Filters

Channels
Topics
Other Filters

ಮೈಸೂರು ರಾಜಮನೆತನದ ಪರ ಪ್ರತಿಭಟನೆ ಕೈಬಿಡಲು ಪ್ರಮೋದಾದೇವಿ ಒಡೆಯರ್ ಮನವಿ

ಮೈಸೂರು, ಅಕ್ಟೋಬರ್,28,2026 (www.justkannada.in):  ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಮೈಸೂರು ರಾಜಮನೆತನದ ಪರವಾಗಿ ವಿವಿಧ ಸಂಘಟನೆಗಳು ಹಾಗೂ ಸಾರ್ವಜನಿಕರು ಹಮ್ಮಿಕೊಳ್ಳಲು ಉದ್ದೇಶಿಸಿರುವ ಪ್ರತಿಭಟನೆಗಳನ್ನು ಕೈಬಿಡುವಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಮನವಿ ಮಾಡಿದ್ದಾರೆ. ಈ ಸಂಬಂಧ ಅರಮನೆ ಕಚೇರಿಯಿಂದ ಪತ್ರಿಕಾ ಪ್ರಕಟಣೆ ಹೊರಡಿಸಲಾಗಿದ್ದು, ಪ್ರತಿಭಟನೆ ಹಮ್ಮಿಕೊಳ್ಳಲು ಮುಂದಾಗಿದ್ದ ಕೆಲವು ಸಂಘಟಕರಿಗೆ ಪ್ರತಿಭಟನೆ ಕೈಬಿಡುವಂತೆ ತಿಳಿಸಲಾಗಿದೆ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ. ಇತ್ತೀಚಿನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ರಾಜಮನೆತನದ ಬಗ್ಗೆ ವಿವಿಧ ವಲಯಗಳ ಜನರು ವ್ಯಕ್ತಪಡಿಸುತ್ತಿರುವ ಕಾಳಜಿ, ಬೆಂಬಲ ಹಾಗೂ ಭಾವನೆಗಳನ್ನು ಪ್ರಮೋದಾದೇವಿ […]

ರಾಜ್ಯದ ರೈತ ಉತ್ಪಾದಕ ಸಂಸ್ಥೆಗಳಿಗೆ ‘ಕಾರ್ಪೊರೇಟ್ ಟಚ್’: ಅನ್ನದಾತರ ಆದಾಯ ಹೆಚ್ಚಿಸಲು ವಿಶಿಷ್ಟ ಯೋಜನೆ

ಬೆಂಗಳೂರು: ರಾಜ್ಯದ ರೈತ ಉತ್ಪಾದಕ ಸಂಸ್ಥೆಗಳನ್ನು (ಎಫ್‌ಪಿಒ) ಆರ್ಥಿಕವಾಗಿ ಬಲಪಡಿಸಲು ಮತ್ತು ರೈತರ ಆದಾಯವನ್ನು ಹೆಚ್ಚಿಸುವ ಮಹತ್ವಾಕಾಂಕ್ಷೆಯೊಂದಿಗೆ, ತೋಟಗಾರಿಕಾ ಇಲಾಖೆ ಬೆಂಬಲಿತ ‘ರೈತ ಉತ್ಪಾದಕ ಸಂಸ್ಥೆಗಳ ಉತ್ಕೃಷ್ಟತಾ ಕೇಂದ್ರ’ (ಸಿಒಇ – ಎಫ್‌ಪಿಒ) ಹಾಗೂ ‘ನ್ಯಾಷನಲ್ ಎಂಟರ್‌ಪ್ರೆನ್ಯೂರ್‌ಶಿಪ್ ನೆಟ್‌ವರ್ಕ್’ (ಎನ್‌ಇಎನ್‌) ಜಂಟಿಯಾಗಿ ಕರ್ನಾಟಕದಲ್ಲಿ ‘ವಾಧ್ವಾನಿ ಎಫ್‌ಪಿಒ ಎಂಟರ್‌ಪ್ರೆನ್ಯೂರ್‌ಶಿಪ್ ಪ್ರೋಗ್ರಾಂ’ ಅನ್ನು ಆರಂಭಿಸಿವೆ. ರೈತರು ಕೇವಲ ಬೆಳೆಗಾರರಾಗಿ ಉಳಿಯದೆ, ಯಶಸ್ವಿ ಉದ್ಯಮಿಗಳಾಗಿ ಬೆಳೆಯಬೇಕು ಎಂಬ ದಿಸೆಯಲ್ಲಿ ಈ ಕಾರ್ಯಕ್ರಮವನ್ನು ರೂಪಿಸಲಾಗಿದೆ. ಮೊದಲ ಹಂತವಾಗಿ ರಾಜ್ಯದ 27 ಎಫ್‌ಪಿಒಗಳನ್ನು ಈ […] Source

