Filters

Channels
Topics
Other Filters

ಉದ್ಯೋಗದಲ್ಲಿ ಕನ್ನಡಿಗರಿಗೆ ಆದ್ಯತೆ, ನಾಮಫಲಕದಲ್ಲಿ ಕನ್ನಡ ಕಡ್ಡಾಯ: ಸಚಿವ ರಾಮಲಿಂಗಾರೆಡ್ಡಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ರಾಜ್ಯದ ಕೈಗಾರಿಕೆಗಳಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಕೋಲಾರದ ಗಾಂಧಿವನದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಕುರಿತು ಈಗಾಗಲೇ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಲಾಗಿದೆ ಎಂದರು. ಸರೋಜಿನಿ ಮಹಿಷಿ ವರದಿಯಂತೆ ಕನ್ನಡಿಗರಿಗೆ ಉದ್ಯೋಗಾವಕಾಶ ಕಲ್ಪಿಸಲು ಸರ್ಕಾರ ಒತ್ತಾಯಿಸುತ್ತಿದೆ. ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ದೊಡ್ಡ ಉದ್ಯಮಿಗಳ ಸಭೆ ಕರೆದು ಈ ಬಗ್ಗೆ ಚರ್ಚಿಸಲಿದ್ದಾರೆ ಎಂದು ತಿಳಿಸಿದರು. ಹೊರರಾಜ್ಯದವರು ಕರ್ನಾಟಕಕ್ಕೆ ಬರಬಹುದು. ಆದರೆ […] The post ಉದ್ಯೋಗದಲ್ಲಿ ಕನ್ನಡಿಗರಿಗೆ ಆದ್ಯತೆ, ನಾಮಫಲಕದಲ್ಲಿ ಕನ್ನಡ ಕಡ್ಡಾಯ: ಸಚಿವ ರಾಮಲಿಂಗಾರೆಡ್ಡಿ appeared first on ONLINE.

ಸೀಫರ್ಟ್–ಫಿಲಿಪ್ಸ್ ಅಬ್ಬರ; ಕಿವೀಸ್ ಗೆ ಜಯ: T20 ಸರಣಿ ಟೀಂ ಇಂಡಿಯಾ ಕೈವಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಗೆ ರೋಚಕ ತೆರೆ ಬಿದ್ದಿದೆ. ಆರಂಭಿಕ ಮೂರು ಪಂದ್ಯಗಳಲ್ಲಿ ಗೆಲುವು ದಾಖಲಿಸಿ ಸರಣಿಯಲ್ಲಿ ಮುನ್ನಡೆ ಸಾಧಿಸಿದ್ದ ಭಾರತ, ಅಂತಿಮವಾಗಿ 3-2 ಅಂತರದಿಂದ ಟ್ರೋಫಿ ತನ್ನದಾಗಿಸಿಕೊಂಡಿದೆ. ಆದರೆ ಭಾನುವಾರ ನಡೆದ ಐದನೇ ಹಾಗೂ ಅಂತಿಮ ಪಂದ್ಯದಲ್ಲಿ ನ್ಯೂಜಿಲೆಂಡ್ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿ ಸರಣಿಯನ್ನು ಗೆಲುವಿನೊಂದಿಗೆ ಮುಕ್ತಾಯಗೊಳಿಸಿದೆ. ಆರಂಭದಲ್ಲೇ ಭಾರತಕ್ಕೆ ಆಘಾತ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತಕ್ಕೆ ಆರಂಭಿಕ ಹಂತದಲ್ಲೇ […] The post ಸೀಫರ್ಟ್–ಫಿಲಿಪ್ಸ್ ಅಬ್ಬರ; ಕಿವೀಸ್ ಗೆ ಜಯ: T20 ಸರಣಿ ಟೀಂ ಇಂಡಿಯಾ ಕೈವಶ appeared first on ONLINE.

