Filters

Channels
Topics
Other Filters

ಮಾಹಿತಿ ಹಕ್ಕು ಅರ್ಜಿ ಸಲ್ಲಿಕೆ ಇನ್ಮುಂದೆ ಮತ್ತಷ್ಟು ಸುಲಭ :’ಸಕಾಲ’ ಸೇವೆಗೆ ಭೌತಿಕ ಆರ್‌ಟಿಐ ಅರ್ಜಿಗಳ ಸೇರ್ಪಡೆ,ಗ್ರಾಮ ಒನ್‌ನಲ್ಲೂ ಲಭ್ಯ

 ​ಬೆಂಗಳೂರು, ಅ. 18  :   ನಾಗರಿಕರಿಗೆ ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯನ್ನು ಇನ್ನಷ್ಟು ಸುಲಭವಾಗಿ ಬಳಸಲು ಹಾಗೂ ವ್ಯವಸ್ಥೆಯಲ್ಲಿ ಹೆಚ್ಚಿನ ಪಾರದರ್ಶಕತೆ ತರಲು ಕರ್ನಾಟಕ ಸರ್ಕಾರವು ಮಾನ್ಯ ಮುಖ್ಯಮಂತ್ರಿಯವರ ಅನುಮೋದನೆಯೊಂದಿಗೆ ಎರಡು ಪ್ರಮುಖ ಹಾಗೂ ನೂತನ ನಿರ್ಧಾರಗಳನ್ನು ಕೈಗೊಂಡಿದೆ. ಭೌತಿಕ ಆರ್‌ಟಿಐ ಅರ್ಜಿಗಳ ದಾಖಲಾತಿ ಈಗ ‘ಸಕಾಲ’ ಸೇವೆ : ​ಅಂಚೆ ಅಥವಾ ಖುದ್ದಾಗಿ ಸಲ್ಲಿಸುವ ಭೌತಿಕ (ಕಾಗದದ ರೂಪದ) ಆರ್‌ಟಿಐ ಅರ್ಜಿಗಳನ್ನು ಸ್ವೀಕರಿಸಿದ ಸಾರ್ವಜನಿಕ ಪ್ರಾಧಿಕಾರವು 2 ದಿನಗಳ ಒಳಗಾಗಿ ಆರ್‌ಟಿಐ ಆನ್‌ಲೈನ್ ಪೋರ್ಟಲ್‌ನಲ್ಲಿ ಕಡ್ಡಾಯವಾಗಿ [...]

ಹಿಂದೂ ದೇವಸ್ಥಾನದ ಗೋಡೆ ಮೇಲೆ ಶಿಲುಬೆ, ಮಸೀದಿ ಚಿತ್ರ ಪತ್ತೆ: ಇಬ್ಬರ ವಿರುದ್ಧ FIR

ಮೈಸೂರು, ಅಕ್ಟೋಬರ್ 18: ಮೈಸೂರಿನಲ್ಲಿ ದಸರಾ ಸಂಭ್ರಮ ಮನೆ ಮಾಡಿದ್ದು, ವಿವಿಧ ಕ್ರೀಡೆಗಳು ಹಾಗೂ ರಸಮಂಜರಿ ಕಾರ್ಯಕ್ರಮಗಳು ನಡೆಯುತ್ತಿವೆ. ಈ ಸಂಭ್ರಮದ ದಸರಾ ಮಧ್ಯೆ ಮೈಸೂರಿನಲ್ಲಿ ಹಿಂದೂ ದೇವಸ್ಥಾನದ ಗೋಡೆ ಮೇಲೆ ಶಿಲುಬೆ, ಮಸೀದಿ ಚಿತ್ರಗಳನ್ನು ಬಿಡಿಸಿರುವ ಘಟನೆ ವಿವಾದ ಎಬ್ಬಿಸಿದೆ. ಘಟನೆಯ ವಿವರ ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಎಡತೊರೆ ಗ್ರಾಮದಲ್ಲಿರುವ ಐತಿಹಾಸಿಕ ಅರ್ಕೇಶ್ವರ ದೇಗುಲ ಆವರಣದ ಗೋಡೆಯ ಮೇಲೆ ಕೆಂಪು ಬಣ್ಣದಲ್ಲಿ ಶಿಲುಬೆ ಹಾಗೂ ಹಸಿರು ಬಣ್ಣದಲ್ಲಿ ಮಸೀದಿ ಚಿತ್ರವನ್ನು ಬಿಡಿಸಲಾಗಿದೆ. ಇದನ್ನು ಕಂಡ […] Source