Yuvanidhi Plus: 1 ಲಕ್ಷ ಬೆಲೆಯ ಕೋರ್ಸ್‌ಗಳು ಪೂರಾ ಉಚಿತ, ಸಾವಿರಾರು ಉದ್ಯೋಗದ ಬಾಗಿಲು ತೆರೆಯಲು ಈ ತರಬೇತಿಯೇ ಕೀಲಿ ಕೈ!

ಯುವನಿಧಿ ಯೋಜನೆಯ ಫಲಾನುಭವಿಗಳಿಗೆ ಹುಬ್ಬಳ್ಳಿ ಜಿಟಿಟಿಸಿಯಲ್ಲಿ ಉಚಿತ ಉದ್ಯೋಗಾಧಾರಿತ ಕೌಶಲ್ಯ ತರಬೇತಿ ನೀಡಲಾಗುತ್ತಿದೆ. ನವೆಂಬರ್ 2ರಿಂದ ತರಬೇತಿ ಆರಂಭವಾಗಲಿದ್ದು, ಆಸಕ್ತರು ಅಕ್ಟೋಬರ್ 30ರೊಳಗೆ 0836-2333159 ಸಂಖ್ಯೆಗೆ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದು

ರಾಷ್ಟ್ರಮಟ್ಟದ ಲಾನ್ ಟೆನಿಸ್ ಪಂದ್ಯಾವಳಿಗೆ ಈಶ್ವರಮ್ಮ ಶಾಲೆಯ ಇಬ್ಬರು ವಿದ್ಯಾರ್ಥಿಗಳ ಆಯ್ಕೆ

ದಾವಣಗೆರೆ : ನಗರದ ಪಿ.ಜೆ. ಬಡಾವಣೆಯ ಈಶ್ವರಮ್ಮ ಹೈಯರ್ ಪ್ರೈಮರಿ ಮತ್ತು ಹೈಸ್ಕೂಲ್‌ನ 10ನೇ ತರಗತಿಯ ವಿದ್ಯಾರ್ಥಿಗಳಾದ ತರುಣ್ ಹೆಚ್. ಹಾಗೂ ಸುಜನ್ ಎಸ್. ಅವರು 2026-27ನೇ ಸಾಲಿನ 70ನೇ ರಾಷ್ಟ್ರಮಟ್ಟದ 17 ವರ್ಷದೊಳಗಿನ ಬಾಲಕರ ಲಾನ್ ಟೆನಿಸ್ ಪಂದ್ಯಾವಳಿಗೆ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ. ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಆಯೋಜಿಸಲಾಗಿರುವ ಈ ರಾಷ್ಟ್ರಮಟ್ಟದ ಕ್ರೀಡಾಕೂಟವು ಅಕ್ಟೋಬರ್ 31ರಿಂದ ನವೆಂಬರ್ 5ರವರೆಗೆ ದೆಹಲಿಯ ತ್ಯಾಗರಾಜ್ ಕ್ರೀಡಾಂಗಣದಲ್ಲಿ ನಡೆಯಲಿದೆ. Read also : ಬ್ಯಾಕ್‌ಲಾಗ್ ಹುದ್ದೆಗಳ [...]