ವಾಲ್ಮೀಕಿ ನಿಗಮ ಹಗರಣದ ಹಣ ವಸೂಲಿ; ನಾಗೇಂದ್ರ ಮತ್ತೆ ಬಳ್ಳಾರಿಗೆ ಉಸ್ತುವಾರಿಯಾಗಿ ಬರಲಿದ್ದಾರೆ: ಜಮೀರ್ ಅಹ್ಮದ್ ಖಾನ್

ಹೊಸದಿಗಂತ ವರದಿ ಬಳ್ಳಾರಿ: ನ.10ರೊಳಗೆ ಬಿ.ನಾಗೇಂದ್ರ ಅವರು ಮತ್ತೆ ಮಂತ್ರಿಯಾಗಲಿದ್ದಾರೆ, ಜಿಲ್ಲಾ ಉಸ್ತುವಾರಿಯಾಗಿ ಮತ್ತೆ ಬಳ್ಳಾರಿಗೆ ಬರಲಿದ್ದಾರೆ ಎನ್ನುವ ವಿಶ್ವಾಸವಿದೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು. ನಗರದಲ್ಲಿ ಭಾನುವಾರ ಮಾತನಾಡಿದ ಅವರು, ನಿಗಮದ ಹಣ ರಿಕವರಿ ಆಗಿದೆ, ಸಿಬಿಐ ತನಿಖೆ ನಡೀತಿದೆ, ವರದಿ ಬರಲಿ. ನಾಗೇಂದ್ರ ಅವರು ಈ ಬಾರಿ ರಾಜುನಾಮೆ ಕೊಟ್ಟಿದ್ದು ಅವರ ಸ್ವಇಚ್ಛೆಯಿಂದ, ಇದು ನನಗೆ ಪಕ್ಕ ಗೊತ್ತಿದೆ. ಹೈಕಮಾಂಡ್ ಸೂಚನೆ ನೀಡಿರಲಿಲ್ಲ. ಬಿಜೆಪಿ ಅವರ ಅಪಪ್ರಚಾರ, ಬಿಜೆಪಿ ಅವರು […] The post ವಾಲ್ಮೀಕಿ ನಿಗಮ ಹಗರಣದ ಹಣ ವಸೂಲಿ; ನಾಗೇಂದ್ರ ಮತ್ತೆ ಬಳ್ಳಾರಿಗೆ ಉಸ್ತುವಾರಿಯಾಗಿ ಬರಲಿದ್ದಾರೆ: ಜಮೀರ್ ಅಹ್ಮದ್ ಖಾನ್ appeared first on ONLINE.

ಪ್ರೇಯಸಿ ಕರೆದಿದ್ದಕ್ಕೆ ಬಂದ ಪ್ರಿಯಕರನನ್ನು ಕಂಬಕ್ಕೆ ಕಟ್ಟಿ ಅರೆಬೆತ್ತಲೆಗೊಳಿಸಿ ಥಳಿತ

ಹಾವೇರಿ: ಪ್ರೀತಿಸಿದ ಯುವತಿಯನ್ನು ಮದುವೆಯಾಗುವ ಉದ್ದೇಶದಿಂದ ಆಕೆಯ ಮನೆಗೆ ಬಂದಿದ್ದ ಯುವಕ ಹಾಗೂ ಆತನ ಇಬ್ಬರು ಸ್ನೇಹಿತರ ಮೇಲೆ ಯುವತಿಯ ಸಂಬಂಧಿಕರು ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಮೂವರು ಯುವಕರನ್ನು ಹಿಡಿದು ಕಂಬಕ್ಕೆ ಕಟ್ಟಿ, ಅರೆಬೆತ್ತಲೆಗೊಳಿಸಿ ಮನಬಂದಂತೆ ಥಳಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಅಕ್ಟೋಬರ್ 27ರಂದು ಈ ಘಟನೆ ನಡೆದಿದೆ ಎನ್ನಲಾಗಿದೆ. ಹಲ್ಲೆಗೊಳಗಾದ ಯುವಕರನ್ನು ರಟ್ಟಿಹಳ್ಳಿಯ ಪ್ರಮೋದ್ ಹಾಗೂ ಆತನ ಸ್ನೇಹಿತರಾದ […] Source