ಮೈಸೂರು ದಸರಾ ಯೋಗಾಸನ ಸ್ಪರ್ಧೆ: ದಾವಣಗೆರೆಯ ಅಕ್ಷರ ಎ ಎನ್. ದ್ವಿತೀಯ ಬಹುಮಾನ – ಬೆಳ್ಳಿ ಪದಕ

ದಾವಣಗೆರೆ : ನಾಡಹಬ್ಬ ಮೈಸೂರು ದಸರಾ – 2026ರ ಪ್ರಯುಕ್ತ ಮೈಸೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ‘ಯೋಗ ದಸರಾ’ ಯೋಗಾಸನ ಸ್ಪರ್ಧೆಯಲ್ಲಿ ದಾವಣಗೆರೆಯ ಅಷ್ಟಾಂಗ ವಿನ್ಯಾಸ ಇಂಟರ್ನ್ಯಾಷನಲ್ ಯೋಗ ಅಕಾಡೆಮಿಯ ವಿದ್ಯಾರ್ಥಿನಿ ಕುಮಾರಿ ಅಕ್ಷರ ಎನ್. ಅತ್ಯುತ್ತಮ ಪ್ರದರ್ಶನ ನೀಡಿ ದ್ವಿತೀಯ ಬಹುಮಾನ (ಸಿಲ್ವರ್ ಮೆಡಲ್) ಗಳಿಸಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ​ರಾಜ್ಯದ ಹಲವಾರು ಜಿಲ್ಲೆಗಳಿಂದ ಹಾಗೂ ವಿವಿಧ ನಗರಗಳಿಂದ ಆಗಮಿಸಿದ್ದ  ಅಸಂಖ್ಯಾತ ಯೋಗ ಕ್ರೀಡಾಪಟುಗಳ ನಡುವೆ ನಡೆದ ಕಿರಿಯರ ವಿಭಾಗದ ಯೋಗಾಸನ ಸ್ಪರ್ಧೆಯಲ್ಲಿ ಕುಮಾರಿ ಅಕ್ಷರ [...]

ರಸ್ತೆ ಗುಂಡಿ ತಂದಿಟ್ಟ ಆಪತ್ತು: ಕಾರು-ಬಸ್ ನಡುವೆ ಮುಖಾಮುಖಿ ಡಿಕ್ಕಿ, ಮಗು ಸೇರಿ ಒಂದೇ ಕುಟುಂಬದ ಐವರು ದುರ್ಮ*ರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಹಬ್ಬದ ದಿನಗಳಲ್ಲೇ ಭೀಕರ ದುರಂತವೊಂದು ಸಂಭವಿಸಿದೆ. ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಪಂಢರಪುರ-ಖಾಮಗಾಂವ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಮತ್ತು ರಾಜ್ಯ ಸಾರಿಗೆ (ST) ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಪುಟ್ಟ ಮಗು ಸೇರಿದಂತೆ ಒಂದೇ ಕುಟುಂಬದ ಐವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ರಸ್ತೆ ಗುಂಡಿಯೇ ಯಮಸ್ವರೂಪವಾಯಿತು ವೇಗವಾಗಿ ಬರುತ್ತಿದ್ದ ಸ್ವಿಫ್ಟ್ ಕಾರಿನ ಚಾಲಕನಿಗೆ ರಸ್ತೆಯಲ್ಲಿದ್ದ ದೊಡ್ಡ ಗುಂಡಿಯೊಂದು ದಿಢೀರನೆ ಎದುರಾಗಿದೆ. ಗುಂಡಿ ತಪ್ಪಿಸಲು ಹೋದಾಗ ನಿಯಂತ್ರಣ ತಪ್ಪಿದ ಕಾರು, ಎದುರಿನಿಂದ ಬರುತ್ತಿದ್ದ ಸಾರಿಗೆ ಬಸ್‌ಗೆ […] The post ರಸ್ತೆ ಗುಂಡಿ ತಂದಿಟ್ಟ ಆಪತ್ತು: ಕಾರು-ಬಸ್ ನಡುವೆ ಮುಖಾಮುಖಿ ಡಿಕ್ಕಿ, ಮಗು ಸೇರಿ ಒಂದೇ ಕುಟುಂಬದ ಐವರು ದುರ್ಮ*ರಣ appeared first on ONLINE.