ಹಾಸನಾಂಬೆ ದರ್ಶನೋತ್ಸವಕ್ಕೆ ಕ್ಷಣಗಣನೆ: ನಾಳೆ ಮಧ್ಯಾಹ್ನ 12.30ಕ್ಕೆ ಗರ್ಭಗುಡಿಯ ಬಾಗಿಲು ಓಪನ್

ಪ್ರಸಿದ್ಧ ಹಾಸನಾಂಬ ದೇವಿ ಜಾತ್ರಾ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಭಕ್ತರಿಗೆ ಸುಗಮ ದರ್ಶನ ಕಲ್ಪಿಸಲು ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಗುರುವಾರ ಹಾಸನಾಂಬ ದೇವಿಯ ಗರ್ಭಗುಡಿ ಬಾಗಿಲು ತೆರೆಯಲಿದ್ದು, ಈ ಬಾರಿ ಗೋಲ್ಡ್ ಪಾಸ್ ಹೊಂದಿರುವ ಒಬ್ಬರಿಗೆ ಮಾತ್ರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ತಿಳಿಸಿದ್ದಾರೆ. ಹಾಸನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಾಸನಾಂಬ ಜಾತ್ರಾ ಮಹೋತ್ಸವವನ್ನು ನಾಡಹಬ್ಬದ ರೀತಿಯಲ್ಲಿ ಆಚರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಕಳೆದ ವರ್ಷದಂತೆ ಈ ಬಾರಿಯೂ ವಿವಿಧ […] Source

ಪ್ರಜಾಸೇವಾ ವಿಶೇಷ ಇ-ಖಾತಾ ಆಂದೋಲನಕ್ಕೆ ಉತ್ತಮ ಸ್ಪಂದನೆ; ಒಟ್ಟು 708 ಅರ್ಜಿಗಳ ಸ್ವೀಕೃತಿ

ಮೈಸೂರು, ಅಕ್ಟೋಬರ್, 28,2026 (www.justkannada.in):  ಮೈಸೂರು ಮಹಾನಗರ ಪಾಲಿಕೆಯ ವತಿಯಿಂದ ಸಾರ್ವಜನಿಕರಿಗೆ ಇ-ಖಾತಾ ಸೇವೆಯನ್ನು ತ್ವರಿತವಾಗಿ ಒದಗಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾದ ಪ್ರಜಾಸೇವಾ ವಿಶೇಷ ಇ-ಖಾತಾ ಆಂದೋಲನಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ನಗರದ 9 ವಲಯಗಳಿಂದ ಒಟ್ಟು 708 ಅರ್ಜಿಗಳು ಸ್ವೀಕೃತವಾಗಿವೆ. ವಲಯವಾರು ಸ್ವೀಕೃತ ಅರ್ಜಿಗಳ ವಿವರ: ವಲಯ 1 – 55 ಅರ್ಜಿಗಳು ವಲಯ 2 – 124 ಅರ್ಜಿಗಳು ವಲಯ 3 – 144 ಅರ್ಜಿಗಳು ವಲಯ 4 – 44 ಅರ್ಜಿಗಳು ವಲಯ […]

ಮೈಸೂರು ದಸರಾ ಯಶಸ್ಸಿನಲ್ಲಿ ಸ್ವಚ್ಛತಾ ಸೇನಾನಿಗಳ ಸೇವೆ ಅನನ್ಯ- ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ

ಮೈಸೂರು, ಅಕ್ಟೋಬರ್,28,2026 (www.justkannada.in): ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಸಂದರ್ಭದಲ್ಲಿ ನಗರಕ್ಕೆ ಆಗಮಿಸಿದ ಸುಮಾರು 10 ಲಕ್ಷಕ್ಕೂ ಅಧಿಕ ಪ್ರವಾಸಿಗರಿಗೆ ಸ್ವಚ್ಛ ಹಾಗೂ ಸುಂದರ ವಾತಾವರಣವನ್ನು ಕಲ್ಪಿಸುವಲ್ಲಿ ಪೌರಕಾರ್ಮಿಕರು, ಒಳಚರಂಡಿ (ಯುಜಿಡಿ) ಕಾರ್ಮಿಕರು ಹಾಗೂ ವಾಹನ ಚಾಲಕರ ಸೇವೆ ಅತ್ಯಂತ ಮಹತ್ವದ್ದಾಗಿದೆ ಎಂದು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು. ಮೈಸೂರು ನಗರದ ರಾಜೇಂದ್ರ ಕಲಾಮಂದಿರದಲ್ಲಿ ಇಂದು ದಸರಾ ಮಹೋತ್ಸವದ ಸಂದರ್ಭದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಸ್ವಚ್ಛತಾ ಸೇನಾನಿಗಳಿಗಾಗಿ ಆಯೋಜಿಸಿದ್ದ ಅಭಿನಂದನಾ ಸಮಾರಂಭ ಹಾಗೂ ಭೋಜನಕೂಟವನ್ನು […]

