Filters

Channels
Topics
Other Filters

ರಾಷ್ಟ್ರಮಟ್ಟದ ಅಥ್ಲೆಟಿಕ್ಸ್: ಚಿನ್ನ, ಬೆಳ್ಳಿ ಪದಕ ಮುಡಿಗೇರಿಸಿಕೊಂಡ ಮಲೆನಾಡಿನ ಪ್ರತಿಭೆ ಆಯುಷ್

ಹೊಸದಿಗಂತ ವರದಿ ಶಿವಮೊಗ್ಗ:  ಮಲೆನಾಡಿನ ಕ್ರೀಡಾ ಪ್ರತಿಭೆ ರಿಪ್ಪನ್ ಪೇಟೆಯ ಆಯುಷ್ ಎಸ್.ಆರ್. ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಮತ್ತು ಬೆಳ್ಳಿ ಪದಕಗಳನ್ನು ಗೆಲ್ಲುವ ಮೂಲಕ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ತಮಿಳುನಾಡಿನ ಚೆನ್ನೈನಲ್ಲಿ ನಡೆದ 41ನೇ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನ U-20 ವಿಭಾಗದಲ್ಲಿ ಆಯುಷ್ ಈ ಗಮನಾರ್ಹ ಸಾಧನೆ ಮಾಡಿದ್ದಾರೆ. 4×100 ಮೀಟರ್ ರಿಲೇ ಓಟದಲ್ಲಿ ತಂಡದ ಸದಸ್ಯರೊಂದಿಗೆ ಅತ್ಯುತ್ತಮ ಪ್ರದರ್ಶನ ನೀಡಿದ ಆಯುಷ್, ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕ ಗೆದ್ದಿದ್ದಾರೆ. ವೈಯಕ್ತಿಕ ವಿಭಾಗದ 200 […] The post ರಾಷ್ಟ್ರಮಟ್ಟದ ಅಥ್ಲೆಟಿಕ್ಸ್: ಚಿನ್ನ, ಬೆಳ್ಳಿ ಪದಕ ಮುಡಿಗೇರಿಸಿಕೊಂಡ ಮಲೆನಾಡಿನ ಪ್ರತಿಭೆ ಆಯುಷ್ appeared first on ONLINE.

ಕನ್ನಡ ಮಾಧ್ಯಮ ಶಾಲೆಗಳ ಸಬಲೀಕರಣಕ್ಕೆ ಸಮಗ್ರ ನೀತಿ ರೂಪಿಸಿ: ಸಿಎಂಗೆ ದಿನೇಶ್‌ ಗೂಳಿಗೌಡ ಮನವಿ

ಬೆಂಗಳೂರು: ಕನ್ನಡ ರಾಜ್ಯೋತ್ಸವದ ಅಂಗವಾಗಿ ರಾಜ್ಯದ ಕನ್ನಡ ಮಾಧ್ಯಮ ಸರ್ಕಾರಿ ಶಾಲೆಗಳ ಸಬಲೀಕರಣ ಹಾಗೂ 50, 75 ಮತ್ತು 100 ವರ್ಷಗಳ ಇತಿಹಾಸ ಹೊಂದಿರುವ ಸರ್ಕಾರಿ ಶಾಲೆಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಸಮಗ್ರ ಕಾರ್ಯಯೋಜನೆ ರೂಪಿಸುವಂತೆ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್.ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿಸಿದ್ದಾರೆ. ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಕುಸಿಯುತ್ತಿರುವುದು, ಶಿಕ್ಷಕರ ಕೊರತೆ ಹಾಗೂ ಮೂಲಸೌಕರ್ಯಗಳ […] The post ಕನ್ನಡ ಮಾಧ್ಯಮ ಶಾಲೆಗಳ ಸಬಲೀಕರಣಕ್ಕೆ ಸಮಗ್ರ ನೀತಿ ರೂಪಿಸಿ: ಸಿಎಂಗೆ ದಿನೇಶ್‌ ಗೂಳಿಗೌಡ ಮನವಿ appeared first on nudikarnataka.