ನಾಡಿನೆಲ್ಲಡೆ ಆಯುಧ ಪೂಜೆ ಸಡಗರ: ಮೈಸೂರಿನಲ್ಲಿ ಗಗನಕ್ಕೇರಿದ ಹೂವು, ಬೂದುಗುಂಬಳಕಾಯಿ ಬೆಲೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ನಾಡಹಬ್ಬ ದಸರಾ ಸಂಭ್ರಮದ ನಡುವೆಯೇ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಆಯುಧ ಪೂಜೆ ಹಬ್ಬದ ಕಳೆ ಗರಿಗೆದರಿದೆ. ಭಾನುವಾರ ನಗರದ ಪ್ರಮುಖ ಮಾರುಕಟ್ಟೆಗಳು ಹಾಗೂ ರಸ್ತೆ ಬದಿಯ ತಾತ್ಕಾಲಿಕ ಅಂಗಡಿಗಳಲ್ಲಿ ಸಾರ್ವಜನಿಕರ ಖರೀದಿ ಜೋರಾಗಿದೆ. ಹಬ್ಬಕ್ಕೆ ಬೇಕಾದ ಅಗತ್ಯ ಪೂಜಾ ಸಾಮಗ್ರಿಗಳ ಖರೀದಿಗೆ ಜನಜಂಗುಳಿ ಕಂಡುಬರುತ್ತಿದ್ದು, ವ್ಯಾಪಾರಸ್ಥರ ಮುಖದಲ್ಲಿ ಹರ್ಷ ಮೂಡಿಸಿದೆ. ಬೂದುಗುಂಬಳಕಾಯಿಗೆ ಭಾರೀ ಡಿಮ್ಯಾಂಡ್ ಆಯುಧ ಪೂಜೆಯ ದಿನದಂದು ವಾಹನಗಳು, ಕಚೇರಿಗಳು ಹಾಗೂ ಯಂತ್ರೋಪಕರಣಗಳಿಗೆ ಪೂಜೆ ಸಲ್ಲಿಸಿ, ಕೆಟ್ಟ ದೃಷ್ಟಿ ನಿವಾರಣೆಗಾಗಿ ಬೂದುಗುಂಬಳಕಾಯಿ […] The post ನಾಡಿನೆಲ್ಲಡೆ ಆಯುಧ ಪೂಜೆ ಸಡಗರ: ಮೈಸೂರಿನಲ್ಲಿ ಗಗನಕ್ಕೇರಿದ ಹೂವು, ಬೂದುಗುಂಬಳಕಾಯಿ ಬೆಲೆ appeared first on ONLINE.