ಲಾರಿಯಿಂದ ಜಿಗಿದು ಪ್ರಾಣ ಉಳಿಸಿಕೊಳ್ಳಲು ಯತ್ನ: ಬಂಡೆ ಕಲ್ಲಿಗೆ ತಲೆ ಬಡಿದು ಚಾಲಕನ ದುರ್ಮ*ರಣ

ಹೊಸದಿಗಂತ ವರದಿ ಮಡಿಕೇರಿ: ನಿಯಂತ್ರಣ ತಪ್ಪಿದ ಲಾರಿಯಿಂದ ಜಿಗಿದ ಚಾಲಕನ ತಲೆ ಬಂಡೆ ಕಲ್ಲುಗಳಿಗೆ ಅಪ್ಪಳಿಸಿ ಸಾವನ್ನಪ್ಪಿರುವ ಘಟನೆ ಕುಶಾಲನಗರ ತಾಲೂಕಿನ ಅರೆಗಲ್ಲು ಕಲ್ಲುಕೋರೆಯಲ್ಲಿ‌ ಭಾನುವಾರ ಮಧ್ಯಾಹ್ನ ನಡೆದಿದೆ. ಕುಶಾಲನಗರದ ಟೌನ್ ಕಾಲನಿ ನಿವಾಸಿ ಆರ್ಮುಗಂ ಅವರ ಪುತ್ರ ವಿನ್ಸೆಂಟ್ (35) ಎಂಬವರೇ ಮೃತ ದುರ್ದೈವಿ. ಕುಶಾಲನಗರ ಸಮೀಪದ ತೊರೆನೂರಿನ ಅರೆಗಲ್ಲು ಕೋರೆಯಲ್ಲಿ ಕಲ್ಲು ತುಂಬಿದ ಲಾರಿ ಚಾಲನೆ ಮಾಡುತ್ತಿದ್ದ ಸಂದರ್ಭ ನಿಯಂತ್ರಣ ತಪ್ಪಿ ಸುಮಾರು 25 ಅಡಿ ಆಳದ ಕಂದಕಕ್ಕೆ ಉರುಳಿದೆ. ಈ ಸಂದರ್ಭ ಅದರಲ್ಲಿದ್ದ […] The post ಲಾರಿಯಿಂದ ಜಿಗಿದು ಪ್ರಾಣ ಉಳಿಸಿಕೊಳ್ಳಲು ಯತ್ನ: ಬಂಡೆ ಕಲ್ಲಿಗೆ ತಲೆ ಬಡಿದು ಚಾಲಕನ ದುರ್ಮ*ರಣ appeared first on ONLINE.

ಕನ್ನಡ ನಾಡು,ನುಡಿ,ಸಂಸ್ಕೃತಿ ರಕ್ಷಣೆಗೆ ಪ್ರತಿಯೊಬ್ಬರೂ ಕೈಜೋಡಿಸಿ: ಸಚಿವ ಕೆ.ಎಸ್. ಬಸವಂತಪ್ಪ

ವಿಜಯನಗರ (ಹೊಸಪೇಟೆ): ಕನ್ನಡ ಭಾಷೆ, ನಾಡು, ನುಡಿ ಹಾಗೂ ಸಂಸ್ಕೃತಿಯ ರಕ್ಷಣೆ ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿಯಾಗಿದೆ. ಆಧುನಿಕ ತಂತ್ರಜ್ಞಾನದ ಎಲ್ಲ ಕ್ಷೇತ್ರಗಳಲ್ಲಿಯೂ ಕನ್ನಡ ಭಾಷೆಯನ್ನು ಬೆಳೆಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಬಸವಂತಪ್ಪ ಕರೆ ನೀಡಿದರು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ನಡೆದ 71ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಕನ್ನಡ ಭಾಷೆಗೆ ಸಾವಿರಾರು ವರ್ಷಗಳ [...]