ಪರಿಷತ್ ಚುನಾವಣೆ ಫಲಿತಾಂಶ: ಜನರ ಸಂದೇಶದ ಕೂಲಂಕುಷ ಅಧ್ಯಯನ: ಸಿಎಂ ಡಿ ಕೆ ಶಿವಕುಮಾರ್

ಪರಿಷತ್ ಚುನಾವಣೆಯಲ್ಲಿ ಮತದಾರರು ಕೊಟ್ಟಿರುವ ಸಂದೇಶವನ್ನು ಕೂಲಂಕುಷ ಅಧ್ಯಯನ ಮಾಡಿ ಸರಿಪಡಿಸಿಕೊಳ್ಳುತ್ತೇವೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ನಿರೀಕ್ಷಿಸಿರಲಿಲ್ಲ “ವಿಧಾನ ಪರಿಷತ್ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರಗಳ ಚುನಾವಣೆಯಲ್ಲಿ ಮತದಾರರು ಕೊಟ್ಟಿರುವ ತೀರ್ಮಾನವನ್ನು ಗೌರವದಿಂದ ಸ್ವೀಕಾರ ಮಾಡುತ್ತೇವೆ. ನಮ್ಮ ಪಕ್ಷಕ್ಕೆ ಎರಡು ಸ್ಥಾನಗಳು ಬರುವ ನಿರೀಕ್ಷೆಯಿತ್ತು. ಅದಾಗಿಲ್ಲ. ನಮ್ಮ ಪಕ್ಷ ಸೋತಿದ್ದರೂ ಮತಗಳು ಚೆನ್ನಾಗಿಯೇ ಬಂದಿವೆ. ಬೆಂಗಳೂರು […] Source

ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು : ಸಿಎಂ ಡಿಕೆ ಶಿವಕುಮಾರ್  ಪ್ರತಿಕ್ರಿಯೆ ಏನು?

ಬೆಂಗಳೂರು, ಅಕ್ಟೋಬರ್,28,2026 (www.justkannada.in):  ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ವಿಚಾರಕ್ಕೆ ಸಂಬಂಧಿಸಿದಂತೆ  ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಸಿಎಂ ಡಿಕೆ ಶಿವಕುಮಾರ್, ಮತದಾರರ ತೀರ್ಪನ್ನು ಗೌರವದಿಂದ ಸ್ವೀಕಾರ ಮಾಡುತ್ತೇವೆ. ಪಕ್ಷದ ಅಭ್ಯರ್ಥಿಗಳ ಪರ ಹೆಚ್ಚು ಮತ ಬಂದಿದೆ. ಒಂದು ಸ್ಥಾನದಲ್ಲಿ ಗೆಲುವು ನಿರೀಕ್ಷೆ ಇತ್ತು, ಆದರೂ ಜನರು ನೀಡಿರುವ ಸಂದೇಶವನ್ನು ನಾವು ಸ್ವೀಕರಿಸುತ್ತೇವೆ. ಪರಿಷತ್ ಚುನಾವಣೆ ಸೋಲಿನ ಪರಾಮರ್ಶೆ ಮಾಡುತ್ತೇವೆ ಎಂದರು. ವಿಧಾನಪರಿಷತ್ ಚುನಾವಣಾ ಫಲಿತಾಂಶ ಮುಂದಿನ ವಿಧಾನಸಭೆ ಚುನಾವಣೆಗೆ […]