ವಿಜಯಪುರ: ಹೊಲದಲ್ಲಿ ಬೆಳೆದಿದ್ದ 1 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ, ಆರೋಪಿ ಅರೆಸ್ಟ್

ಹೊಸದಿಗಂತ ವರದಿ ವಿಜಯಪುರ: ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ದಿಂಡವಾರ ಗ್ರಾಮದ ಹೊಲವೊಂದರಲ್ಲಿ ಬೆಳೆಯಲಾಗಿದ್ದ 1 ಕೋಟಿ ರೂ.ಗೂ ಅಧಿಕ ಮೌಲ್ಯದ 200 ಕೆಜಿಗೂ ಹೆಚ್ಚಿನ ಗಾಂಜಾ ಜಪ್ತಿ ಮಾಡಿಕೊಳ್ಳಲಾಗಿದ್ದು, ಆರೋಪಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಲ್ಲಿನ ಶಿವಶಂಕರ ಶರಣಪ್ಪ ಜೀರ್ ಬಂಧಿತ ಆರೋಪಿಯಾಗಿದ್ದು, ಈ ಆರೋಪಿ ತನ್ನ ಹೊಲದಲ್ಲಿ ತೊಗರಿ ಬೆಳೆ ಬಿತ್ತನೆ ಮಾಡಿ ಅದರ ಮಧ್ಯದಲ್ಲಿ 500 ಕ್ಕೂ ಹೆಚ್ಚು ಗಾಂಜಾ ಗಿಡಗಳನ್ನು ಬೆಳೆದಿರುವ ಮಾಹಿತಿ […] The post ವಿಜಯಪುರ: ಹೊಲದಲ್ಲಿ ಬೆಳೆದಿದ್ದ 1 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ, ಆರೋಪಿ ಅರೆಸ್ಟ್ appeared first on ONLINE.

ನೈಸ್ ರಸ್ತೆಯಲ್ಲಿ ಭೀಕರ ಅಪಘಾತ: ಧಗಧಗನೆ ಹೊತ್ತಿ ಉರಿದ ಕೆಮಿಕಲ್ ಟ್ಯಾಂಕರ್

ಬೆಂಗಳೂರು: ಜೆನ್ ಕಂಪನಿಗೆ ಸೇರಿದ ಕೆಮಿಕಲ್ ಟ್ಯಾಂಕರ್ ವೊಂದು ಕಾರಿಗೆ ಟಚ್ ಆಗಿ ಪಲ್ಟಿಯಾಗಿ ಬಿದ್ದ ಪರಿಣಾಮ ಕೆಮಿಕಲ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿರುವ ಘಟನೆ ಬೆಂಗಳೂರಿನ ನೈಸ್ ರಸ್ತೆಯಲ್ಲಿ ನಡೆದಿದೆ. ಘಟನೆ ಹೇಗೆ ನಡೆಯಿತು? ಕನಕಪುರ ರಸ್ತೆಯ ಟೋಲ್ ಗೇಟ್ ಬಳಿ ಕೆಮಿಕಲ್ ಟ್ಯಾಂಕರ್ ಪಲ್ಟಿಯಾಗಿದ್ದು, ಧಗಧಗನೆ ಬೆಂಕಿ ಹೊತ್ತಿ ಉರಿದಿದೆ. ಜೆನ್ ಕೆಮಿಕಲ್ ಟ್ಯಾಂಕರ್ ಚೆನ್ನೈನಿಂದ ಮುಂಬೈಗೆ ತೆರಳುತ್ತಿದ್ದ ವೇಳೆ ಕನಕಪುರ ಟೋಲ್ ಗೇಟ್ ಬಳಿ ಬರುತ್ತಿದ್ದಂತೆ ಕಾರಿಗೆ ಟ್ಯಾಂಕರ್ […] Source

