Filters

Channels
Topics
Other Filters

KEA ಪಿಜಿ ವೈದ್ಯಕೀಯ ಪ್ರವೇಶ! ಮೊದಲ ಸುತ್ತಿನ ಸೀಟು ಹಂಚಿಕೆ ವೇಳಾಪಟ್ಟಿ ಪ್ರಕಟ

ಯುಜಿ ವೈದ್ಯಕೀಯದ ವಿಶೇಷ ಸುತ್ತಿನ ಕೌನ್ಸೆಲಿಂಗ್ ವೇಳಾಪಟ್ಟಿ ಪ್ರಕಟವಾಗಿದೆ. ವೈದ್ಯಕೀಯ ಮತ್ತು ದಂತ ವೈದ್ಯಕೀಯ ಪದವಿ ಕೋರ್ಸ್‌ಗಳ ಉಳಿಕೆ ಸೀಟುಗಳ ಭರ್ತಿಗೆ ಕೆಇಎಯಿಂದ ವಿಶೇಷ ಸ್ಟ್ರೇ ವೇಕೆನ್ಸಿ ಸುತ್ತಿನ ಕೌನ್ಸೆಲಿಂಗ್ ನಡೆಸಲಿದೆ.

Scheme: ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಬಂಪರ್ ಆಫರ್, ಸ್ವಯಂ ಉದ್ಯೋಗ, ಗಂಗಾ ಕಲ್ಯಾಣ ಸೌಲಭ್ಯಕ್ಕೆ ಅರ್ಜಿ ಆಹ್ವಾನ!

ಮೈಸೂರಿನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ 2026-27ನೇ ಸಾಲಿನ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ನವೆಂಬರ್ 30ರೊಳಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ತನಿಖಾ ದಕ್ಷತೆಗೆ ಕೇಂದ್ರದ ಪ್ರಶಸ್ತಿ: ಕರ್ನಾಟಕದ 7 ಅಧಿಕಾರಿಗಳಿಗೆ ಮನ್ನಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್: 2026ನೇ ಸಾಲಿನ ಕೇಂದ್ರ ಗೃಹಮಂತ್ರಿಗಳ ದಕ್ಷತಾ ಪದಕಕ್ಕೆ ಕರ್ನಾಟಕದ ಏಳು ಪೊಲೀಸ್ ಹಾಗೂ ವಿಧಿವಿಜ್ಞಾನ ಅಧಿಕಾರಿಗಳು ಆಯ್ಕೆಯಾಗಿದ್ದಾರೆ. ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದ ತನಿಖೆ ನಡೆಸಿದ್ದ ಬೆಂಗಳೂರಿನ ಹಲಸೂರು ಗೇಟ್ ಸಂಚಾರ ಠಾಣೆಯ ಇನ್ಸ್‌ಪೆಕ್ಟರ್ ಶೋಭಾ ಎನ್. ಅವರಿಗೂ ಈ ಗೌರವ ಲಭಿಸಿದೆ. ತನಿಖಾ ವಿಭಾಗದಲ್ಲಿ ಶೋಭಾ ಎನ್. ಸೇರಿದಂತೆ ಬೆಳಗಾವಿಯ ಮಾಳಮಾರುತಿ ಠಾಣೆಯ ಇನ್ಸ್‌ಪೆಕ್ಟರ್ ಬಾವುದ್ದೀನ್ ರುಕ್ಮುದ್ದೀನ್ ಗಡೇಕರ್, ಬೆಂಗಳೂರಿನ ಪೊಲೀಸ್ ಪ್ರಧಾನ […] The post ತನಿಖಾ ದಕ್ಷತೆಗೆ ಕೇಂದ್ರದ ಪ್ರಶಸ್ತಿ: ಕರ್ನಾಟಕದ 7 ಅಧಿಕಾರಿಗಳಿಗೆ ಮನ್ನಣೆ appeared first on ONLINE.