ಬೆಲೇಕೇರಿ ಬಂದರು ವ್ಯಾಪ್ತಿಯಲ್ಲಿ ದುರಂತ: ಚಿಪ್ಪುಮೀನು ಹಿಡಿಯಲು ಹೋಗಿದ್ದ ಮೀನುಗಾರ ಜಲಸಮಾಧಿ

ಹೊಸದಿಗಂತ ವರದಿ ಅಂಕೋಲಾ: ನೀಲಿಕಲ್ಲು ಜಾತಿಯ ಚಿಪ್ಪುಮೀನು ತೆಗೆಯಲು ಸಮುದ್ರಕ್ಕೆ ಇಳಿದ ಮೀನುಗಾರ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ತಾಲೂಕಿನ ಬೆಲೇಕೇರಿ ಮೀನುಗಾರಿಕೆ ಬಂದರು ವ್ಯಾಪ್ತಿಯಲ್ಲಿ ಸಂಭವಿಸಿದೆ. ಬೆಲೇಕೇರಿ ನಿವಾಸಿ ಮಾರುತಿ ಸುಬ್ರಾಯ ಬಾನಾವಳಿಕರ(65) ಮೃತ ದುರ್ದೈವಿಯಾಗಿದ್ದು ನೀಲಿಕಲ್ಲು ತೆಗೆಯಲೆಂದು ಸಮುದ್ರದ ಹಿನ್ನೀರಿನ ಪ್ರದೇಶದಲ್ಲಿ ನೀರಿಗೆ ಇಳಿದಾಗ ನೀರಿನಲ್ಲಿ ಮುಳುಗಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಇದನ್ನೂ ಓದಿ; ಅಂಕೋಲಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. The post ಬೆಲೇಕೇರಿ ಬಂದರು ವ್ಯಾಪ್ತಿಯಲ್ಲಿ ದುರಂತ: ಚಿಪ್ಪುಮೀನು ಹಿಡಿಯಲು ಹೋಗಿದ್ದ ಮೀನುಗಾರ ಜಲಸಮಾಧಿ appeared first on ONLINE.

ಕೆರೆಯಲ್ಲಿ ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ದುರ್ಮ*ರಣ

ಹೊಸದಿಗಂತ ವರದಿ ಪಾಂಡವಪುರ: ಕೆರೆಯಲ್ಲಿ ಈಜಾಡಲು ಹೋಗಿ ಇಬ್ಬರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಕೆರೆತೊಣ್ಣೂರಿನ ಹಿನ್ನೀರಿನಲ್ಲಿ ಬುಧವಾರ ನಡೆದಿದೆ. ತಾಲೂಕಿನ ಹುಲ್ಕೇರೆ ಕೊಪ್ಪಲು (ದಾಸೇಗೌಡನಕೊಪ್ಪಲು) ಗ್ರಾಮದ ನಿವಾಸಿ ಸ್ವಾಮಿಗೌಡ ಅವರ ಪುತ್ರ ಯಶವಂತ್ (18) ಹಾಗೂ ಕೆ.ಆರ್.ಪೇಟೆ ತಾಲೂಕಿನ ಎಂ.ಹೊಸೂರು ಗ್ರಾಮದ ಕೃಷ್ಣೇಗೌಡ ಅವರ ಪುತ್ರ ರಾಜು (18) ಎಂಬುವವರು ಮೃತಪಟ್ಟವರು. ಈ ಇಬ್ಬರು ಚಿನಕುರಳಿ ಎಸ್ ಟಿಜಿ ಕಾಲೇಜಿನ ಪದವಿ ತರಗತಿಯಲ್ಲಿ ವಿದ್ಯಾಭ್ಯಾಸ ನಡೆಸುತ್ತಿದ್ದರು. ಘಟನೆ ವಿವರ: ಬುಧವಾರ ಸುಮಾರು 10ಕ್ಕೂ […] The post ಕೆರೆಯಲ್ಲಿ ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ದುರ್ಮ*ರಣ appeared first on ONLINE.