ಬೆಂಗಳೂರಿನ ನೈಸ್ ರಸ್ತೆಯಲ್ಲಿ ಅಗ್ನಿ ಅವಘಡ: ಬಾನೆತ್ತರಕ್ಕೆ ಚಿಮ್ಮಿದ ಬೆಂಕಿ, ಪ್ರಯಾಣಿಕರ ಪರದಾಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಬೆಂಗಳೂರಿನ ನೈಸ್ ರಸ್ತೆಯಲ್ಲಿ ಭಾನುವಾರ ಭೀಕರ ಅಗ್ನಿ ಅವಘಡವೊಂದು ಸಂಭವಿಸಿದ್ದು, ಡೀಸೆಲ್​​ ಟ್ಯಾಂಕರ್ ಪಲ್ಟಿಯಾಗಿ ಹೊತ್ತಿ ಉರಿದಿದೆ. ಕನಕಪುರ ರಸ್ತೆ ಟೋಲ್‌ನಿಂದ ಅಂಜನಾಪುರ ಕಡೆಗೆ ಚಲಿಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆ ಬಾನೆತ್ತರಕ್ಕೆ ಚಿಮ್ಮುತ್ತಿದೆ. ಘಟನಾ ಸ್ಥಳಕ್ಕೆ ತಲಘಟ್ಟಪುರ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ತಕ್ಷಣವೇ ಧಾವಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಆದರೆ, ಬೆಂಕಿಯ ತೀವ್ರತೆ ಹೆಚ್ಚಾಗಿರುವುದರಿಂದ ಕಳೆದ ಒಂದೂವರೆ ಗಂಟೆಯಿಂದಲೂ ನಿಯಂತ್ರಣಕ್ಕೆ ಬರುತ್ತಿಲ್ಲ. ಇದರಿಂದಾಗಿ ಇಡೀ ಪ್ರದೇಶದಲ್ಲಿ […] The post ಬೆಂಗಳೂರಿನ ನೈಸ್ ರಸ್ತೆಯಲ್ಲಿ ಅಗ್ನಿ ಅವಘಡ: ಬಾನೆತ್ತರಕ್ಕೆ ಚಿಮ್ಮಿದ ಬೆಂಕಿ, ಪ್ರಯಾಣಿಕರ ಪರದಾಟ appeared first on ONLINE.

ದಸರಾ ಅಂಗಳದಲ್ಲಿ ಕಂಬಳದ ಕಹಳೆ: ಮೈಸೂರಿನಲ್ಲಿ ಕರಾವಳಿಯ ಸಂಸ್ಕೃತಿಯ ಅನಾವರಣ

ಹೊಸದಿಗಂತ ಡಿಜಿಟಲ್ ಡೆಸ್ಕ್: ನಾಡಹಬ್ಬ ಮೈಸೂರು ದಸರಾ ಈ ಬಾರಿ ಕರಾವಳಿಯ ಮಣ್ಣಿನ ಸೊಗಡನ್ನು ತನ್ನ ಅಂಗಳಕ್ಕೆ ಆಹ್ವಾನಿಸಿದೆ. ಕರಾವಳಿ ಕರ್ನಾಟಕದ ಸಾಂಪ್ರದಾಯಿಕ ಕ್ರೀಡೆಯಾದ ಕಂಬಳ ಮೊದಲ ಬಾರಿಗೆ ಮೈಸೂರು ದಸರಾ ಸಂಭ್ರಮದ ಭಾಗವಾಗಿದ್ದು, ಭಾನುವಾರ ಸಾತಗಳ್ಳಿಯ ವಿಟಿಯು ಕಾಲೇಜು ಸಮೀಪ ಕಂಬಳಕ್ಕೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಯತೀಂದ್ರ ಸಿದ್ದರಾಮಯ್ಯ ಚಾಲನೆ ನೀಡಿದರು. ಕರಾವಳಿಯ ಸಂಸ್ಕೃತಿಗೆ ದಸರಾ ವೇದಿಕೆ ಕರಾವಳಿ ಭಾಗದ, ವಿಶೇಷವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಸಾಂಪ್ರದಾಯಿಕ ಕ್ರೀಡೆಯನ್ನು ರಾಜ್ಯದ ಇತರ ಭಾಗಗಳ ಜನರಿಗೆ […] The post ದಸರಾ ಅಂಗಳದಲ್ಲಿ ಕಂಬಳದ ಕಹಳೆ: ಮೈಸೂರಿನಲ್ಲಿ ಕರಾವಳಿಯ ಸಂಸ್ಕೃತಿಯ ಅನಾವರಣ appeared first on ONLINE.

ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜ*ನ್ಯ ಆರೋಪ: ಚರ್ಚ್ ಪಾದ್ರಿಯ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಪ್ರಾಪ್ತ ಬಾಲಕನ ಮೇಲೆ ದೀರ್ಘಕಾಲದಿಂದ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಮಂಗಳೂರು ದಕ್ಷಿಣ ಠಾಣೆ ಪೊಲೀಸರು ಚರ್ಚ್ ಪಾದ್ರಿ ಸೈಪ್ರಿಯನ್ ಪಿಂಟೋ ಅವರನ್ನು ಬಂಧಿಸಿದ್ದಾರೆ. ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿದ್ದ ಆರೋಪಿಯನ್ನು ಸಂಬಂಧಿಕರ ಮನೆಯೊಂದರಿಂದ ವಶಕ್ಕೆ ಪಡೆಯಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಪ್ರಾರ್ಥನೆಗೆ ಬರುತ್ತಿದ್ದ ಬಾಲಕನಿಗೆ ಕಿರುಕುಳದ ಆರೋಪ ಬಾಲಕನು ವೇಲೆನ್ಸಿಯಾದ ಸೇಂಟ್ ವಿನ್ಸೆಂಟ್ ಫೆರರ್ ಚರ್ಚ್‌ಗೆ ನಿಯಮಿತವಾಗಿ ಪ್ರಾರ್ಥನೆಗಾಗಿ ಭೇಟಿ ನೀಡುತ್ತಿದ್ದ. ಈ ಪರಿಚಯದ […] The post ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜ*ನ್ಯ ಆರೋಪ: ಚರ್ಚ್ ಪಾದ್ರಿಯ ಬಂಧನ appeared first on ONLINE.

‘ಸಿದ್ದರಾಮಯ್ಯ ಇಲ್ಲದಿದ್ದರೆ ಕಾಂಗ್ರೆಸ್ ಮುಗಿದು ಹೋಗುತ್ತಿತ್ತು’: ಹೆಚ್‌.ಡಿ ಕುಮಾರಸ್ವಾಮಿ

ಹಾಸನ: ಸಿದ್ದರಾಮಯ್ಯ (Siddaramaiah) ಇಲ್ಲದೇ ಹೋಗಿದ್ದರೆ ಕಾಂಗ್ರೆಸ್ (Congress) ಯಾವತ್ತೋ ಮುಗಿದು ಹೋಗುತ್ತಿತ್ತು ಎಂದು ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ (H.D Kumaraswamy) ಹೇಳಿದ್ದಾರೆ. ಹಾಸನದಲ್ಲಿ (Hassan) ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾನು ಸಿದ್ದರಾಮಯ್ಯ ಅವರ ವಿರುದ್ಧ ರಾಜಕೀಯವಾಗಿ ದೊಡ್ಡಮಟ್ಟದಲ್ಲಿ ಹೋರಾಟ ಮಾಡಿದ್ದೇನೆ. ಆದರೆ ಈಗ ಅವರನ್ನು ಮುಗಿಸಲು ಏನೆಲ್ಲಾ ನಡೆದಿದೆ ಎಂದು ನೋಡುತ್ತಿದ್ದೀರಿ. ಸಿದ್ದರಾಮಯ್ಯ ಇಲ್ಲದೇ ಹೋಗಿದ್ದರೆ ಕಾಂಗ್ರೆಸ್ ಯಾವತ್ತೋ ಮುಗಿದು ಹೋಗುತ್ತಿತ್ತು ಎಂದಿದ್ದಾರೆ. ಸ್ಟಿಂಗ್ ಆಪರೇಷನ್ ವಿವಾದ ಸ್ಟಿಂಗ್ ಆಪರೇಷನ್ (Sting Operation) […] Source