ನ್ಯಾಯಾಲಯದಲ್ಲಿ ಸರಿಯಾದ ವಾದ ಮಂಡಿಸಬೇಕಿತ್ತು: ಮೀಸಲಾತಿ ವಿಚಾರವಾಗಿ ಕಾಂಗ್ರೆಸ್‌ಗೆ ಬಿ.ವೈ.ವಿಜಯೇಂದ್ರ ತಿರುಗೇಟು

ಹೊಸದಿಗಂತ ವರದಿ ದಾವಣಗೆರೆ: ಕಾಂಗ್ರೆಸ್ಸಿನವರಿಗೆ ಮಾನ, ಮರ್ಯಾದೆ ಇದ್ದಿದ್ದರೆ ನ್ಯಾಯಾಲಯದಲ್ಲಿ ಪರಿಶಿಷ್ಟರಿಗೆ ಹೆಚ್ಚಳ ಮಾಡಿದ್ದ ಮೀಸಲಾತಿಯ ಬಗ್ಗೆ ಸರಿಯಾದ ವಾದ ಮಂಡಿಸಬೇಕಿತ್ತು. ಮೀಸಲಾತಿ ಹೆಚ್ಚಳ ಕಾಯ್ದೆ ರದ್ಧುಪಡಿಸಿದ ನ್ಯಾಯಾಲಯದ ಕ್ರಮಕ್ಕೆ ನರೇಂದ್ರ ಮೋದಿ ಮತ್ತು ಟೀಂ ಕಾರಣವೆಂದು ಯಾವನು ಹೇಳಿದ? ಇವರಿಗೆ ಮಾನ ಮರ್ಯಾದೆ ಇದೆಯಾ? ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಾಂಗ್ರೆಸ್ಸಿನ ಮಾಜಿ ಸಂಸದ ವಿ.ಎಸ್.ಉಗ್ರಪ್ಪ ವಿರುದ್ಧ ಏಕವಚನದಲ್ಲೇ ಹರಿಹಾಯ್ದರು. ನಗರದ ಹಳೆ ಪ್ರವಾಸಿ ಮಂದಿರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಟ್ಟಾರೆ ಮೀಸಲಾತಿ ಶೇ.56ಕ್ಕೆ […] The post ನ್ಯಾಯಾಲಯದಲ್ಲಿ ಸರಿಯಾದ ವಾದ ಮಂಡಿಸಬೇಕಿತ್ತು: ಮೀಸಲಾತಿ ವಿಚಾರವಾಗಿ ಕಾಂಗ್ರೆಸ್‌ಗೆ ಬಿ.ವೈ.ವಿಜಯೇಂದ್ರ ತಿರುಗೇಟು appeared first on ONLINE.

ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತ, ಖಜಾನೆ ಖಾಲಿ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಹೊಸದಿಗಂತ ವರದಿ ಚಿತ್ರದುರ್ಗ: ರಾಜ್ಯ ಸರ್ಕಾರದಲ್ಲಿ ಆಡಳಿತ ಯಂತ್ರ ಸಂಪೂರ್ಣ ಹದಗೆಟ್ಟಿದ್ದು, ಸರ್ಕಾರದ ವೈಫಲ್ಯಗಳಿಂದಾಗಿ ಜನಸಾಮಾನ್ಯರು ಮತ್ತು ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಈ ರೀತಿಯ ಆಡಳಿತ ಮುಂದುವರೆದರೆ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಭವಿಷ್ಯ ನುಡಿದರು. ಚಿತ್ರದುರ್ಗ ನಗರಕ್ಕೆ ಶನಿವಾರ ಭೇಟಿ ನೀಡಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಖಜಾನೆ ಖಾಲಿಯಾಗಿದೆ. ಸಾರಿಗೆ ಇಲಾಖೆಯ ಬಸ್‌ಗಳನ್ನು ಓಡಿಸಲು ಡೀಸೆಲ್‌ಗೆ ಹಣವಿಲ್ಲದಂತಾಗಿದ್ದು, […] The post ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತ, ಖಜಾನೆ ಖಾಲಿ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ appeared first on ONLINE.