ಸಿದ್ದರಾಮಯ್ಯ ಮಾತ್ರವಲ್ಲ, ಹಲವರ ಮೇಲೆ ಸ್ಟಿಂಗ್ ಆಪರೇಷನ್ ನಡೆದಿದೆ: ಬಸನಗೌಡ ಪಾಟೀಲ ಯತ್ನಾಳ್

ಹೊಸದಿಗಂತ ವರದಿ ವಿಜಯಪುರ: ಕೇವಲ ಸಿದ್ದರಾಮಯ್ಯನವರ ಮೇಲಲ್ಲ. ಬಹಳ ಜನರ ಮೇಲೆ ಸ್ಟಿಂಗ್ ಆಪರೇಷನ್ ಗಳು ಆಗಿವೆ, ರಾಜ್ಯದಲ್ಲಿ ಸ್ಟಿಂಗ್ ಆಪರೇಷನ್ ಎರಡು ಕಾರ್ಖಾನೆಗಳು ಇವೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿದರು. ರಾಜ್ಯದಲ್ಲಿ ಸ್ಟಿಂಗ್ ಆಪರೇಷನ್ ಸದ್ದು ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಒಂದು ಬಿಜೆಪಿ ಪೂಜ್ಯ ತಂದೆಯವರ ಕಿರಿಯ ಮಗನ ಮಾರ್ಗದರ್ಶನದಲ್ಲಿ, ಇನ್ನೊಂದು ರಾಜ್ಯದ ಮುಖ್ಯಮಂತ್ರಿ ಗಳ ಮಾರ್ಗದರ್ಶನದಲ್ಲಿ. ಎರಡು ಸ್ಟಿಂಗ್ ಆಪರೇಷನ್ ಸಿಡಿ ಕಂಪನಿಗಳು ಇವೆ ಎಂದರು. ಇದನ್ನೂ ಓದಿ: ಅವರಿಬ್ಬರಿಗೆ […] The post ಸಿದ್ದರಾಮಯ್ಯ ಮಾತ್ರವಲ್ಲ, ಹಲವರ ಮೇಲೆ ಸ್ಟಿಂಗ್ ಆಪರೇಷನ್ ನಡೆದಿದೆ: ಬಸನಗೌಡ ಪಾಟೀಲ ಯತ್ನಾಳ್ appeared first on ONLINE.

ಬೃಹತ್ ‘ಮಹಾಧನ್ವಂತರಿ ಯಾಗ’ಕ್ಕೆ ಸಜ್ಜಾಗುತ್ತಿದೆ ಪೊಡವಿಗೊಡೆಯನ ನಾಡು: ಆಮಂತ್ರಣ, ವೆಬ್‌ಸೈಟ್ ಅನಾವರಣ, ಮನೆ-ಮನೆ ಪ್ರಚಾರಕ್ಕೆ ಚಾಲನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಆರೋಗ್ಯ ಸಂಪನ್ನ ಮತ್ತು ಸುರಕ್ಷಿತ ಭಾರತ ನಿರ್ಮಾಣ ಸನಾತನ ಸಂಸ್ಥೆಯ ಸಾರಥ್ಯದಲ್ಲಿ ನ. 29 ರಂದು ಉಡುಪಿಯ ಎಂಜಿಎಂ ಮೈದಾನದಲ್ಲಿ ‘ಮಹಾಧನ್ವಂತರಿ ಯಾಗ’ದ ಆಯೋಜನೆಯಾಗಿದ್ದು, ಭರದ ಸಿದ್ಧತೆ ನಡೆಯುತ್ತಿದೆ. ಕಾರ್ಯಕ್ರಮದ ಪೂರ್ವಭಾವಿಯಾಗಿ ಉಡುಪಿಯ ಬೀಡಿನಗುಡ್ಡೆಯ ಯಕ್ಷಗಾನ ಕಲಾರಂಗದಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ಯಾಗದ ಡಿಜಿಟಲ್ ಹಾಗೂ ಮುದ್ರಣ ಮಾಧ್ಯಮದ ಪ್ರಮುಖ ಸಾಹಿತ್ಯಗಳ ಅನಾವರಣ ಕಾರ್ಯಕ್ರಮವು ನೆರವೇರಿತು. ಸಭೆಯಲ್ಲಿ 100ಕ್ಕೂ ಹೆಚ್ಚು ಮಂದಿ ಉಪಸ್ಥಿತರಿದ್ದು, ಯಾಗವನ್ನು ಭಕ್ತಿಯಿಂದ ಸಂಘಟಿಸುವ ಸಂಕಲ್ಪ ತೊಟ್ಟರು. ಇದೇ ಸಭೆಯಲ್ಲಿ ಯಾಗದ […] The post ಬೃಹತ್ ‘ಮಹಾಧನ್ವಂತರಿ ಯಾಗ’ಕ್ಕೆ ಸಜ್ಜಾಗುತ್ತಿದೆ ಪೊಡವಿಗೊಡೆಯನ ನಾಡು: ಆಮಂತ್ರಣ, ವೆಬ್‌ಸೈಟ್ ಅನಾವರಣ, ಮನೆ-ಮನೆ ಪ್ರಚಾರಕ್ಕೆ ಚಾಲನೆ appeared first on ONLINE.