ಕಾರ್ಮಿಕರ ಸುರಕ್ಷತೆಗೆ ಆದ್ಯತೆ ನೀಡಿ, ನಿಯಮ ಉಲ್ಲಂಘಿಸಿದರೆ ಕ್ರಮ: ಬೋಟ್‌ ಮಾಲಿಕರಿಗೆ ಸಚಿವ ಬಸವಂತಪ್ಪ ಎಚ್ಚರಿಕೆ

ಹೊಸದಿಗಂತ ವರದಿ ಕಾರವಾರ: ಮೀನುಗಾರಿಕೆ ಬೋಟುಗಳಲ್ಲಿ ಕೆಲಸ ಮಾಡುವ ಕಾರ್ಮಿಕರ ಸುರಕ್ಷತೆಗೆ ಬೋಟುಗಳ ಮಾಲಿಕರು ಆದ್ಯತೆ ನೀಡಬೇಕಿದ್ದು ಕಾರ್ಮಿಕರ ಹಿತರಕ್ಷಣೆ ವಿಷಯದಲ್ಲಿ ನಿಯಮಗಳನ್ನು ಉಲ್ಲಂಘಿಸುವ ಬೋಟು ಮಾಲಿಕರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮೀನುಗಾರಿಕೆ ಸಚಿವ ಕೆ.ಎಸ್.ಬಸವಂತಪ್ಪ ಹೇಳಿದರು. ತದಡಿಯಲ್ಲಿ ವಿಷಗಾಳಿ ಸೇವಿಸಿ ಮೃತಪಟ್ಟ ಮೂವರು ಬೋಟ್ ಕಾರ್ಮಿಕರ ಕುಟುಂಬಗಳಿಗೆ ಸರ್ಕಾರದಿಂದ ತಲಾ 10 ಲಕ್ಷ ರೂಪಾಯಿಗಳ ಪರಿಹಾರ ಚೆಕ್ ವಿತರಿಸಿದ ಅವರು ತದಡಿ ಬಂದರು ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ದುಡಿದು ಕುಟುಂಬ […] The post ಕಾರ್ಮಿಕರ ಸುರಕ್ಷತೆಗೆ ಆದ್ಯತೆ ನೀಡಿ, ನಿಯಮ ಉಲ್ಲಂಘಿಸಿದರೆ ಕ್ರಮ: ಬೋಟ್‌ ಮಾಲಿಕರಿಗೆ ಸಚಿವ ಬಸವಂತಪ್ಪ ಎಚ್ಚರಿಕೆ appeared first on ONLINE.

ಬೈಕ್-ಟ್ರ್ಯಾಕ್ಟರ್ ನಡುವೆ ಭೀಕರ ಅಪಘಾತ: ಸವಾರ ಸಾ*ವು

ಹೊಸದಿಗಂತ ವರದಿ ಹಲಗೂರು: ಬೈಕ್ ಮತ್ತು ಟ್ರ್ಯಾಕ್ಟರ್ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿರುವ ಘಟನೆ ಚಿಕ್ಕಲಚಗೆರೆ ಗ್ರಾಮದ ಬಳಿ ನಡೆದಿದೆ. ಮಳವಳ್ಳಿ ತಾಲ್ಲೂಕಿನ ತಗಡಯ್ಯನ ದೊಡ್ಡಿ ಗ್ರಾಮದ ಬಸವರಾಜು ಅವರ ಪುತ್ರ ಬಿ.ಚೇತನ್ (26) ಮೃತಪಟ್ಟ ಯುವಕ. ಚೇತನ್ ಖಾಸಗಿ ಕಾರ್ಯನಿಮಿತ್ತ ಹಲಗೂರಿಗೆ ಬಂದು ಮಂಗಳವಾರ ರಾತ್ರಿ ಬೈಕ್‌ನಲ್ಲಿ ತಮ್ಮ ಸ್ವಗ್ರಾಮಕ್ಕೆ ತೆರಳುತ್ತಿದ್ದರು. ಈ ವೇಳೆ ಚಿಕ್ಕಲಚಗೆರೆ ಗ್ರಾಮದ ಬಳಿ ಮುತ್ತತ್ತಿ ಕಡೆಯಿಂದ ಬಂದ ಟ್ರ್ಯಾಕ್ಟರ್ ಮತ್ತು […] The post ಬೈಕ್-ಟ್ರ್ಯಾಕ್ಟರ್ ನಡುವೆ ಭೀಕರ ಅಪಘಾತ: ಸವಾರ ಸಾ*ವು appeared first on ONLINE.