ಕೃಷಿ ಪದವಿ ಪಡೆದು ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳಿ: ಸಚಿವ ಕೆ.ಎಸ್. ಬಸವಂತಪ್ಪ ಸಲಹೆ

ದಾವಣಗೆರೆ : ಕೃಷಿ ಪದವಿ ಪಡೆಯುವ ವಿದ್ಯಾರ್ಥಿಗಳು ತಾವು ಕಲಿತ ಜ್ಞಾನವನ್ನು ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಬಳಸಿಕೊಳ್ಳಬೇಕು. ರೈತರು ಸಾಂಪ್ರದಾಯಿಕ ಕೃಷಿಯ ಜೊತೆಗೆ ಆಧುನಿಕ ತಂತ್ರಜ್ಞಾನ ಹಾಗೂ ವೈಜ್ಞಾನಿಕ ಪದ್ಧತಿಗಳನ್ನು ಅಳವಡಿಸಿಕೊಂಡು ಉತ್ತಮ ಗುಣಮಟ್ಟದ ಹಾಗೂ ಅಧಿಕ ಇಳುವರಿ ನೀಡುವ ಬೆಳೆಗಳನ್ನು ಬೆಳೆಯಬೇಕು ಎಂದು ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಮತ್ತು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಬಸವಂತಪ್ಪ ಸಲಹೆ ನೀಡಿದರು. ಶಿವಮೊಗ್ಗ ನಗರದ ನವಿಲೆಯ ಕೃಷಿ ಮಹಾವಿದ್ಯಾಲಯದ ಆವರಣದಲ್ಲಿ ಕೆಳದಿ ಶಿವಪ್ಪ [...]

2ನೇ ಮದುವೆಯಾದ ಜಮ್ಮು ಕಾಶ್ಮೀರ ಸಿಎಂ!: ಸೋಶಿಯಲ್ ಮೀಡಿಯಾದಲ್ಲಿ ಮದುವೆ ಫೋಟೋ ವೈರಲ್

ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ತಮ್ಮ ಜೀವನದಲ್ಲಿ ಹೊಸ ಅಧ್ಯಾಯ ಆರಂಭಿಸಿದ್ದಾರೆ. ಖ್ಯಾತ ಪತ್ರಕರ್ತೆ ನಿಧಿ ರಜ್ದಾನ್ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಇದು ಒಮರ್ ಅಬ್ದುಲ್ಲಾ ಅವರ ಎರಡನೇ ಮದುವೆಯಾಗಿದ್ದು, ಮದುವೆಯ ಸಂಭ್ರಮದ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ಮೂಲಕ ತಮ್ಮ ಸಂತಸವನ್ನು ಅಭಿಮಾನಿಗಳು ಹಾಗೂ ಬೆಂಬಲಿಗರೊಂದಿಗೆ ಹಂಚಿಕೊಂಡಿದ್ದಾರೆ. ‘ನಿನ್ನೆ ನನ್ನ ಜೀವನದಲ್ಲಿ ಹೊಸ ಬದುಕು ಆರಂಭವಾಗಿದೆ’ ಎಂಬ ಸಂದೇಶದೊಂದಿಗೆ ಅವರು ಮದುವೆಯ ವಿಚಾರವನ್ನು ಬಹಿರಂಗಪಡಿಸಿದ್ದಾರೆ ಎನ್ನಲಾಗಿದೆ. ಒಮರ್ ಅಬ್ದುಲ್ಲಾ ಮತ್ತು ನಿಧಿ […] Source