ಈಶ್ವರಮ್ಮ ಶಾಲೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ

ದಾವಣಗೆರೆ : ನಗರದ ಪಿ.ಜೆ. ಬಡಾವಣೆಯಲ್ಲಿರುವ ಈಶ್ವರಮ್ಮ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಭಾನುವಾರ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ‘ಕನ್ನಡ ಭಾರತಿ’ ದಿನಪತ್ರಿಕೆಯ ಸಂಪಾದಕ ಮಲ್ಲಿಕಾರ್ಜುನ ಕಬ್ಬೂರು ಮಾತನಾಡಿ,ಜೀವನದ ಸವಾಲುಗಳನ್ನು ಆತ್ಮವಿಶ್ವಾಸದಿಂದ ಎದುರಿಸಲು ಮಾತೃಭಾಷೆಯ ಕಲಿಕೆ ಅತ್ಯಗತ್ಯ.ಓದಿದಂತೆ ಬರೆಯಲು ಸಾಧ್ಯವಾಗುವ ಭಾಷೆ ಕನ್ನಡವಾಗಿದ್ದು, ವಿದ್ಯಾರ್ಥಿಗಳು ಕೇವಲ ಅಂಕಗಳ ಗಳಿಕೆಗೆ ಸೀಮಿತವಾಗದೆ ಸಾಹಿತ್ಯ, ಸಂಸ್ಕೃತಿ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿ ಕೊಳ್ಳಬೇಕು ಎಂದು ಸಲಹೆ ನೀಡಿದರು. ಕನ್ನಡ [...]

ಬೆಂಗಳೂರು-ಮುಂಬೈ ನಡುವೆ ವಂದೇ ಭಾರತ್ ಸ್ಲೀಪರ್ ರೈಲಿಗೆ ಚಾಲನೆ ನೀಡಿದ ಸಚಿವ ಅಶ್ವಿನಿ ವೈಷ್ಣವ್

ಬೆಂಗಳೂರು: ಬೆಂಗಳೂರು ಮತ್ತು ಮುಂಬೈ ನಡುವಿನ ರೈಲು ಪ್ರಯಾಣಿಕರಿಗೆ ಸಿಹಿಸುದ್ದಿ ಸಿಕ್ಕಿದೆ. ಬಹುನಿರೀಕ್ಷಿತ ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ಎಕ್ಸ್‌ಪ್ರೆಸ್ ರೈಲು ಸೇವೆಗೆ ಚಾಲನೆ ದೊರೆತಿದೆ. ಬೆಂಗಳೂರಿನ ಬೈಯಪ್ಪನಹಳ್ಳಿಯಲ್ಲಿರುವ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್‌ನಲ್ಲಿ ನಡೆದ ಸಮಾರಂಭದಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ನೂತನ ರೈಲಿಗೆ ಹಸಿರು ನಿಶಾನೆ ತೋರಿಸಿದ್ದಾರೆ.  ಉದ್ಘಾಟನಾ ಸಮಾರಂಭದಲ್ಲಿ ಕೇಂದ್ರ ಭಾರಿ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ರೈಲ್ವೆ ರಾಜ್ಯ ಖಾತೆ ಸಚಿವ ವಿ. […] Source