ಪರಿಷತ್ ಚುನಾವಣೆ: ಎಸ್.ವಿ. ಸಂಕನೂರ ಹ್ಯಾಟ್ರಿಕ್ ಗೆಲುವು, ಹಾವೇರಿಯಲ್ಲಿ ಬಿಜೆಪಿ ಭರ್ಜರಿ ವಿಜಯೋತ್ಸವ

ಹೊಸದಿಗಂತ ವರದಿ ಹಾವೇರಿ: ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಮತಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಹ್ಯಾಟ್ರಿಕ್ ಗೆಲುವು ದಾಖಲಿಸಿದ ಹಿನ್ನೆಲೆಯಲ್ಲಿ ಹಾವೇರಿ ನಗರ ಘಟಕದ ಕಾರ್ಯಕರ್ತರು ಬುಧವಾರ ನಗರದ ಜೆ.ಪಿ. ವೃತ್ತದಲ್ಲಿ ಸಿಹಿ ಹಂಚಿ, ಪಟಾಕಿ ಸಿಡಿಸುವ ಮೂಲಕ ವಿಜಯೋತ್ಸವ ಆಚರಿಸಿದರು. ಬಿಜೆಪಿ ಶಹರ ಘಟಕದ ಅಧ್ಯಕ್ಷ ಕಿರಣ್ ಕೊಳ್ಳಿ ಮಾತನಾಡಿ, ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಹ್ಯಾಟ್ರಿಕ್ ಗೆಲುವು, ಪಕ್ಷದ ಸಂಘಟಿತ ಹೋರಾಟ ಹಾಗೂ […] The post ಪರಿಷತ್ ಚುನಾವಣೆ: ಎಸ್.ವಿ. ಸಂಕನೂರ ಹ್ಯಾಟ್ರಿಕ್ ಗೆಲುವು, ಹಾವೇರಿಯಲ್ಲಿ ಬಿಜೆಪಿ ಭರ್ಜರಿ ವಿಜಯೋತ್ಸವ appeared first on ONLINE.

ಬಿಜೆಪಿ ವಿಜಯೋತ್ಸವ: ಕಾಂಗ್ರೆಸ್ ದುರಾಡಳಿತಕ್ಕೆ ಮತದಾರರೇ ಉತ್ತರ ನೀಡಿದ್ದಾರೆ ಎಂದ ತಿಪ್ಪಾರೆಡ್ಡಿ

ಹೊಸದಿಗಂತ ವರದಿ ಚಿತ್ರದುರ್ಗ: ವಿಧಾನ ಪರಿಷತ್ ಚುನಾವಣೆಯ ಈ ಭರ್ಜರಿ ಗೆಲುವು ಎನ್‌ಡಿಎ ಒಕ್ಕೂಟದ ಒಗ್ಗಟ್ಟು ಮತ್ತು ನಾಯಕರ ಸಾಮೂಹಿಕ ನೇತೃತ್ವಕ್ಕೆ ಸಿಕ್ಕಿದ ಮನ್ನಣೆಯಾಗಿದೆ. ಜೊತೆಗೆ ಪ್ರಸ್ತುತ ರಾಜ್ಯ ಸರ್ಕಾರದ ಆಡಳಿತ ವೈಫಲ್ಯಗಳ ವಿರುದ್ಧ ಪದವೀಧರ ಹಾಗೂ ಶಿಕ್ಷಕ ಮತದಾರರು ನೀಡಿರುವ ಎಚ್ಚರಿಕೆಯ ಸಂದೇಶ ಹಾಗೂ ಪೇಪರ್ ಬ್ಯಾಲೆಟ್‌ನಲ್ಲೂ ಜನಪರ ಒಲವು ಇದೆ ಎಂಬುದಕ್ಕೆ ಈ ಚುನಾವಣಾ ಫಲಿತಾಂಶವೇ ಸಾಕ್ಷಿಯಾಗಿದೆ ಎಂದು ಮಾಜಿ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ ತಿಳಿಸಿದರು.  ವಿಧಾನ ಪರಿಷತ್ ಚುನಾವಣೆಯಲ್ಲಿ ನಾಲ್ಕು ಸ್ಥಾನಗಳಲ್ಲಿ ಎನ್.ಡಿ.ಎ. ಮೃತ್ರಿ […] The post ಬಿಜೆಪಿ ವಿಜಯೋತ್ಸವ: ಕಾಂಗ್ರೆಸ್ ದುರಾಡಳಿತಕ್ಕೆ ಮತದಾರರೇ ಉತ್ತರ ನೀಡಿದ್ದಾರೆ ಎಂದ ತಿಪ್ಪಾರೆಡ್ಡಿ appeared first on ONLINE.