ಬಿಸಿಎಂ : ವಿವಿಧ ಸೌಲಭ್ಯಗಳ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ

ದಾವಣಗೆರೆ, ಅ. 31 : 2026-27ನೇ ಸಾಲಿನ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿ ಗಳು ಹಾಗೂ ಪ್ರವರ್ಗ-1 ರ ಅಲೆಮಾರಿ/ಅರೆ ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಂದ,ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ,ಅಲೆಮಾರಿ/ಅರೆ ಅಲೆಮಾರಿ ಜನಾಂಗದ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿವೇತನ,ಶುಲ್ಕ ವಿನಾಯಿತಿ,ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ನವೆಂಬರ್‌ 30 ರವರೆಗೆ ವಿಸ್ತರಿಸಲಾಗಿದೆ. ಅರ್ಜಿಗಳನ್ನು https://ssp.postmatric.karnataka.gov.in/  ಆನ್‌ಲೈನ್ ಮೂಲಕ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಂಬAಧಪಟ್ಟ [...]

ನ್ಯಾಯಯುತ ಕಬ್ಬಿನ ಬೆಲೆಗೆ ರೈತರ ಪಟ್ಟು: ಚಿಕ್ಕೋಡಿ–ಮಿರಜ್ ರಸ್ತೆಯಲ್ಲಿ ವಿನೂತನ ಪ್ರತಿಭಟನೆ

ಹೊಸದಿಗಂತ ವರದಿ ಬೆಳಗಾವಿ: ಕಬ್ಬಿಗೆ ಪ್ರತಿ ಟನ್‌ಗೆ 5,500 ರೂ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನೂರಾರು ರೈತರು ಚಿಕ್ಕೋಡಿ–ಮಿರಜ್ ಮುಖ್ಯ ರಸ್ತೆಯನ್ನು ತಡೆದು ಬೃಹತ್ ಪ್ರತಿಭಟನೆ ನಡೆಸಿದರು. ಮಾಂಜರಿ ಗ್ರಾಮದ ಬಳಿ ನಡೆದ ಈ ಹೋರಾಟದಲ್ಲಿ ರೈತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ನ್ಯಾಯಯುತ ಬೆಲೆ ಘೋಷಿಸುವವರೆಗೆ ಪ್ರತಿಭಟನೆ ಮುಂದುವರಿಸುವುದಾಗಿ ಪಟ್ಟು ಹಿಡಿದರು. ಬೆಳಗ್ಗೆಯಿಂದಲೇ ರಸ್ತೆಗಿಳಿದ ರೈತರು ಮಾಂಜರಿ, ಯಡೂರ, ಚಂದೂರ, ಇಂಗಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ರೈತರು ಮುಂಜಾನೆಯಿಂದಲೇ ಪ್ರತಿಭಟನೆಯಲ್ಲಿ […] The post ನ್ಯಾಯಯುತ ಕಬ್ಬಿನ ಬೆಲೆಗೆ ರೈತರ ಪಟ್ಟು: ಚಿಕ್ಕೋಡಿ–ಮಿರಜ್ ರಸ್ತೆಯಲ್ಲಿ ವಿನೂತನ ಪ್ರತಿಭಟನೆ appeared first on ONLINE.

ಬೆಂಗಳೂರಿನ ಪಂಚತಾರಾ ಹೋಟೆಲ್ ಸ್ವಿಮ್ಮಿಂಗ್ ಪೂಲ್‌ನಲ್ಲಿ ವಿದ್ಯುತ್ ಶಾಕ್‌ಗೆ ಇಬ್ಬರು ವಿದೇಶಿಗರು ಸಾವು!

