಬಗ್ಗೆ ಅರಿವು ಮೂಡಿಸುವ ಕಾರ್ಯವನ್ನು ಮಾಡುವಂತೆ, ಬಾಲಕಾರ್ಮಿಕರು ಕಂಡು ಬಂದಲ್ಲಿ ಸಹಾಯವಾಣಿ ಸಂಖ್ಯೆ 1098 , 112 ಗೆ ಕರೆ ಮಾಡಿ ಮಾಹಿತಿಯನ್ನು ನೀಡುವಂತೆ ತಿಳಿಸಿದರು.
ಇದೇ ಸಂದರ್ಭದಲ್ಲಿ, ಪ್ರಸಕ್ತ ಸಾಲಿನಲ್ಲಿ ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ಅನ್ವಯ 7 ಬಾಲಕಾರ್ಮಿಕರಿಗೆ ತಲಾ 20,000/- ಗಳಂತೆ ಪರಿಹಾರವನ್ನು ವಿತರಿಸಲಾಯಿತು. 18 ವರ್ಷ ಪೂರ್ಣಗೊಂಡ ಬಾಲಕಾರ್ಮಿಕರಾದ ದಾವಣಗರೆ ತರುಣ್ ಮತ್ತು ಹರಿಹರದ ಹಾಶಮ್ ಇವರಿಗೆ 35000/- ಪರಿಹಾರ ಚೆಕ್ ವಿತರಿಸಲಾಯಿತು. ಶಾಲಾ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೇಯಲ್ಲಿ ವಿಜೇತರಾದ 18 ಮಕ್ಕಳಿಗೆ ನಗದು ಬಹುಮಾನ, 5 ಜನರಿಗೆ ಆಹಾರದ ಕಿಟ್ ಅನ್ನು ವಿತರಿಸಲಾಯಿತು.
ಜಿಲ್ಲಾ ಕಾರ್ಮಿಕ ಅಧಿಕಾರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು, ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು, ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳು ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Previous Article
ಚಿಕ್ಕಬಳ್ಳಾಪುರ | ಕಾಂಗ್ರೆಸ್ ಮುಖಂಡನಿಂದ ಪೌರಾಯುಕ್ತೆಗೆ ಅವಾಚ್ಯ ಶಬ್ದಗಳಿಂದ ನಿಂದನೆ, ಧಮ್ಕಿ
Next Article
ಜ.15: ಪರ್ಯಾಯ ದೀಪಾಲಂಕಾರ ಉದ್ಘಾಟನೆ; ಜ.16 ಕ್ಕೆ ಪರಶುರಾಮ ಸ್ವಾಗತ ಗೋಪುರಕ್ಕೆ ಶಿಲಾನ್ಯಾಸ