ಅರಮನೆ, ಅಂಬಾರಿ ವಿಚಾರದಲ್ಲಿ ಕ್ಷಮೆ ಕೇಳಲ್ಲ; ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ

ಮೈಸೂರು: ಮೈಸೂರು ಅರಮನೆ ಮತ್ತು ಅಂಬಾರಿ ವಿಚಾರವಾಗಿ ತಾವು ನೀಡಿರುವ ಹೇಳಿಕೆಗೆ ಈಗಲೂ ಬದ್ಧವಾಗಿದ್ದು, ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ತಾವು ಯಾವುದೇ ತಪ್ಪು ಹೇಳಿಕೆ ನೀಡಿಲ್ಲ. ತಮ್ಮ ಮಾತುಗಳನ್ನು ಕೆಲವರು ತಪ್ಪಾಗಿ ಅರ್ಥೈಸಿಕೊಂಡು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ಮೈಸೂರು ಅರಮನೆ ಸರ್ಕಾರದ ಆಸ್ತಿ ಎಂಬ ವಿಚಾರವನ್ನು ಈಗಾಗಲೇ ಸ್ಪಷ್ಟಪಡಿಸಿದ್ದೇನೆ. ಅರಮನೆ ಸ್ವಾಧೀನ ಕಾಯ್ದೆಯ ಪ್ರಕಾರವೇ ಮಾತನಾಡಿದ್ದು, ತಮ್ಮ ಹೇಳಿಕೆಯಲ್ಲಿ ಯಾವುದೇ […] Source

ನಾಲ್ಕು ಕ್ಷೇತ್ರಗಳಲ್ಲಿ NDA ಭರ್ಜರಿ ಗೆಲುವು: ಬೆಳಗಾವಿಯಲ್ಲಿ ಬಿಜೆಪಿ ವಿಜಯೋತ್ಸವ

ಹೊಸದಿಗಂತ ವರದಿ ಬೆಳಗಾವಿ: ರಾಜ್ಯ ವಿಧಾನಪರಿಷತ್ತಿನ ಎರಡು ಪದವೀಧರ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಬುಧವಾರ ವಿಜಯೋತ್ಸವ ಆಚರಿಸಿದರು. ಬೆಳಗಾವಿ ನಗರದ ಖಾಸಗಿ ಹೋಟೆಲ್ ನಲ್ಲಿ ಪತ್ರಿಕಾಗೋಷ್ಠಿಯ ಬಳಿಕ ಮಾಜಿ ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ ಅವರ ನೇತೃತ್ವದಲ್ಲಿ ಸಂಭ್ರಮಾಚರಣೆಯಲ್ಲಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರ ಸೇರಿ ಪಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚುವ ಮೂಲಕ ಎನ್‌ಡಿಎ ಅಭ್ಯರ್ಥಿಗಳ […] The post ನಾಲ್ಕು ಕ್ಷೇತ್ರಗಳಲ್ಲಿ NDA ಭರ್ಜರಿ ಗೆಲುವು: ಬೆಳಗಾವಿಯಲ್ಲಿ ಬಿಜೆಪಿ ವಿಜಯೋತ್ಸವ appeared first on ONLINE.

Job Alert: ನೀವು ನಿರುದ್ಯೋಗಿಗಳೇ? ಹಾಗಾದರೆ ಇನ್ನೆರೆಡು ದಿನದಲ್ಲಿ ಈ ಸಂದರ್ಶನಕ್ಕೆ ಅಟೆಂಡ್‌ ಆದ್ರೆ ಕೆಲಸ ಸಿಗೋದು ಪಕ್ಕಾ!