ಬೆಂಗಳೂರು,ಅ,31,2026 (www.justkannada.in):  ನಗರದ ಹಲಸೂರು ಪ್ರದೇಶದಲ್ಲಿರುವ ಖಾಸಗಿ ಪಂಚತಾರಾ ಹೋಟೆಲ್‌ನ ಸ್ವಿಮ್ಮಿಂಗ್ ಪೂಲ್‌ನಲ್ಲಿ ವಿದ್ಯುತ್ ಶಾಕ್ ತಗುಲಿ ಇಬ್ಬರು ವಿದೇಶಿ ಪ್ರಜೆಗಳು ಮೃತಪಟ್ಟಿರುವ ಘಟನೆ ನಡೆದಿದೆ. ಹಲಸೂರಿನ ಕಾನ್ರಾಡ್ ಹೋಟೆಲ್‌ನ ಮೂರನೇ ಮಹಡಿಯಲ್ಲಿರುವ ಸ್ವಿಮ್ಮಿಂಗ್ ಪೂಲ್‌ನಲ್ಲಿ ನಿನ್ನೆ ಸಂಜೆ ಈ ದುರ್ಘಟನೆ ಸಂಭವಿಸಿದೆ. ಮೃತರನ್ನು ಸ್ಲೋವಾಕಿಯಾ ಮೂಲದ ಓರಿಯಾಟ್ (45) ಹಾಗೂ ಡಚ್ ಮೂಲದ ಅಲೆಕ್ಸಾಂಡರ್ ಮ್ಯಾಕ್ಸಿಲನ್ (59) ಎಂದು ಗುರುತಿಸಲಾಗಿದೆ. ಇಬ್ಬರೂ ಕಳೆದ ಕೆಲವು ದಿನಗಳಿಂದ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ದರು. ಸ್ವಿಮ್ಮಿಂಗ್ ಪೂಲ್‌ನಲ್ಲಿ ವಿದ್ಯುತ್ ಶಾಕ್ […]

ಅರ್ಹ ಎಲ್ಲ ಆಸ್ತಿ ಮಾಲೀಕರಿಗೂ ಇ-ಖಾತಾ ಸೌಲಭ್ಯ : ವಿತರಣಾ ಪ್ರಕ್ರಿಯೆ ಚುರುಕುಗೊಳಿಸಲು ಕ್ರಮ – ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ.

 ಮೈಸೂರು ಅ.31.2026 (www.justkannada.in): ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಆಯೋಜಿಸಲಾಗಿದ್ದ ಪ್ರಜಾಸೇವಾ ವಿಶೇಷ ಇ-ಖಾತಾ ವಿತರಣಾ ಆಂದೋಲನಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆತಿದ್ದು, ಅರ್ಹ ಎಲ್ಲ ಆಸ್ತಿ ಮಾಲೀಕರಿಗೂ ಇ-ಖಾತಾ ಸೌಲಭ್ಯ ತಲುಪಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು. ಮೈಸೂರು ಮಹಾನಗರ ಪಾಲಿಕೆ ಆವರಣದಲ್ಲಿ ಆಯೋಜಿಸಲಾಗಿದ್ದ ಪ್ರಜಾಸೇವಾ ವಿಶೇಷ ಇ-ಖಾತಾ ವಿತರಣಾ ಆಂದೋಲನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಾರ್ವಜನಿಕರಿಗೆ ಆಸ್ತಿ ದಾಖಲೆಗಳನ್ನು ಸುಲಭವಾಗಿ ಒದಗಿಸುವುದು ಹಾಗೂ ಇ-ಖಾತಾ ಪಡೆಯುವ ಪ್ರಕ್ರಿಯೆಯನ್ನು […]