400 ಸಿಕ್ಸರ್‌ಗಳ ಮೈಲಿಗಲ್ಲು: T20 ಕ್ರಿಕೆಟ್‌ನಲ್ಲಿ ಟೀಂ ಇಂಡಿಯಾದ ಹೊಸ ವಿಶ್ವ ದಾಖಲೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಟೀಂ ಇಂಡಿಯಾ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದೆ. ಒಂದೇ ಕ್ಯಾಲೆಂಡರ್ ವರ್ಷದಲ್ಲಿ 400 ಸಿಕ್ಸರ್‌ಗಳನ್ನು ಬಾರಿಸಿದ ವಿಶ್ವದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ. ನ್ಯೂಜಿಲೆಂಡ್ ವಿರುದ್ಧ ಭಾನುವಾರ ನಡೆದ ಐದನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಈ ಮಹತ್ವದ ಮೈಲಿಗಲ್ಲು ತಲುಪಿದೆ. 40 ಪಂದ್ಯಗಳಲ್ಲಿ 400 ಸಿಕ್ಸರ್‌ಗಳ ದಾಖಲೆ 2026ರಲ್ಲಿ ಆಡಿದ 40 ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಭಾರತ ಒಟ್ಟು 400 ಸಿಕ್ಸರ್‌ಗಳನ್ನು ಸಿಡಿಸಿದೆ. ಈ […] The post 400 ಸಿಕ್ಸರ್‌ಗಳ ಮೈಲಿಗಲ್ಲು: T20 ಕ್ರಿಕೆಟ್‌ನಲ್ಲಿ ಟೀಂ ಇಂಡಿಯಾದ ಹೊಸ ವಿಶ್ವ ದಾಖಲೆ appeared first on ONLINE.

ಸರ್ಕಾರಿ ಕಾರ್ಯಕ್ರಮಗಳಲ್ಲಿ ವಿ.ಐ.ಪಿ ಸಂಸ್ಕೃತಿಗೆ ಬ್ರೇಕ್ ಹಾಕಿ: ಸಾಹಿತ್ಯ ಸಮ್ಮೇಳನದಲ್ಲಿ ‘ಕೋಳಿ ಬಾಡು’ವಿತರಿಸಿ ವಿನೂತನ ಅಭಿಯಾನ!

ಬೆಂಗಳೂರು : ಸರ್ಕಾರಿ ಅನುದಾನದಲ್ಲಿ ನಡೆಯುವ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳಿಗೆ ಮಾತ್ರ ವಿಶೇಷ ವಿ.ಐ.ಪಿ ಆತಿಥ್ಯ ನೀಡುವ ಸಂಸ್ಕೃತಿಯನ್ನು ಖಂಡಿಸಿ, ಎಲ್ಲರಿಗೂ ಸಮಾನ ಊಟದ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಿ ಬೆಂಗಳೂರಿನ ಚಾಮರಾಜಪೇಟೆಯಲ್ಲಿ  ವಿನೂತನ ಎಲ್ಲಾ ಕಾಲಕ್ಕೂ ಬೇಕಾದ ಅಭಿಯಾನವನ್ನು ನಾವು ದ್ರಾವಿಡ ಕನ್ನಡಿಗರು ಚಳುವಳಿ ಮತ್ತು ಆಹಾರ ಸಂರಕ್ಷಣಾ ಸಮಿತಿ ವತಿಯಿಂದ ನಡೆಸಲಾಯಿತು. ಚಾಮರಾಜಪೇಟೆಯಲ್ಲಿ ನಡೆದ ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸಂದರ್ಭದಲ್ಲಿ ಜಮಾಯಿಸಿದ ಪ್ರಜ್ಞಾವಂತ ನಾಗರಿಕರು ಮತ್ತು ಹೋರಾಟಗಾರರು, [...]

Numerology Horoscope: ನಿಮ್ಮ ಅದೃಷ್ಟ ಸಂಖ್ಯೆ ಯಾವುದು ಗೊತ್ತಾ? ಇಂದಿನ ಸಂಖ್ಯಾಶಾಸ್ತ್ರ ಭವಿಷ್ಯ ಇಲ್ಲಿದೆ!

Numerology Horoscope: ನಿಮ್ಮ ಅದೃಷ್ಟ ಸಂಖ್ಯೆ ಯಾವುದು ಗೊತ್ತಾ? ಇಂದಿನ ಸಂಖ್ಯಾಶಾಸ್ತ್ರ ಭವಿಷ್ಯ ಇಲ್ಲಿದೆ!Today's numerology horoscope brings insights into love, family relationships, career and personal growth for numbers 1 to 9. Discover your lucky number, lucky colours and daily predictions based on your birth date. Find out what November 1, 2026, has in store for you.