ಭಾರತ ತಂಡದಲ್ಲಿ ಸಿಗದ ಜಾಗ, ರಣಜಿ ಪಂದ್ಯಕ್ಕೂ ಶಮಿ ಗೈರು: ಕಂಗೆಟ್ಟ ಬೆಂಗಾಲ್ ಬೌಲಿಂಗ್ ಪಡೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತೀಯ ಕ್ರಿಕೆಟ್ ತಂಡದ ಹಿರಿಯ ಹಾಗೂ ವೇಗದ ಬೌಲರ್ ಮೊಹಮ್ಮದ್ ಶಮಿ, ರವಿವಾರ ನವದೆಹಲಿಯ ಪಾಲಂ ಮೈದಾನದಲ್ಲಿ ಆರಂಭವಾದ ರಣಜಿ ಟ್ರೋಫಿ ಪಂದ್ಯದಿಂದ ದಿಢೀರನೆ ಹೊರಗುಳಿದಿದ್ದಾರೆ. ಸರ್ವಿಸಸ್ ವಿರುದ್ಧದ ಈ ನಿರ್ಣಾಯಕ ಪಂದ್ಯದಲ್ಲಿ ಬಂಗಾಳ ತಂಡದ ಆಡುವ ಹನ್ನೊಂದರ ಬಳಗದಲ್ಲಿ ಶಮಿ ಕಣಕ್ಕಿಳಿಯಬೇಕಿತ್ತು. ಆದರೆ ಮುಂಬರುವ ನ್ಯೂಝಿಲೆಂಡ್ ಸರಣಿಗೆ ಭಾರತ ತಂಡದಿಂದ ಅವರನ್ನು ಕೈಬಿಟ್ಟ ಬೆನ್ನಲ್ಲೇ ಶಮಿ ಈ ನಿರ್ಧಾರ ತಳೆದಿರುವುದು ಕ್ರಿಕೆಟ್ ಅಂಗಳದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಅಕ್ಟೋಬರ್ 16 ರಂದು […] The post ಭಾರತ ತಂಡದಲ್ಲಿ ಸಿಗದ ಜಾಗ, ರಣಜಿ ಪಂದ್ಯಕ್ಕೂ ಶಮಿ ಗೈರು: ಕಂಗೆಟ್ಟ ಬೆಂಗಾಲ್ ಬೌಲಿಂಗ್ ಪಡೆ! appeared first on ONLINE.

ಬೆಂಗಳೂರಿಗರ ಗಮನಕ್ಕೆ: ಅಕ್ಟೋಬರ್ 20, 21ರಂದು ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

ಬೆಂಗಳೂರು: ನಗರದ ಹಲಸೂರು ಕೆರೆಯಲ್ಲಿ ಅಕ್ಟೋಬರ್ 20 ಮತ್ತು 21ರಂದು ದುರ್ಗಾ ದೇವಿಯ ವಿಗ್ರಹಗಳ ವಿಸರ್ಜನಾ ಮಹೋತ್ಸವ ಮತ್ತು ವೈಭವದ ಮೆರವಣಿಗೆಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಹಾಗೂ ಸಂಚಾರ ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ಬೆಂಗಳೂರು ಸಂಚಾರ ಪೊಲೀಸರು (BTP) ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿರ್ಬಂಧ ಹಾಗೂ ಮಾರ್ಗ ಬದಲಾವಣೆ ಮಾಡಿ ಮಹತ್ವದ ಸೂಚನೆ ಹೊರಡಿಸಿದ್ದಾರೆ. ಮೆರವಣಿಗೆ ಹಿನ್ನೆಲೆ ದುರ್ಗಾಪೂಜಾ ಮಹೋತ್ಸವದ ಕೊನೆಯ ಹಂತವಾಗಿ ವಿವಿಧ ಪೂಜಾ ಸಮಿತಿಗಳು ಮತ್ತು ಭಕ್ತಾದಿಗಳು ತಾಯಿಯ ವಿಗ್ರಹಗಳನ್ನು […] Source