ರೈತರಿಗೆ ಹಾಲಿನ ದರ ವಿಚಾರದಲ್ಲಿ ನಮ್ಮ ಸರ್ಕಾರ ಐತಿಹಾಸಿಕ ನಿರ್ಧಾರ, ಬಿಜೆಪಿಯಿಂದ ಕೇವಲ ರಾಜಕಾರಣ- ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ, ಅಕ್ಟೊಬರ್,31,2026 (www.justkannada.in): ಹಾಲಿನ ದರ ಏರಿಕೆ ವಿಚಾರದಲ್ಲಿ ಗ್ರಾಹಕರನ್ನು ಮುಂದಿಟ್ಟುಕೊಂಡು ಬಿಜೆಪಿ ರಾಜಕಾರಣ ಮಾಡುತ್ತಿದೆ. ನಮ್ಮ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್  ನೇತೃತ್ವದ ಸರ್ಕಾರ ಪ್ರತಿ ಲೀಟರ್ ಹಾಲಿಗೆ 8 ರೂ. ಹೆಚ್ಚಳ ಮಾಡಿ, ಅದರಲ್ಲಿ 7 ರೂ.ಗಳನ್ನು ರೈತರಿಗೆ ನೀಡುವ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಹಾಗಾದರೆ ಸರ್ಕಾರ ಅನ್ನದಾತರಿಗೆ ಸಹಾಯ ಮಾಡಬಾರದೇ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಪ್ರಶ್ನಿಸಿದರು. ಕೆಳದಿ ಶಿವಪ್ಪ […]

ಇಂದಿನಿಂದ ಈ ರಾಶಿಯವರ ಲಕ್ ಚೇಂಜ್ : ಬಂಪರ್ ಜಾಕ್ ಪಾಟ್, ಎಲ್ಲಾ ಕೆಲಸದಲ್ಲಿಯೂ ಜಯ

Jupiter Transit 2026: ಇಂದಿನಿಂದ ಈ ರಾಶಿಯವರ ಲಕ್ ಚೇಂಜ್ : ಬಂಪರ್ ಜಾಕ್ ಪಾಟ್, ಎಲ್ಲಾ ಕೆಲಸದಲ್ಲಿಯೂ ಜಯ. Jupiter Transit effect 2026 six lucky zodiac signs with huge money luck happiness and good fortune

ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ದಾವಣಗೆರೆ, ಅ. 31 : 2026-27ನೇ ಸಾಲಿನ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಉದ್ಯೋಗಿನಿ, ಚೇತನಾ, ಧನಶ್ರೀ, ಲಿಂಗತ್ವ ಅಲ್ಪ ಸಂಖ್ಯಾತರ  ಪುನರ್ವಸತಿ ಯೋಜನೆ ಹಾಗೂ ಮಾಜಿ ದೇವದಾಸಿ ಪುನರ್ವಸತಿ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ್ದ ಕೊನೆಯ ದಿನಾಂಕವನ್ನು ನವೆಂಬರ್ 30 ರವರೆಗೆ ವಿಸ್ತರಿಸಲಾಗಿದೆ. ಆಸಕ್ತ ಹಾಗೂ ಅರ್ಹ ಮಹಿಳಾ ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ https://sevasindhu.karnataka.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ . Read also : JOB NEWS|ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ [...]

JOB NEWS|ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ದಾವಣಗೆರೆ, ಅ.31 : ಸಿ.ಎಸ್.ಐ.ಆರ್-ಕೇಂದ್ರೀಯ ಅಹಾರ ತಾಂತ್ರಿಕ ಸಂಶೋಧನಾಲಯ, ಮೈಸೂರು ಇವರು ಐ.ಟಿ.ಐ ವಿದ್ಯಾರ್ಹತೆ ಹೊಂದಿರುವವರು  28 ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರ: Posts of Technician(1) [Fitter, Electronics Mechanic, Instrument Mechanic, Laboratory Assistant (Chemical Plant), COPA, Information & Communication Technology system Maintenance, Refrigeration & Air Conditioning Technician, Electrician, carpenter, Plumber, Sheet Metal worker, Turner Welder] ಸದರಿ ಹುದ್ದೆಗೆ ಆಸಕ್ತ ಅಭ್ಯರ್ಥಿಗಳು ವೆಬೆಸೈಟ್ https://cftri.res.in or https://recruitment.cftri.res.in  ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.  ಅರ್ಜಿ ಸಲ್ಲಿಸಲು [...]