ಹಿಟ್‌ ಆ್ಯಂಡ್‌ ರನ್‌ ಕೇಸ್‌: ಅಪಘಾತ ಮಾಡಿದ್ದೇ ಗೊತ್ತಿರಲಿಲ್ಲ ಎಂದ ಯೂಟ್ಯೂಬರ್ ನಿಖಿಲ್

ಮೈಸೂರು: ಯೂಟ್ಯೂಬರ್ ಮಧು ಗೌಡ ಅವರ ಪತಿ ನಿಖಿಲ್ ರವೀಂದ್ರ ವಿರುದ್ಧ ಹಿಟ್‌ ಆ್ಯಂಡ್‌ ರನ್‌ ಆರೋಪ ಕೇಳಿಬಂದಿದೆ. ಮೈಸೂರಿನಲ್ಲಿ ನಿಖಿಲ್ ಬಳಸುತ್ತಿದ್ದ ಕಾರು ಬೈಕ್ ಸವಾರನಿಗೆ ಡಿಕ್ಕಿ ಹೊಡೆದು, ಆತ ಗಂಭೀರವಾಗಿ ಗಾಯಗೊಂಡಿದ್ದಾನೆ. ಅಪಘಾತದ ಬಳಿಕ ಕಾರು ನಿಲ್ಲಿಸದೆ ಸ್ಥಳದಿಂದ ತೆರಳಿದ್ದಾರೆ ಎಂಬ ಆರೋಪದ ಬೆನ್ನಲ್ಲೇ, ಅಪಘಾತ ನಡೆದಿರುವುದು ತಮಗೆ ತಿಳಿದಿರಲಿಲ್ಲ ಎಂದು ನಿಖಿಲ್ ಸ್ಪಷ್ಟನೆ ನೀಡಿದ್ದಾರೆ. ಈ ಸಂಬಂಧದ ಸಿಸಿಟಿವಿ ದೃಶ್ಯಗಳು ಹಾಗೂ ಸಂಧಾನಕ್ಕೆ ಯತ್ನಿಸಲಾಗಿದೆ ಎನ್ನಲಾದ ಆಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಮೈಸೂರಿನ […] Source

ರಾಜ್ಯಕ್ಕೆ ಕೇಂದ್ರದ ಬಂಪರ್ ಗಿಫ್ಟ್: ಹುಬ್ಬಳ್ಳಿ ಮೂಲಕ ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ರಾಜ್ಯದ ರೈಲು ಪ್ರಯಾಣಿಕರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರು ಮತ್ತು ಮುಂಬೈ ನಡುವೆ ಮೊದಲ ವಂದೇ ಭಾರತ್ ಸ್ಲೀಪರ್ ರೈಲು ಪ್ರಕಟಿಸಿದ ಬೆನ್ನಲ್ಲೇ, ಹುಬ್ಬಳ್ಳಿ ಮಾರ್ಗವಾಗಿ ಸಂಚರಿಸಲಿರುವ ಮತ್ತೊಂದು ‘ವಂದೇ ಭಾರತ್ ಸ್ಲೀಪರ್’ ರೈಲನ್ನು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಇಂದು ಅಧಿಕೃತವಾಗಿ ಘೋಷಿಸಿದ್ದಾರೆ. ಇದರೊಂದಿಗೆ ಕರಾವಳಿ ಹಾಗೂ ಉತ್ತರ ಕರ್ನಾಟಕ ಭಾಗಕ್ಕೆ ರೈಲ್ವೆ ಸಂಪರ್ಕ ಮತ್ತಷ್ಟು ಬಲಗೊಳ್ಳಲಿದೆ. ಹುಬ್ಬಳ್ಳಿ ಮೂಲಕ ಎರಡನೇ ಬೆಂಗಳೂರು-ಮುಂಬೈ ಸ್ಲೀಪರ್ ರೈಲು ಬೆಂಗಳೂರು […] The post ರಾಜ್ಯಕ್ಕೆ ಕೇಂದ್ರದ ಬಂಪರ್ ಗಿಫ್ಟ್: ಹುಬ್ಬಳ್ಳಿ ಮೂಲಕ ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ಘೋಷಣೆ appeared first on ONLINE.