ಶಿವಮೊಗ್ಗ : ಶಿವಮೊಗ್ಗದಲ್ಲಿ ನಡೆದ ಎಲ್ಲಾ ಪ್ರಮುಖ ಸುದ್ದಿಗಳು ನಿಮ್ಮ ಇ-ಪೇಪರ್​ನಲ್ಲಿ

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ : ಗೋಕರ್ಣದ ತದಡಿ ಬಂದರಿನಲ್ಲಿ ದುರಂತ: ಬೋಟ್ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಮೂವರು ಕಾರ್ಮಿಕರು ಸಾವು ಮೀನುಗಾರಿಕೆ ಮುಗಿಸಿ ಬಂದ ಬೋಟ್ ... ಕ್ಲಿಕ್ ಮಾಡಿ

ಶಿವಮೊಗ್ಗ : ಶಿವಮೊಗ್ಗದಲ್ಲಿ ವಿವಿಧ ವೆರೈಟಿಗಳ ಅಡಿಕೆಗಳ ರೇಟು ಎಷ್ಟಿದೆ ಇವತ್ತು ? 

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ : ಶಿವಮೊಗ್ಗದ ಎಪಿಎಂಸಿ ಮಾರುಕಟ್ಟೆಯ ಅಡಿಕೆ ದರ ಈಗ ತಾನೇ ಬಿಡುಗಡೆಯಾಗಿದೆ. ಕಳೆದ ಬಾರಿಯ ದರಕ್ಕೆ ಹೋಲಿಸಿದರೆ ಹೊಸ ರಾಶಿ ... ಕ್ಲಿಕ್ ಮಾಡಿ

ವಿಶ್ವ ಶೂಟಿಂಗ್ ಚಾಂಪಿಯನ್‌ಶಿಪ್‌ಗೆ ಹುಬ್ಬಳ್ಳಿಯ ಐಶ್ವರ್ಯ ಆಯ್ಕೆ

ಹೊಸದಿಗಂತ ವರದಿ ಹುಬ್ಬಳ್ಳಿ: ಇಲ್ಲಿಯ ಹುಬ್ಬಳ್ಳಿ ಶೂಟಿಂಗ್ ಅಕಾಡೆಮಿಯ ಪ್ರತಿಭೆ ಐಶ್ವರ್ಯ ಬಾಲೆಹೊಸೂರ ಅವರು ನ. 1ರಿಂದ 14ರ ವರೆಗೆ ಕತಾರ್‌ನ ದೋಹಾದಲ್ಲಿ ನಡೆಯಲಿರುವ ಐಎಸ್‌ಎಸ್‌ಎ- ವಿಶ್ವ ಶೂಟಿಂಗ್ ಚಾಂಪಿಯನ್‌ಶಿಪ್‌ಗೆ ಆಯ್ಕೆಯಾಗಿದ್ದಾರೆ. ಐಶ್ವರ್ಯ ಅವರು ಭಾರತವನ್ನು ಪ್ರತಿನಿಽಸುತ್ತಿದ್ದು, 50 ಮೀಟರ್ ಫ್ರೀ ಪಿಸ್ತೂಲ್ ವಿಭಾಗದಲ್ಲಿ ಸ್ಪರ್ಧಿಸಲಿದ್ದಾರೆ. ಈ ಹಿಂದೆ ಜರ್ಮನಿಯಲ್ಲಿ ನಡೆದ ಜೂನಿಯರ್ ವರ್ಲ್ಡ್ ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕ ಗೆದ್ದ ಸಾಧನೆ ಮಾಡಿರುವ ಇವರು, ರಾಜ್ಯ, ರಾಷ್ಟ್ರ ಹಾಗೂ ಪ್ರತಿಷ್ಠಿತ ದಸರಾ ಕ್ರೀಡಾಕೂಟಗಳಲ್ಲಿ ಅನೇಕ ಪದಕಗಳನ್ನು […] The post ವಿಶ್ವ ಶೂಟಿಂಗ್ ಚಾಂಪಿಯನ್‌ಶಿಪ್‌ಗೆ ಹುಬ್ಬಳ್ಳಿಯ ಐಶ್ವರ್ಯ ಆಯ್ಕೆ appeared first on ONLINE.