ಕ್ಯಾನ್ಸರ್ ರೋಗಿಗಳಿಗೆ ಕೇಂದ್ರದಿಂದ ಬಿಗ್ ರಿಲೀಫ್; 137 ಔಷಧಿಗಳ ಬೆಲೆ ಶೇ. 70 ರಷ್ಟು ಇಳಿಕೆ

ನವದೆಹಲಿ: ಕ್ಯಾನ್ಸರ್ ಚಿಕಿತ್ಸೆಯ ವೆಚ್ಚದಿಂದ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ರೋಗಿಗಳು ಮತ್ತು ಅವರ ಕುಟುಂಬಗಳಿಗೆ ನೆಮ್ಮದಿ ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ರಾಷ್ಟ್ರೀಯ ಔಷಧ ಬೆಲೆ ಪ್ರಾಧಿಕಾರ (NPPA) ಒಟ್ಟು 137 ಕ್ಯಾನ್ಸರ್ ಔಷಧಿಗಳ ವ್ಯಾಪಾರ ಲಾಭಾಂಶವನ್ನು ಗರಿಷ್ಠ ಶೇ. 30ಕ್ಕೆ ಮಿತಿಗೊಳಿಸಿದೆ. ಇದರಿಂದ ಆಯ್ದ ಔಷಧಿಗಳ ಗರಿಷ್ಠ ಚಿಲ್ಲರೆ ಬೆಲೆಯಲ್ಲಿ (MRP) ಶೇ. 70ರವರೆಗೆ ಇಳಿಕೆಯಾಗುವ ನಿರೀಕ್ಷೆಯಿದೆ. ಪರಿಷ್ಕೃತ ದರಗಳು ನವೆಂಬರ್ 9ರಿಂದ ಜಾರಿಗೆ ಬರಲಿವೆ ಎಂದು ನೀಡಿರುವ ಮಾಹಿತಿಯಲ್ಲಿ ತಿಳಿಸಲಾಗಿದೆ. […] Source

ದಾಂಡಿಯಾ ಕಾರ್ಯಕ್ರಮದ ವೇಳೆ ದುರಂತ: ಲೈಟಿಂಗ್ ಕಂಬ ಬಿದ್ದು ವಿದ್ಯಾರ್ಥಿನಿ ಸಾ*ವು

ಹೈದರಾಬಾದ್: ದಾಂಡಿಯಾ (Dandiya) ಸಂಭ್ರಮಾಚರಣೆಯ ವೇಳೆ ಲೈಟಿಂಗ್ ಕಂಬ ಬಿದ್ದು (Lighting Structure Collapse) ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೈದರಾಬಾದ್‌ನ ಹೊರವಲಯದ ನಾದರ್‌ಗುಲ್‌ನಲ್ಲಿರುವ ಎಂವಿಎಸ್‌ಆರ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದಿದೆ. ಘಟನೆಯಲ್ಲಿ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ. ದಾಂಡಿಯಾ ಸಂಭ್ರಮದ ನಡುವೆ ಸಂಭವಿಸಿದ ದುರಂತ ನವರಾತ್ರಿ ಹಿನ್ನೆಲೆಯಲ್ಲಿ ಎಂವಿಎಸ್‌ಆರ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ದಾಂಡಿಯಾ ನೃತ್ಯ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾಲೇಜಿನ ಮೈದಾನದಲ್ಲಿ ನೂರಾರು ವಿದ್ಯಾರ್ಥಿಗಳು ಸಂಭ್ರಮದಿಂದ ನೃತ್ಯ ಮಾಡುತ್ತಿದ್ದರು. […] Source