ಮೈಸೂರು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಅಕ್ಟೋಬರ್ 30ರಂದು ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಬೆಳಿಗ್ಗೆ 10 ಗಂಟೆಗೆ ಆರಂಭವಾಗುವ ಮೇಳದಲ್ಲಿ HDFC Life ಮತ್ತು ಪ್ಯಾಲೆಸ್ ಸೋಡಾ ಸಂಸ್ಥೆಗಳ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ನಡೆಯಲಿದೆ.

ಕುಶಾಲನಗರದಲ್ಲಿ ವೇಶ್ಯಾವಾಟಿಕೆ ಜಾಲ ಪತ್ತೆ: ಓರ್ವನ ಬಂಧನ, ಮಹಿಳೆಯ ರಕ್ಷಣೆ

ಹೊಸದಿಗಂತ ವರದಿ ಮಡಿಕೇರಿ: ಕುಶಾಲನಗರದ ಬೈಪಾಸ್ ರಸ್ತೆಯಲ್ಲಿರುವ ಲಾಡ್ಜ್‌ ಒಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಓರ್ವನನ್ನು ಬಂಧಿಸಲಾಗಿದ್ದು, ಮಹಿಳೆಯನ್ನು ರಕ್ಷಿಸಿ ಸಾಂತ್ವನ ಕೇಂದ್ರಕ್ಕೆ ಕಳುಹಿಸಲಾಗಿದೆ. ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಕೇರಳ ರಾಜ್ಯದ ಆರೋಪಿ ನಿಜೇಶ್.ಕೆ ಎಂಬಾತನ ವಿರುದ್ಧ ಕುಶಾಲನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕುಶಾಲನಗರ ಬೈಪಾಸ್ ರಸ್ತೆಯ ರಾಯಲ್ ಲಾಡ್ಜ್’ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವುದಾಗಿ ದೊರೆತ ಮಾಹಿತಿ ಅನ್ವಯ ಪೊಲೀಸರು ದಾಳಿ ನಡೆಸಿ ಮಹಿಳೆಯನ್ನು ರಕ್ಷಿಸಿದ್ದು, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ ಎಂದು ಜಿಲ್ಲಾ ಪೊಲೀಸ್ […] The post ಕುಶಾಲನಗರದಲ್ಲಿ ವೇಶ್ಯಾವಾಟಿಕೆ ಜಾಲ ಪತ್ತೆ: ಓರ್ವನ ಬಂಧನ, ಮಹಿಳೆಯ ರಕ್ಷಣೆ appeared first on ONLINE.

ಮತದಾರರ ಪಟ್ಟಿ ಪರಿಷ್ಕರಣೆ ಕಾನೂನುಬದ್ಧ: ಕಾಂಗ್ರೆಸ್ ಆರೋಪದಲ್ಲಿ ಹುರುಳಿಲ್ಲ ಎಂದ ಅಶ್ವತ್ಥನಾರಾಯಣ

ಹೊಸದಿಗಂತ ವರದಿ ಬೆಳಗಾವಿ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಕಾನೂನುಬದ್ಧವಾಗಿ ನಡೆದಿದ್ದು, ಕಾಂಗ್ರೆಸ್ ಮಾಡುತ್ತಿರುವ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ ಎಂದು ಶಾಸಕ ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು. ಬುಧವಾರ ಬೆಳಗಾವಿ ನಗರದ ಖಾಸಗಿ ಹೊಟೇಲ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದಿನ ಮತದಾರರ ಪಟ್ಟಿಯಲ್ಲಿನ ಲೋಪಗಳನ್ನು ಸರಿಪಡಿಸುವ ಉದ್ದೇಶದಿಂದ ಎಸ್ಐಆರ್ ಪ್ರಕ್ರಿಯೆ ಕೈಗೊಳ್ಳಲಾಗಿದೆ. ಪ್ರತಿಯೊಬ್ಬ ಮತದಾರರ ಮ್ಯಾಪಿಂಗ್ ಮಾಡಿ, ನಿಯಮಾನುಸಾರ ಗಣತಿ ನಮೂನೆಗಳನ್ನು ನೀಡಿ ಮಾಹಿತಿ ಸಂಗ್ರಹಿಸಲಾಗಿದೆ ಎಂದರು. ಇವಿಎಂ ಮತ್ತು ಎಸ್ಐಆರ್ ಸೇರಿದಂತೆ […] The post ಮತದಾರರ ಪಟ್ಟಿ ಪರಿಷ್ಕರಣೆ ಕಾನೂನುಬದ್ಧ: ಕಾಂಗ್ರೆಸ್ ಆರೋಪದಲ್ಲಿ ಹುರುಳಿಲ್ಲ ಎಂದ ಅಶ್ವತ್ಥನಾರಾಯಣ appeared first on ONLINE.