Job Fair: ನಿರುದ್ಯೋಗಿಗಳಿಗೆ ಬಂಪರ್ ಕೊಡುಗೆ, ಚಿಕ್ಕಮಗಳೂರಿನಲ್ಲಿ ನಾಳೆಯೇ ಬಿಗ್ ಜಾಬ್ ಮೇಳ!

ಚಿಕ್ಕಮಗಳೂರಿನಲ್ಲಿ ಅಕ್ಟೋಬರ್ 29ರಂದು ವಿವಿಧ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ ಆಯೋಜಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ನವೆಂಬರ್ 15ಕ್ಕೆ ಬೆಂಗಳೂರಿಗೆ ಪ್ರಧಾನಿ ಮೋದಿ: ಪಿಂಕ್ ಲೈನ್ ಮೆಟ್ರೋ ಲೋಕಾರ್ಪಣೆಗೆ ದಿನಾಂಕ ಫಿಕ್ಸ್!

ಬಹುನಿರೀಕ್ಷಿತ ಪಿಂಕ್ ಲೈನ್ ಮೆಟ್ರೋ ಮಾರ್ಗದ ಉದ್ಘಾಟನೆಗೆ ದಿನಾಂಕ ನಿಗದಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 15ರಂದು ಬೆಂಗಳೂರಿಗೆ ಆಗಮಿಸಿ ಪಿಂಕ್ ಮೆಟ್ರೋ ರೈಲು ಮಾರ್ಗವನ್ನು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ನವೆಂಬರ್ 15ರಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಲಿದ್ದು, ಪಿಂಕ್ ಮೆಟ್ರೋ ಮಾರ್ಗದ ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ಮಾಹಿತಿ ನೀಡಿದರು. ಇದೇ ವೇಳೆ ರಾಜ್ಯಕ್ಕೆ ಬರ ಪರಿಹಾರ ನಿಧಿ ಬಿಡುಗಡೆ ಸೇರಿದಂತೆ ವಿವಿಧ […] Source

ನನ್ನ ಹೇಳಿಕೆಗೆ ಈಗಲೂ ಬದ್ಧ: ಕ್ಷಮೆ ಕೇಳುವ ಪ್ರಮೇಯವೇ ಇಲ್ಲ- ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು,ಅಕ್ಟೋಬರ್,28,2026 (www.justkannada.in): ಮೈಸೂರು ಅರಮನೆ ಸರ್ಕಾರದ ಆಸ್ತಿ. ನಾನು ನನ್ನ ಹೇಳಿಕೆಗೆ ಈಗಲೂ ಬದ್ಧನಾಗಿದ್ದೇನೆ. ಕ್ಷಮೆ ಕೇಳುವ ಪ್ರಮೇಯವೇ ಇಲ್ಲ ಎಂದು ಹೇಳುವ ಮೂಲಕ ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ  ತಮ್ಮ ಹೇಳಿಕೆ ಸಮರ್ಥಿಸಿಕೊಂಡಿದ್ದಾರೆ. ಮೈಸೂರಿನಲ್ಲಿ ಇಂದು ಮಾತನಾಡಿದ ಸಚಿವ ಯತೀಂದ್ರ ಸಿದ್ದರಾಮಯ್ಯ, ಈ ಕುರಿತು ನಾನು ವಿಚಾರವನ್ನು ಸ್ಪಷ್ಟಪಡಿಸಿದ್ದೇನೆ. ಅದನ್ನೇ ಕೆಲವರು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ. ಈ ವಿಚಾರದಲ್ಲಿ ನಾನು ಯಾವುದೇ ತಪ್ಪೆಸಗಿಲ್ಲ.  ರಾಜಮನೆತನದವರ ಜೊತೆ ಮುಖ್ಯಮಂತ್ರಿಗಳೇ ಮಾತನಾಡುತ್ತೇನೆ ಎಂದು ಹೇಳಿದ್ದಾರೆ. ಹಾಗಾಗಿ ನಾನು ಹೋಗಿ ಮಾತನಾಡುವ […]