ಶಾಲೆಗಳಲ್ಲಿ ನ.1 ಭಾನುವಾರದಂದೇ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ- ಸಚಿವ ಮಧು ಬಂಗಾರಪ್ಪ ಸೂಚನೆ

ಬೆಂಗಳೂರು,ಅಕ್ಟೋಬರ್,28,2026 (www.justkannada.in): ಭಾನುವಾರವಾಗಿರುವ ನವೆಂಬರ್‌ 1 ರಂದೇ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ನಿಯಮಾನುಸಾರ ಕಡ್ಡಾಯವಾಗಿ ಹಾಗೂ ಗೌರವ ಪೂರ್ವಕವಾಗಿ ರಾಜ್ಯೋತ್ಸವ ಆಚರಿಸುವಂತೆ ಸೂಚನೆ ನೀಡಿದ್ದೇವೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತ ವಿಕಾಶ್ ಕಿಶೋರ್ ಸುರಳ್ಕರ್ ಅವರು ಸುತ್ತೋಲೆ ಹೊರಡಿಸಿದ್ದು, 2026-27ನೇ ಸಾಲಿನ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನ 1/11/2026ರ ಭಾನುವಾರದಂದು ರಾಜ್ಯದ […]

ಅ. 31ರಂದು ಮುಖ್ಯಮಂತ್ರಿಗೆ ಕಪ್ಪು ಬಾವುಟ ಪ್ರದರ್ಶನ

ಮಂಡ್ಯ: ಏಕರೂಪ ಸಮಾನ ಶಿಕ್ಷಣ ಜಾರಿಗಾಗಿ ಒತ್ತಾಯಿಸಿ ಅ. 31ರಂದು ಮಂಡ್ಯಕ್ಕೆ ಭೇಟಿ ನೀಡುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕಪ್ಪು ಬಾವುಟ ಪ್ರದರ್ಶನ ಮಾಡಲಾಗುವುದು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಇಂಡುವಾಳು ಚಂದ್ರಶೇಖರ್ ತಿಳಿಸಿದರು. ಸುದ್ದಿಗೋಷ್ಠಿ ಮಾತನಾಡಿದ ಅವರು, ಏಕರೂಪ ಶಿಕ್ಷಣ ಜಾರಿಗೆ ಒತ್ತಾಯಿಸಿ ಕಳೆದ 2025ರ ಡಿಸೆಂಬರ್‌ನಲ್ಲಿ ಮೂರು ದಿನಗಳ ಉಪವಾಸ ಸತ್ಯಾಗ್ರಹ ನಡೆಸಿದ್ದೇ ಏಪ್ರಿಲ್ 11 ರಿಂದ ಜೂ. 6ರವರೆಗೆ ರೈತ ಸಂಘದ ಹಾಗೂ ಶಾಲಾಭಿವೃದ್ದಿ ಸಮಿತಿಗಳ ವತಿಯಿಂದ ಜಿಲ್ಲೆಯಲ್ಲಿ 1500 ಕಿ.ಮೀ. […] The post ಅ. 31ರಂದು ಮುಖ್ಯಮಂತ್ರಿಗೆ ಕಪ್ಪು ಬಾವುಟ ಪ್ರದರ್ಶನ appeared first on nudikarnataka.